Close Menu
    What's Hot

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
    ರಾಷ್ಟ್ರೀಯ

    20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

    adminBy adminJuly 18, 2026No Comments2 Mins Read

    ನವದೆಹಲಿ:ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್  ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

    ದೆಹಲಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಹೈಕೋರ್ಟ್ ನಿರ್ದೇಶನ ಹಾಗೂ ವೈದ್ಯಕೀಯ ತಜ್ಞರ ಸಲಹೆಯಂತೆ ವಾಂಗ್ಚುಕ್ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಾಗಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಲ ಪ್ರತಿಭಟನಾಕಾರರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ಆದರೆ, ಸಂಪೂರ್ಣ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಆರೋಪ

    ಇನ್ನೊಂದೆಡೆ, ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಮುಖಂಡರು ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗಿದೆ. ಲಾಠಿ ಚಾರ್ಜ್ ಮಾಡಲಾಗಿದೆ ಮತ್ತು ವಾಂಗ್ಚುಕ್ ಅವರನ್ನು ಬಲವಂತವಾಗಿ ಕರೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ಲಾಠಿ ಚಾರ್ಜ್ ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದೇಕೆ?

    ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಜೂನ್ 20ರಿಂದ ಪ್ರತಿಭಟನೆ ನಡೆಯುತ್ತಿದೆ. ಸೋನಮ್ ವಾಂಗ್ಚುಕ್ ಜೂನ್ 28 ರಿಂದ ಈ ಹೋರಾಟದಲ್ಲಿ ತೊಡಗಿಕೊಂಡಿದ್ದು, ಅಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.

    ಹೋರಾಟಗಾರರ ಬೇಡಿಕೆ ಏನು?

    ಪರೀಕ್ಷಾ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

    ಉಪವಾಸದ 20ನೇ ದಿನ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ವಾಂಗ್ಚುಕ್, ತಮ್ಮ ದೇಹದ ತೂಕ ಮತ್ತು ಶಕ್ತಿ ಗಣನೀಯವಾಗಿ ಕುಸಿದಿರುವುದಾಗಿ ಹೇಳಿದ್ದರು. ಇದೇ ವೇಳೆ ಜುಲೈ 20ರಂದು ಸಂಸತ್‌ ಚಲೋ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದರು. ಜನರ ಬೆಂಬಲವೇ ಈ ಹೋರಾಟದ ನಿಜವಾದ ಶಕ್ತಿ ಎಂದು ಅವರು ಹೇಳಿದ್ದರು.




    #national
    Previous Articleಸಂಗಾತಿಯ ಮೊಬೈಲ್ ಅನುಮತಿಯಿಲ್ಲದೆ ಪರಿಶೀಲಿಸಿದರೆ ಬೀಳಬಹುದು ಕೇಸ್ !
    Next Article ಸುಳ್ಳು ಪೋಸ್ಟ್‌ಗಳಿಗೆ ಬಿಗಿ ಕ್ರಮ: ಬಂಟ್ವಾಳದಲ್ಲಿ 3 ಪ್ರತ್ಯೇಕ ಎಫ್‌ಐಆರ್

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.