Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಶಿವಂ ಅಸೋಸಿಯೇಟ್ಸ್ ಹೂಡಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ₹427 ಕೋಟಿ ಮೌಲ್ಯದ ಆಸ್ತಿ ಇ.ಡಿ. ವಶಕ್ಕೆ
    ಅಪರಾಧ

    ಶಿವಂ ಅಸೋಸಿಯೇಟ್ಸ್ ಹೂಡಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ₹427 ಕೋಟಿ ಮೌಲ್ಯದ ಆಸ್ತಿ ಇ.ಡಿ. ವಶಕ್ಕೆ

    adminBy adminOctober 31, 2026No Comments2 Mins Read

    ಬೆಂಗಳೂರು/ಬೆಳಗಾವಿ: ಶಿವಂ ಅಸೋಸಿಯೇಟ್ಸ್​ ಮಾಲೀಕ ಶಿವಾನಂದ ನೀಲಣ್ಣನವರ್‌ಗೆ ಜಾರಿ ನಿರ್ದೇಶನಾಲಯ (ಇ.ಡಿ) ಬಿಗ್​ ಶಾಕ್​ ನೀಡಿದೆ. ಹೂಡಿಕೆದಾರರಿಂದ ಬರೋಬ್ಬರಿ 2,459 ಕೋಟಿ ರೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 427 ಕೋಟಿ ರೂ ಮೌಲ್ಯದ ಆಸ್ತಿಯನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಫಿಕ್ಸೆಡ್​​ ಡೆಪಾಸಿಟ್​, ಬ್ಯಾಂಕ್​​ ಖಾತೆಗಳಲ್ಲಿನ ಹಣ, ಷೇರು ಹೂಡಿಕೆ, ಕೃಷಿ ಜಮೀನು ಹಾಗೂ ಬಂಗಲೆ ಸೇರಿದಂತೆ ವಿವಿಧ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

    47 ಬ್ಯಾಂಕ್ ಖಾತೆಗಳಲ್ಲಿದ್ದ 44 ಕೋಟಿ ರೂ ಸೀಜ್

    ಇಡಿ ಅಧಿಕಾರಿಗಳು ಒಟ್ಟು 427 ಕೋಟಿ ರೂ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಈ ಪೈಕಿ 367 ಕೋಟಿ ರೂ ಮೌಲ್ಯದ ಫಿಕ್ಸೆಡ್​ ಡೆಪಾಸಿಟ್​ಗಳು, 47 ಬ್ಯಾಂಕ್​ ಖಾತೆಗಳಲ್ಲಿದ್ದ 44 ಕೋಟಿ ರೂ ಹಣ, 13 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಗಳು ಹಾಗೂ ಷೇರು ಮಾರುಕಟ್ಟೆಯಲ್ಲಿನ 1.31 ಕೋಟಿ ರೂ ಹೂಡಿಕೆ ಸೇರಿದೆ.

    ಶಿವಂ ಅಸೋಸಿಯೇಟ್ಸ್ ಸಂಸ್ಥೆಯು 35 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಂದ ಬರೋಬ್ಬರಿ 2,459 ಕೋಟಿ ರೂ ಹಣ ಸಂಗ್ರಹಿಸಿರುವುದು ಇಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವುದು ತಿಳಿದುಬಂದ ಹಿನ್ನೆಲೆ ಇ.ಡಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ.

    ಆಗಸ್ಟ್‌ನಲ್ಲಿ 8 ಸ್ಥಳಗಳಲ್ಲಿ ಇಡಿ ದಾಳಿ

    ಆಗಸ್ಟ್‌ನಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಒಟ್ಟು ಎಂಟು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಕೈಬರಹದ ಲೆಕ್ಕಪತ್ರಗಳು, ಮೊಬೈಲ್​ಗಳು ಸೇರಿದಂತೆ ಹಲವು ಡಿಜಿಟಲ್​​ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹಣವನ್ನು ಹೇಗೆ ಸಂಗ್ರಹಿಸಲಾಗಿದೆ, ಯಾವ ರೀತಿ ವರ್ಗಾವಣೆ ಮಾಡಲಾಗಿದೆ ಮತ್ತು ಎಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಕುರಿತು ತನಿಖೆ ಮಾಡಲಾಗಿತ್ತು.

    ಇನ್ನು ಪ್ರಕರಣ ಸಂಬಂಧ ಶಿವಾನಂದ ನೀಲಣ್ಣನವರ್​​ರನ್ನು ಆಗಸ್ಟ್ 8ರಂದು ಬಂಧಿಸಲಾಗಿತ್ತು. ಬಳಿಕ ತನಿಖೆ ಮುಂದುವರಿಸಿದ್ದ ಇಡಿ ಅಧಿಕಾರಿಗಳು, ಅಕ್ಟೋಬರ್ 9ರಂದು ಶಿವಾನಂದ ನೀಲಣ್ಣನವರ್ ಸೇರಿದಂತೆ ಐವರ ವಿರುದ್ಧ ಮಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

    ಷೇರು ಮಾರುಕಟ್ಟೆ ಹೂಡಿಕೆಯಿಂದ 185.95 ಕೋಟಿ ರೂ ನಷ್ಟ

    ಹೂಡಿಕೆದಾರರಿಂದ ಸಂಗ್ರಹಿಸಿದ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿತ್ತು. ಈ ಹೂಡಿಕೆಗಳಿಂದ 185.95 ಕೋಟಿ ರೂ ನಿವ್ವಳ ನಷ್ಟ ಉಂಟಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಅಲ್ಲದೆ, ಸುಮಾರು 25 ಕೋಟಿ ರೂ ಹಣವನ್ನು ಎರಡು ಸಹಕಾರಿ ಕ್ರೆಡಿಟ್ ಸೊಸೈಟಿಗಳ ಮೂಲಕ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ.

    ಸಹಚರರ ಹೆಸರಿನಲ್ಲಿ ಸಾಲ ಪಡೆದು ಜಮೀನು ಖರೀದಿ

    ತನಿಖೆ ವೇಳೆ ಹಣ ವರ್ಗಾವಣೆಗೆ ಸಂಬಂಧಿಸಿದ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಫಿಕ್ಸೆಡ್ ಡೆಪಾಸಿಟ್‌ಗಳನ್ನು ಸೃಷ್ಟಿಸಿ, ಅವುಗಳ ಆಧಾರದ ಮೇಲೆ ಸಹಚರರ ಹೆಸರಿನಲ್ಲಿ ಸಾಲ ಪಡೆಯಲಾಗಿತ್ತು. ಈ ಸಾಲದ ಹಣವನ್ನು ಜಮೀನು ಖರೀದಿಸಲು ಬಳಸಲಾಗಿದೆ ಎಂದು ಇಡಿ ತನಿಖೆಯಲ್ಲಿ ತಿಳಿದುಬಂದಿದೆ. ಇಷ್ಟೇ ಅಲ್ಲದೆ ಶಿವಾನಂದ ನೀಲಣ್ಣನವರ್ ಪತ್ನಿ ಸಂಗೀತಾ ಮತ್ತು ಮಗ ಸಿದ್ಧಾಂತ್​ ಬ್ಯಾಂಕ್ ಖಾತೆಗಳಿಗೂ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಇದೀಗ ಪ್ರಕರಣದ ತನಿಖೆಯ ಭಾಗವಾಗಿ ಒಟ್ಟು 427 ಕೋಟಿ ರೂ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.




    #crime #karnataka
    Previous Articleರಕ್ಷಣೆ ನೀಡಬೇಕಾದ ಪೊಲೀಸರಿಂದಲೇ ದೌರ್ಜನ್ಯದ ಆರೋಪ; ಇನ್ಸ್‌ಪೆಕ್ಟರ್ ಸೇರಿ ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
    Next Article ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ; ಮೇಲ್ಮನವಿ ಅರ್ಜಿ ತಿರಸ್ಕಾರ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.