ಮಂಗಳೂರು: ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 39 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಹಳೆಯಂಗಡಿಯ ಕದಿಕೆ ನಿವಾಸಿ ಇಮ್ತಿಯಾಜ್ ಎಂದು ಗುರುತಿಸಲಾಗಿದ್ದು, ಅವರು ಶಿಪ್ಪಿಂಗ್ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಪಣಂಬೂರಿನಲ್ಲಿರುವ ತನ್ನ ಕಚೇರಿಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ, ತೀವ್ರವಾಗಿ ಗಾಯಗೊಂಡಿದ್ದ ಇಮ್ತಿಯಾಜ್ ಅವರನ್ನು ಸ್ಥಳೀಯರು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು








