Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪ್ರಯಾಣಿಕಳ ಜೊತೆಗಿನ ಜಗಳ ದುರಂತ ಅಂತ್ಯ; ಚಲಿಸುವ ಬಸ್ಸಿನಿಂದ ತಳ್ಳಲ್ಪಟ್ಟ ಮಹಿಳಾ ಕಂಡಕ್ಟರ್ ಚಿಕಿತ್ಸೆ ಫಲಿಸದೆ ಸಾವು
    ಅಪರಾಧ

    ಪ್ರಯಾಣಿಕಳ ಜೊತೆಗಿನ ಜಗಳ ದುರಂತ ಅಂತ್ಯ; ಚಲಿಸುವ ಬಸ್ಸಿನಿಂದ ತಳ್ಳಲ್ಪಟ್ಟ ಮಹಿಳಾ ಕಂಡಕ್ಟರ್ ಚಿಕಿತ್ಸೆ ಫಲಿಸದೆ ಸಾವು

    adminBy adminNovember 4, 2026No Comments1 Min Read

    ಹೈದರಾಬಾದ್ : ಬಸ್ಸಿನಲ್ಲಿ ಪ್ರಯಾಣಿಕಳೊಂದಿಗೆ ಉಂಟಾದ ಸಣ್ಣ ಮಾತಿನ ಚಕಮಕಿಯ ವೇಳೆ ಬಸ್ಸಿನಿಂದ ಹೊರಗೆ ತಳ್ಳಲ್ಪಟ್ಟು ಬಸ್ಸಿನ ಚಕ್ರಗಳ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 24 ವರ್ಷದ ಯುವ ಮಹಿಳಾ ಕಂಡಕ್ಟರ್ ಪ್ರವಳಿಕಾ ಅವರು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ದಾರುಣವಾಗಿ ಮೃತಪಟ್ಟ ಪ್ರವಳಿಕಾ ಅವರು ತೆಲಂಗಾಣ ಸಾರಿಗೆ ಸಂಸ್ಥೆಯ ಮನುಗುರು ಡಿಪೋದಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

    ಕಳೆದ ತಿಂಗಳು ಅಕ್ಟೋಬರ್ 25 ರಂದು ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಅಶ್ವಪುರಂ ವ್ಯಾಪ್ತಿಯ ಮಿತ್ತಗುಡೆಮ್‌ನಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕಳೊಬ್ಬಳ ಜೊತೆ ಟಿಕೆಟ್ ವಿಷಯಕ್ಕೆ ಸಂಬಂಧಿಸಿದಂತೆ ಸಣ್ಣ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಮಹಿಳಾ ಪ್ರಯಾಣಿಕೆ ಕಂಡಕ್ಟರ್ ಪ್ರವಳಿಕಾ ಅವರನ್ನು ಬಸ್ಸಿನ ಬಾಗಿಲಿನಿಂದ ಆಚೆಗೆ ತಳ್ಳಿದ್ದಾಳೆ. ಪರಿಣಾಮವಾಗಿ ಪ್ರವಳಿಕಾ ಅವರು ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು, ಬಸ್ಸಿನ ಹಿಂಬದಿಯ ಚಕ್ರಗಳು ಆಕೆಯ ಎರಡೂ ಕಾಲುಗಳ ಮೇಲೆ ಹರಿದಿದ್ದವು. ತೀವ್ರ ರಕ್ತಸ್ರಾವದಿಂದ ಗಂಭೀರ ಗಾಯಗೊಂಡಿದ್ದ ಆಕೆಯನ್ನು ತಕ್ಷಣವೇ ಹೈದರಾಬಾದ್‌ನ ಪ್ರಸಿದ್ಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ತಿಳಿದ ತಕ್ಷಣ ತೆಲಂಗಾಣ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಹಾಗೂ ಹಿರಿಯ ಆರ್‌ಟಿಸಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಅತ್ಯುತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದರು.

    ಆಕೆಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು ಎಂದು ಎಲ್ಲರೂ ನಿರೀಕ್ಷಿಸಿದ್ದರಾದರೂ, ತೀವ್ರ ವೈದ್ಯಕೀಯ ತೊಡಕು ಉಂಟಾಗಿ ವೈದ್ಯರ ಸತತ ಪ್ರಯತ್ನಗಳು ವ್ಯರ್ಥವಾಗಿ ಮಂಗಳವಾರ ಪ್ರವಳಿಕಾ ಮೃತಪಟ್ಟಿದ್ದಾರೆ. ಮಹಿಳಾ ಕಂಡಕ್ಟರ್ ಕರ್ತವ್ಯದಲ್ಲಿದ್ದಾಗಲೇ ಅಮಾನವೀಯವಾಗಿ ಆಕೆಯನ್ನು ತಳ್ಳಿ ಸಾವಿಗೆ ಕಾರಣರಾದ ಆರೋಪಿ ಮಹಿಳೆಯ ವಿರುದ್ಧ BNS 2023 ರ ಕಠಿಣ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಆರ್‍ಟಿಸಿ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ನವೆಂಬರ್ 4) ಮನುಗುರು ಡಿಪೋ ಬಂದ್‌ಗೆ ಕರೆ ನೀಡಿದೆ.




    #crime #national
    Previous Articleಮೈಸೂರು ಅರಮನೆ ನಮ್ಮ ಖಾಸಗಿ ಸ್ವತ್ತು; ಸರ್ಕಾರದ ಔದಾರ್ಯದಿಂದ ವಾಸವಿಲ್ಲ: ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
    Next Article ಸ್ಟಿಂಗ್ ಆಪರೇಷನ್‌ಗಾಗಿ ಯುವತಿಗೆ ₹4 ಲಕ್ಷ ಆಮಿಷ; ಸಿದ್ದರಾಮಯ್ಯ ಪ್ರಕರಣದ ತನಿಖೆಯಲ್ಲಿ ಹೊಸ ಸಂಗತಿ ಬಹಿರಂಗ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.