Close Menu
    What's Hot

    ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಕ್ಕೆ ಹೊಸ ವೇಗ; ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಪ್ರಶಾಂತಿ ಕುಟೀರದ ವೇದಿಕೆಯಲ್ಲಿ ವರನಟನ ಸ್ಮರಣೆ; ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನು ಶ್ಲಾಘಿಸಿದ ಮೋದಿ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಕಾಂಕ್ರೀಟ್ ಹಾಕುವ ವೇಳೆ ಕುಸಿದ ಮನೆಯ ಸ್ಲ್ಯಾಬ್; ಐವರ ರಕ್ಷಣೆ, ಓರ್ವ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    ರಾಷ್ಟ್ರೀಯ

    ಕಾಂಕ್ರೀಟ್ ಹಾಕುವ ವೇಳೆ ಕುಸಿದ ಮನೆಯ ಸ್ಲ್ಯಾಬ್; ಐವರ ರಕ್ಷಣೆ, ಓರ್ವ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

    adminBy adminNovember 7, 2026No Comments1 Min Read

    ಲಕ್ನೋ: ಉತ್ತರ ಪ್ರದೇಶದ  ಗಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಿಕ್ರಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

    ಘಟನೆಯಲ್ಲಿ ಐವರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೋದಿನಗರ ಶಾಸಕ ಮಂಜು ಶಿವಾಚ್, ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಸ್ಲ್ಯಾಬ್‌ಗೆ ಕಾಂಕ್ರೀಟ್ ಹಾಕುವ ವೇಳೆ ಈ ಅವಘಡ ಸಂಭವಿಸಿದೆ. ಶಟರಿಂಗ್ ಸ್ಥಳಾಂತರಗೊಂಡಿದ್ದರಿಂದ ಸ್ಲ್ಯಾಬ್ ಕುಸಿದಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ತಿಳಿಸಿದ್ದಾರೆ.

    ದೀಪಾವಳಿ ದಿನವೂ ದಿನಗೂಲಿ ಸಂಪಾದನೆಯ ನಿರೀಕ್ಷೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆರರಿಂದ ಏಳು ಕಾರ್ಮಿಕರು ಸ್ಥಳದಲ್ಲಿದ್ದಾಗ ಸ್ಲ್ಯಾಬ್ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ ಎಂದು ಶಾಸಕ ಮಾಹಿತಿ ನೀಡಿದ್ದಾರೆ.

    ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.

    ಈ ಕುರಿತು ಮಾತನಾಡಿದ ಡಿಸಿಪಿ (ಗ್ರಾಮೀಣ) ಸುರೇಂದ್ರನಾಥ್ ತಿವಾರಿ, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಅವಶೇಷಗಳಡಿ ಯಾರೂ ಉಳಿದಿಲ್ಲ ಎಂದು ತಿಳಿಸಿದ್ದಾರೆ.

    ಇನ್ನು ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.




    #national
    Previous Articleಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು-ಚೂರಿ ಇರುವ ಪೋಸ್ಟ್ ಕವರ್‌ಗಳ ಡೆಲಿವರಿ; ಎನ್‌ಎಸ್‌ಯುಐ ಕಾರ್ಯಕರ್ತರ ಆಗಮನದಿಂದ ಹೈಡ್ರಾಮಾ
    Next Article ರಸ್ತೆಗಳಲ್ಲಿ ಕೊಲ್ಲುವ ಯಂತ್ರಗಳಂತೆ ವರ್ತಿಸುತ್ತಿರುವ ಖಾಸಗಿ ಬಸ್‌ಗಳು; ಕೇರಳ ಹೈಕೋರ್ಟ್ ಕಿಡಿ

    Related Posts

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಕ್ಕೆ ಹೊಸ ವೇಗ; ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಪ್ರಶಾಂತಿ ಕುಟೀರದ ವೇದಿಕೆಯಲ್ಲಿ ವರನಟನ ಸ್ಮರಣೆ; ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನು ಶ್ಲಾಘಿಸಿದ ಮೋದಿ

    November 13, 2026

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಕ್ಕೆ ಹೊಸ ವೇಗ; ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

    November 13, 2026

    ಪ್ರಶಾಂತಿ ಕುಟೀರದ ವೇದಿಕೆಯಲ್ಲಿ ವರನಟನ ಸ್ಮರಣೆ; ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನು ಶ್ಲಾಘಿಸಿದ ಮೋದಿ

    November 13, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.