Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಚೀನಾ ಪರ ಬೇಹುಗಾರಿಕೆ ಶಂಕೆ ನಡುವೆ ಎನ್‌ವಿಡಿಯಾ ಸಿಇಒ ವಿವಾದ; ಸ್ವತಂತ್ರ ತನಿಖೆಗೆ ಆಡಳಿತ ಮಂಡಳಿ ನಿರ್ಧಾರ
    ಅಂತರಾಷ್ಟ್ರೀಯ

    ಚೀನಾ ಪರ ಬೇಹುಗಾರಿಕೆ ಶಂಕೆ ನಡುವೆ ಎನ್‌ವಿಡಿಯಾ ಸಿಇಒ ವಿವಾದ; ಸ್ವತಂತ್ರ ತನಿಖೆಗೆ ಆಡಳಿತ ಮಂಡಳಿ ನಿರ್ಧಾರ

    adminBy adminNovember 9, 2026No Comments2 Mins Read

    ಬೀಜಿಂಗ್‌: ಎನ್‌ವಿಡಿಯಾ ಕಂಪನಿಯ ಸಿಇಒ ಜೆನ್ಸನ್ ಹುವಾಂಗ್  ಅವರು ಚೀನಾದ ಉದ್ಯಮಿ ಆಲಿಸ್ ಹುವಾಂಗ್ ಅವರೊಂದಿಗಿನ ವಿವಾಹೇತರ ಸಂಬಂಧದ ಬಗ್ಗೆ ಪತ್ನಿ ಹಾಗೂ ಮಕ್ಕಳಲ್ಲಿ ಕ್ಷಮೆಯಾಚಿಸಿದ್ದಾರೆ. ಆಲಿಸ್ ಹುವಾಂಗ್ ಅವರು ಚೀನಾ ಸರ್ಕಾರದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದರೆಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಈ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಆರೋಪಗಳ ಬೆನ್ನಲ್ಲೇ ಎನ್‌ವಿಡಿಯಾ ಕಂಪನಿಯ ಆಡಳಿತ ಮಂಡಳಿ ಸ್ವತಂತ್ರ ತನಿಖೆಗೆ ಮುಂದಾಗಿದೆ.

    63 ವರ್ಷದ ಜೆನ್ಸನ್ ಹುವಾಂಗ್ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದು, ತಮ್ಮ ನಡೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ. ಕಂಪನಿಯ ಉದ್ಯೋಗಿಗಳಿಗೆ ಕಳುಹಿಸಿದ ಸಂದೇಶದಲ್ಲಿ, ʻನಾನು ಮಾಡಿದ ಕೆಲಸಕ್ಕೆ ಯಾವುದೇ ಕ್ಷಮೆಯಿಲ್ಲ. ಇದಕ್ಕಾಗಿ ನಾನು ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆʼ ಎಂದು ಕೂಡ ತಿಳಿಸಿದ್ದಾರೆ.

    ಅಲ್ಲದೆ, ಕಂಪನಿಯ ಉದ್ಯೋಗಿಗಳು, ಆಡಳಿತ ಮಂಡಳಿ ಹಾಗೂ ಷೇರುದಾರರ ಮೇಲಿನ ತಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವಲ್ಲಿ ವಿಫವಾಗಿದ್ದೇನೆ. ಈ ಘಟನೆಯಿಂದ ಕಳೆದುಕೊಂಡಿರುವ ವಿಶ್ವಾಸವನ್ನ ಮರಳಿ ಗಳಿಸಲು ಸಂಪೂರ್ಣ ಜವಾಬ್ದಾರಿ ವಹಿಸುವುದಾಗಿ ಭರವಸೆ ನೀಡಿದ್ದಾರೆ.

    ಈ ಬೆನ್ನಲ್ಲೇ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸಲು ಎನ್‌ವಿಡಿಯಾ ಆಡಳಿತ ಮಂಡಳಿ ನಿರ್ಧರಿಸಿದೆ. ಸ್ವತಂತ್ರ ನಿರ್ದೇಶಕರ ಸಮಿತಿಯ ಮೇಲ್ವಿಚಾರಣೆಯಲ್ಲಿ ಹೊರಗಿನ ಕಾನೂನು ತಜ್ಞರ ನೆರವಿನೊಂದಿಗೆ ತನಿಖೆ ನಡೆಯಲಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಜೆನ್ಸನ್ ಹುವಾಂಗ್ ಒಪ್ಪಿಕೊಂಡಿದ್ದಾರೆ.

    ರಾಷ್ಟ್ರೀಯ ಭದ್ರತೆ ಅಥವಾ ಎನ್‌ವಿಡಿಯಾದ ರಹಸ್ಯ ಮಾಹಿತಿಗೆ ಧಕ್ಕೆಯಾಗಿದೆ ಎಂಬುದಕ್ಕೆ ಪ್ರಸ್ತುತ ಯಾವುದೇ ಕಾರಣ, ಆಧಾರ ಕಾಣುತ್ತಿಲ್ಲ. ಆದರೂ ಲಭ್ಯವಿರುವ ಎಲ್ಲ ಮಾಹಿತಿಗಳನ್ನ ತನಿಖೆಯ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಕಂಪನಿಯ ಆಡಳಿತ ಮಂಡಳಿ ತಿಳಿಸಿದೆ. ಅಮೆರಿಕದ ರಾಷ್ಟ್ರೀಯ ಹಾಗೂ ಆರ್ಥಿಕ ಭದ್ರತೆಯನ್ನ ರಕ್ಷಿಸುವುದು ಕಂಪನಿಯ ಪ್ರಮುಖ ಆದ್ಯತೆಯಾಗಿದೆ ಎಂದು ಸ್ಪಷ್ಟಪಡಿಸಿದೆ.

    ಚೀನಾ ಪರ ಬೇಹುಗಾರಿಕೆ ಆರೋಪ
    ದಿ ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿದ ವರದಿ ಬಳಿಕ ಈ ವಿವಾದ ಮುನ್ನೆಲೆಗೆ ಬಂದಿದೆ. ಅಮೆರಿಕದ ಗುಪ್ತಚರ ಅಧಿಕಾರಿಗಳು ಆಲಿಸ್ ಹುವಾಂಗ್ ಅವರು ಚೀನಾ ಸರ್ಕಾರದ ಪರವಾಗಿ ಗುಪ್ತಚರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆಲಿಸ್ ಹುವಾಂಗ್ ಅವರು ಜೆನ್ಸನ್ ಹುವಾಂಗ್ ಅವರ ಸಂಬಂಧಿಕರಲ್ಲ. ಈ ಹಿಂದೆ ಅವರು ಸಿಂಗಾಪುರ ಮೂಲದ ಡೇಟಾ ಸೆಂಟರ್ ಕಂಪನಿ ಮೆಗಾಸ್ಪೀಡ್  ಜೊತೆ ಸಂಬಂಧ ಹೊಂದಿದ್ದರು. ಅಮೆರಿಕದ ರಫ್ತು ನಿರ್ಬಂಧಗಳನ್ನ ಉಲ್ಲಂಘಿಸಿ, ಚೀನಾಕ್ಕೆ ಅತ್ಯಾಧುನಿಕ ಎಐ ಚಿಪ್‌ಗಳನ್ನ ತಲುಪಿಸಲು ಮೆಗಾಸ್ಪೀಡ್ ನೆರವು ನೀಡಿರಬಹುದು ಎಂಬ ಶಂಕೆಯೂ ಈ ಹಿಂದೆ ವ್ಯಕ್ತವಾಗಿತ್ತು.

    ಕಳೆದ ವರ್ಷವೇ ಆಲಿಸ್ ಹುವಾಂಗ್ ಅವರು ಚೀನಾದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತಿಳಿಸಲಾಗಿತ್ತು. ಈ ಆರೋಪಗಳ ಹಿನ್ನೆಲೆ ಅಮೆರಿಕದ ಸಂಸದರೂ ಎನ್‌ವಿಡಿಯಾ ಮುಖ್ಯಸ್ಥರಿಂದ ಸ್ಪಷ್ಟನೆ ಕೇಳಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಆತಂಕಗಳನ್ನ ಉಲ್ಲೇಖಿಸಿರುವ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಹಿರಿಯ ರಿಪಬ್ಲಿಕನ್ ಸದಸ್ಯರು, ಈ ತಿಂಗಳಲ್ಲೇ ಜೆನ್ಸನ್ ಹುವಾಂಗ್ ಅವರು ಕಾಂಗ್ರೆಸ್ ಮುಂದೆ ಮಾಹಿತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.




    #crime International
    Previous Articleಉಡುಪಿ: ಡಿಜಿ–ಐಜಿಪಿ ಆದೇಶದ ಬೆನ್ನಲ್ಲೇ ಉಡುಪಿ ಪೊಲೀಸರಿಂದ ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ
    Next Article ಮಂಗಳೂರಿನಲ್ಲಿ ಧರ್ಮಗುರು ವಿರುದ್ಧ ಎರಡನೇ ಪೋಕ್ಸೊ ಪ್ರಕರಣ; ಬಾಲಕನ ದೂರಿನ ಮೇರೆಗೆ ಎಫ್‌ಐಆರ್ ದಾಖಲು

    Related Posts

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.