Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ನಂದಿನಿ ಹಾಲಿನಲ್ಲಿ ಜೇಡ ಪತ್ತೆ ಆರೋಪ; ಡಾ. ಅಬ್ದುಲ್ ಕಲಾಂ ಸಂಬಂಧಿ ನೀಡಿದ ದೂರಿನ ಬೆನ್ನಲ್ಲೇ ಪರಿಶೀಲನೆ
    Uncategorized

    ನಂದಿನಿ ಹಾಲಿನಲ್ಲಿ ಜೇಡ ಪತ್ತೆ ಆರೋಪ; ಡಾ. ಅಬ್ದುಲ್ ಕಲಾಂ ಸಂಬಂಧಿ ನೀಡಿದ ದೂರಿನ ಬೆನ್ನಲ್ಲೇ ಪರಿಶೀಲನೆ

    adminBy adminNovember 10, 2026No Comments2 Mins Read

    ಬೆಂಗಳೂರು: ಹಾಲಿನ ದರ ಏರಿಕೆಯಿಂದಾಗಿ ಭಾರಿ ಸುದ್ದಿಯಲ್ಲಿದ್ದ ಕರ್ನಾಟಕ ಹಾಲು ಮಹಾಮಂಡಳಿಗೆ (ಕೆಎಂಎಫ್) ಈಗ ಮತ್ತೆ ಸುದ್ದಿಯಲ್ಲಿದೆ. ಅರ್ಧ ಲೀಟರ್​​ನ ನಂದಿನಿ ಹಸುವಿನ ಹಾಲಿನ ಪ್ಯಾಕೆಟ್‌ನಲ್ಲಿ ಸತ್ತ ಜೇಡ ಪತ್ತೆಯಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ಕೆಎಂಎಫ್​​ಗೆ ದೂರು ನೀಡಿದ್ದಾರೆ. ಈ ಘಟನೆ ಹಾಲಿನ ಸಂಸ್ಕರಣಾ ಘಟಕಗಳಲ್ಲಿನ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಬಗ್ಗೆಯೇ ಆತಂಕ ಮೂಡಿಸಿದೆ.

    ಪಾತ್ರೆಗೆ ಹಾಲು ಸುರಿಯುತ್ತಿದ್ದಾಗ ಸತ್ತ ಜೇಡ ಪತ್ತೆ

    ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಂಬಂಧಿ ನಾಗೂರ್ ರೋಜಾ ಅವರು ಭಾನುವಾರ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಫ್ರಿಡ್ಜ್‌ನಲ್ಲಿಟ್ಟಿದ್ದ ಹಾಲಿನ ಪ್ಯಾಕೆಟ್ ತೆರೆದು, ಕುದಿಸಲು ಪಾತ್ರೆಗೆ ಹಾಲು ಸುರಿಯುತ್ತಿದ್ದಾಗ ಅದರೊಂದಿಗೆ ಸಣ್ಣ ಸತ್ತ ಜೇಡವೊಂದು ಪತ್ತೆಯಾಗಿದೆ. ಇದನ್ನು ಕಂಡು ಆಘಾತವಾಯಿತು ಎಂದು ಅವರು ಹೇಳಿದ್ದಾರೆ. ಕಳೆದ ಸುಮಾರು ಎರಡು ದಶಕಗಳಿಂದ ತಮ್ಮ ಕುಟುಂಬ ನಂದಿನಿ ಹಾಲು ಮತ್ತು ಕೆಎಂಎಫ್‌ನ ಇತರ ಉತ್ಪನ್ನಗಳನ್ನು ಖರೀದಿಸುತ್ತಿದೆ. ಸಾಮಾನ್ಯವಾಗಿ ಹಾಲಿನ ಪ್ಯಾಕೆಟ್‌ಗಳನ್ನು ಮಾರಾಟಗಾರರಿಂದ ಮುಚ್ಚಿದ ಬಾಕ್ಸ್‌ನಲ್ಲಿ ಪಡೆಯಲಾಗುತ್ತದೆ. ಬಳಿಕ ನೀರಿನಲ್ಲಿ ತೊಳೆದು ಫ್ರಿಡ್ಜ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಈ ಬಾರಿಯೂ ಅದೇ ಕ್ರಮ ಅನುಸರಿಸಿದ ನಂತರ ಪ್ಯಾಕೆಟ್ ತೆರೆದಿದ್ದಾಗಿ ಅವರು ತಿಳಿಸಿದ್ದಾರೆ.

    ಮದರ್ ಡೇರಿಯ ಮಾರ್ಕೆಟಿಂಗ್ ಮ್ಯಾನೇಜರ್‌ಗೆ ದೂರು

    ಜೇಡ ಪತ್ತೆಯಾದ ತಕ್ಷಣ ಅದರ ವಿಡಿಯೋ ಚಿತ್ರೀಕರಿಸಿ ರೋಜಾ ಅವರು ಹಾಲಿನ ಮಾರಾಟಗಾರರಿಗೆ ಕಳುಹಿಸಿದ್ದು, ಪ್ಯಾಕೆಟ್ ಅನ್ನು ಎಸೆಯುವಂತೆ ಮಾರಾಟಗಾರರು ಸಲಹೆ ನೀಡಿದ್ದಾರೆ. ಆದರೆ, ಆಹಾರ ಉತ್ಪನ್ನದಲ್ಲಿ ಇಂತಹ ಹೊರಗಿನ ವಸ್ತು ಪತ್ತೆಯಾಗಿರುವುದು ಗಂಭೀರ ಆಹಾರ ಸುರಕ್ಷತಾ ವಿಚಾರವಾಗಿರುವುದರಿಂದ ಅವರು ಪ್ಯಾಕೆಟ್ ಎಸೆಯಲು ನಿರಾಕರಿಸಿದ್ದಾರೆ. ನಂತರ ಕೆಎಂಎಫ್‌ನ ಘಟಕವಾದ ಮದರ್ ಡೇರಿಯ ಮಾರ್ಕೆಟಿಂಗ್ ಮ್ಯಾನೇಜರ್‌ಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಸೆಕ್ಷನ್ 26, 27 ಮತ್ತು 54ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

    ಹಾಲಿನ ಮಾದರಿ ಮತ್ತು ಪ್ಯಾಕೆಟ್‌ ಪರಿಶೀಲನೆ

    ಈ ಸಂಬಂಧ ಸೋಮವಾರ ಕೆಎಂಎಫ್‌ನ ಇಬ್ಬರು ಅಧಿಕಾರಿಗಳು ರೋಜಾ ಅವರ ಮನೆಗೆ ಭೇಟಿ ನೀಡಿ ಹಾಲಿನ ಮಾದರಿ ಮತ್ತು ಪ್ಯಾಕೆಟ್‌ ಅನ್ನು ಪರಿಶೀಲನೆಗಾಗಿ ಸಂಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಿ, ಹಾಲು ಪ್ಯಾಕಿಂಗ್ ಮಾಡಿದ ಘಟಕವನ್ನು ಪತ್ತೆಹಚ್ಚುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ರೋಜಾ ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.




    Previous Articleಮಂಗಳೂರಿನ ಲಾಡ್ಜ್‌ನಲ್ಲಿ ಅಗ್ನಿ ಅವಘಡ; ನಾಲ್ಕನೇ ಮಹಡಿಯ ಕೊಠಡಿ ಬೆಂಕಿಗಾಹುತಿ
    Next Article ಸುರತ್ಕಲ್: ₹4,000 ಆಮಿಷವೊಡ್ಡಿ ಸ್ನೇಹಿತನಿಂದಲೇ ಬ್ಯಾಂಕ್ ಖಾತೆ ದುರ್ಬಳಕೆ; ವಿವಿಧ ರಾಜ್ಯಗಳಲ್ಲಿ ಸೈಬರ್ ದೂರು, ಖಾತೆ ಫ್ರೀಜ್

    Related Posts

    NH-48ರಲ್ಲಿ ಭೀಕರ ಅಪಘಾತ; ಕಾರು ನಜ್ಜುಗುಜ್ಜಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

    October 7, 2026

    ಕತ್ತಿನಲ್ಲಿ ಹಗ್ಗದ ಗುರುತು, ಸಾವಿನ ಬಳಿಕ ಪ್ರಿಯಕರ ನಾಪತ್ತೆ: ಮಹಿಳೆಯ ಸಾವಿನ ಸುತ್ತ ಅನುಮಾನ

    September 11, 2026

    ದೆಹಲಿಯಲ್ಲಿ ಪೌರಕಾರ್ಮಿಕನ ಬರ್ಬರ ಹತ್ಯೆ; ಪ್ರತಿಭಟನೆಗಿಳಿದ AAP ಶಾಸಕ

    August 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.