ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 13 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. 2013ರಲ್ಲಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ಹಾಗೂ ಗಲಾಟೆ ಪ್ರಕರಣದ ತನಿಖೆಯನ್ನು ಮತ್ತೆ ಕೈಗೆತ್ತಿಕೊಂಡಿರುವ ಪೊಲೀಸರು, ಈ ಸಂಬಂಧ ಮಮತಾ ಬ್ಯಾನರ್ಜಿ ಅವರಿಂದ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.
ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಆರೋಪಿಯಾಗಿಲ್ಲ. ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾರಣ ಸಾಕ್ಷಿಯಾಗಿ ಹೇಳಿಕೆ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ. 2013ರ ಏಪ್ರಿಲ್ 9ರಂದು ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆ ವೇಳೆ ಗಲಾಟೆ ನಡೆದಿದ್ದು, ಅಂದಿನ ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಮಿತ್ ಮಿತ್ರಾ ಅವರ ಮೇಲೆ ಎಸ್ಎಫ್ಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.