Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ
    ಅಪರಾಧ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    adminBy adminNovember 14, 2026No Comments1 Min Read

    ಮಂಗಳೂರು : ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ನಗರದಲ್ಲಿ ಅಕ್ರಮವಾಗಿ ನೆಲೆಸಿ, ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಾಂಗ್ಲಾದೇಶ ಮೂಲದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ವಶಕ್ಕೆ ಪಡೆಯಲಾದ ಅಕ್ರಮ ವಲಸಿಗರು.

    ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಕೆಲಸ ಮಾಡುತ್ತಿರುವ ಬಗ್ಗೆ ಪೊಲೀಸ್ ಇನ್ಸ್‌ಪೆಕ್ಟರ್‌ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾದ ಪಣಂಬೂರು ಪೊಲೀಸರ ತಂಡವು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿತು. ವಿಚಾರಣೆಯ ವೇಳೆ ಇಬ್ಬರೂ ಯಾವುದೇ ಪಾಸ್‌ಪೋರ್ಟ್, ವೀಸಾ ಅಥವಾ ಇತರ ಅಧಿಕೃತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ನುಸುಳಿ ಮಂಗಳೂರಿನಲ್ಲಿ ನೆಲೆಸಿರುವುದು ದೃಢಪಟ್ಟಿದೆ.

    ಸದ್ಯ ಇಬ್ಬರು ವಲಸಿಗರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ  ಮುಂದೆ ಹಾಜರುಪಡಿಸಿ, ಸ್ವದೇಶಕ್ಕೆ ಗಡಿಪಾರು  ಮಾಡುವ ಪ್ರಕ್ರಿಯೆಗೆ ಪಣಂಬೂರು ಪೊಲೀಸರು ಚಾಲನೆ ನೀಡಿದ್ದಾರೆ. ಪಣಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಪಾಲ್ಗೊಂಡಿದ್ದರು.




    Previous Articleಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    Related Posts

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.