Close Menu
    What's Hot

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆ.ಎಸ್.ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ; ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ನೋಟಿಸ್
    ಅಪರಾಧ

    ಕೆ.ಎಸ್.ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ; ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ನೋಟಿಸ್

    adminBy adminNovember 16, 2026No Comments1 Min Read

    ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್  ಲೋಕಾಯುಕ್ತಕ್ಕೆ  ನೋಟಿಸ್ ಜಾರಿ ಮಾಡಿದೆ. ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ಕುರಿತು ಮಾಹಿತಿ ನೀಡುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ.

    ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದೆ.ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಹಾಗೂ ಸೊಸೆ ಶಾಲಿನಿ ಅವರು ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ವಕೀಲ ಬಿ.ವಿನೋದ್ ಅವರು ಈ ಸಂಬಂಧ ದೂರು ಸಲ್ಲಿಸಿದ್ದರು.

    ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಈ ಹಿಂದೆ ಮುಕ್ತಾಯ ವರದಿ (ಬಿ ರಿಪೋರ್ಟ್) ಸಲ್ಲಿಸಿದ್ದರು. ಆದರೆ, ದೂರುದಾರರು ಈ ವರದಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದರು.

    ಹೊಸ ಎಫ್‌ಐಆರ್ ಪ್ರಶ್ನಿಸಿ ಕೆ.ಎಸ್.ಈಶ್ವರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಈಶ್ವರಪ್ಪ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.




    #crime #national
    Previous Articleಬೆಂಗಳೂರು ಸರಣಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಏಳು ಶವಗಳ ಸಾಗಾಟಕ್ಕೆ ಆರೋಪಿ ಹೂಡಿದ್ದ ತಂತ್ರ ಬಯಲು
    Next Article ಬೆಟ್ಟದ ಕಡಿದಾದ ಪ್ರದೇಶದಲ್ಲಿ ಸಿಲುಕಿದ ಯೂಟ್ಯೂಬರ್; ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಒಂದು ಗಂಟೆಯ ಕಾರ್ಯಾಚರಣೆಯಲ್ಲಿ ರಕ್ಷಣೆ

    Related Posts

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಮೊಟ್ಟೆ ಸಾಗಾಟದ ವಾಹನದಲ್ಲಿ ದನಗಳ ಅಕ್ರಮ ಸಾಗಾಟ; ಮಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

    November 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.