ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ ತಮಿಳುನಾಡಿನ ಮಧುರೈಗೆ ತೆರಳಬೇಕಿದ್ದ ಇಂಡಿಗೋ ಸಂಸ್ಥೆಯ 6E6526 ವಿಮಾನದಲ್ಲಿ ಈ ಘಟನೆ ನಡೆದಿದೆ. 92 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಟೇಕಾಫ್ಗಾಗಿ ರನ್ವೇನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ತುರ್ತು ಬ್ರೇಕ್ ಹಾಕಿ ವಿಮಾನವನ್ನು ರನ್ವೇನಲ್ಲೇ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.








