Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕರ್ನಾಟಕದಿಂದ ಹೆಚ್ಚುವರಿ ಕಾವೇರಿ ನೀರು ಕೇಳಿದ್ದ ತಮಿಳುನಾಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ
    ಕರ್ನಾಟಕ

    ಕರ್ನಾಟಕದಿಂದ ಹೆಚ್ಚುವರಿ ಕಾವೇರಿ ನೀರು ಕೇಳಿದ್ದ ತಮಿಳುನಾಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

    adminBy adminNovember 20, 2026No Comments3 Mins Read

    ನವದೆಹಲಿ: ಕಾವೇರಿ ಜಲ ವಿವಾದ ಸಂಬಂಧ ನೆರೆ ರಾಜ್ಯ ತಮಿಳುನಾಡಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಕರ್ನಾಟಕದಿಂದ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದೆ. ತಮಗೆ ಬರಬೇಕಾದ ಕಾವೇರಿ ನೀರಿನ ಪಾಲನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಎರಡು ಅರ್ಜಿಗಳನ್ನು ಸಲ್ಲಿಸಿತ್ತು.

    ಅಕ್ಟೋಬರ್ 6ರವರೆಗೆ ಅಂತರರಾಜ್ಯ ಗಡಿ ಪ್ರದೇಶವಾದ ಬಿಳಿಗುಂಡ್ಲುವಿನಲ್ಲಿ ತಮಿಳುನಾಡಿಗೆ ತಲುಪಬೇಕಿದ್ದ ನೀರಿನ ಪ್ರಮಾಣದಲ್ಲಿ 11.719 ಟಿಎಂಸಿ ಅಡಿ ಕೊರತೆಯಾಗಿದೆ ಎಂದು ತಮಿಳುನಾಡು ವಾದಿಸಿತ್ತು. ಸಾಕಷ್ಟು ನೀರಿನ ಸಂಗ್ರಹವಿದ್ದರೂ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಮಾಡದೆ ತಡೆಹಿಡಿದಿದೆ ಎಂದು ಆರೋಪಿಸಿತ್ತು. ನೀರಿನ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಆದರೆ, ತಮಿಳುನಾಡಿನ ಆರೋಪವನ್ನು ಕರ್ನಾಟಕ ಸರ್ಕಾರ ನಿರಾಕರಿಸಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ  ಆದೇಶಗಳನ್ನು ಪಾಲಿಸುತ್ತಿರುವುದಾಗಿ ಸ್ಪಷ್ಟಪಡಿಸಿತ್ತು.

    ತಮಿಳುನಾಡು ವಾದ ಏನಾಗಿತ್ತು?

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವಂತೆ ನೀಡಿರುವ ನಿರ್ದೇಶನಗಳನ್ನು ಜಾರಿಗೊಳಿಸಲು ಒತ್ತಾಯಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನದಿಯ ನೀರಿನಲ್ಲಿ ತನಗೆ ನಿಗದಿಪಡಿಸಿದ ಪಾಲು ಸಿಗುತ್ತಿಲ್ಲ ಎಂಬುದು ತಮಿಳುನಾಡಿನ ಪ್ರಮುಖ ಆರೋಪವಾಗಿತ್ತು. ಕಾವೇರಿ ನೀರು ವಿವಾದ ನ್ಯಾಯಮಂಡಳಿಯ ತೀರ್ಪಿನ ಪ್ರಕಾರ ತಮಿಳುನಾಡಿಗೆ ವಾರ್ಷಿಕ 64 ಟಿಎಂಸಿ ನೀರು ಹಂಚಿಕೆಯಾಗಬೇಕಿದೆ. ಹಿಂದಿನ ವಿಚಾರಣೆಯೊಂದರಲ್ಲಿ ತನಗೆ ಕೇವಲ 14 ಟಿಎಂಸಿ ನೀರು ಮಾತ್ರ ಲಭಿಸಿದೆ ಎಂದು ತಮಿಳುನಾಡು ನ್ಯಾಯಾಲಯಕ್ಕೆ ತಿಳಿಸಿತ್ತು. ನದಿ ಜಲಾನಯನ ಪ್ರದೇಶದಲ್ಲಿನ ನೀರಿನ ಹರಿವಿನ ಕೊರತೆಯನ್ನು ಪರಿಗಣಿಸಿದರೂ ತನಗೆ ಅನುಪಾತದ ಪ್ರಕಾರ ಶೇ.55.29ರಷ್ಟು ಪಾಲು ದೊರೆಯಬೇಕು. ಹೀಗಾಗಿ ಸುಮಾರು 20 ಟಿಎಂಸಿ ನೀರಿನ ಕೊರತೆಯಾಗಿದೆ ಎಂದು ವಾದಿಸಿತ್ತು.

    ಆಗಸ್ಟ್ 3ರ ವೇಳೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಕರ್ನಾಟಕದ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ಒಟ್ಟು 77.537 ಟಿಎಂಸಿ ನೀರಿನ ಸಂಗ್ರಹವಿತ್ತು. ಇದರಲ್ಲಿ 67.517 ಟಿಎಂಸಿ ಬಳಕೆಗೆ ಲಭ್ಯವಿರುವ ನೀರಾಗಿತ್ತು ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಉಲ್ಲೇಖಿಸಿತ್ತು. ಇಂತಹ ಪರಿಸ್ಥಿತಿಯಲ್ಲಿ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ನಿರ್ದೇಶನ ಸಾಕಾಗುವುದಿಲ್ಲ ಎಂದು ವಾದಿಸಿತ್ತು. ಜೂನ್ 1ರಿಂದ ಆಗಸ್ಟ್ 12ರವರೆಗಿನ ಅವಧಿಯಲ್ಲಿ ಅನುಪಾತದ ಪ್ರಕಾರ ತನಗೆ ಬರಬೇಕಿದ್ದ 26.954 ಟಿಎಂಸಿ ನೀರಿನ ಕೊರತೆಯನ್ನು ಸರಿದೂಗಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಮತ್ತು ನೀರು ಹಂಚಿಕೆ ಒಪ್ಪಂದದ ಪ್ರಕಾರ ನೀರು ಬಿಡುಗಡೆ ಖಚಿತಪಡಿಸಬೇಕು ಎಂದು ತಮಿಳುನಾಡು ಕೋರಿತ್ತು.

    ಜುಲೈ 28ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) 139ನೇ ಸಭೆಯಲ್ಲಿ, ಜುಲೈ 29ರಿಂದ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ 3,500 ಕ್ಯೂಸೆಕ್ ನೀರಿನ ಹರಿವು ಖಚಿತಪಡಿಸಲು ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಜುಲೈ 30ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 54ನೇ ತುರ್ತು ಸಭೆಯಲ್ಲೂ ಈ ಶಿಫಾರಸಿಗೆ ಅನುಮೋದನೆ ನೀಡಲಾಗಿತ್ತು. ಆದರೆ, ಕರ್ನಾಟಕ ಸರ್ಕಾರ ಈ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

    ನಂತರ ಆಗಸ್ಟ್ 12ರಿಂದ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಅನುಮೋದನೆ ನೀಡಿತ್ತು. ಆಗಸ್ಟ್ 17ರಂದು ನಡೆದ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರ ತಮಿಳುನಾಡಿನ ಆರೋಪಗಳನ್ನು ನಿರಾಕರಿಸಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯ ಪರಿಸ್ಥಿತಿ ಇದೆ ಎಂದು ವಾದಿಸಿತ್ತು. ಈ ವೇಳೆ ಸುಪ್ರೀಂ ಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿ, ಈ ಕುರಿತು ಸ್ಥಿತಿಗತಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

    ಆಗಸ್ಟ್ 24ರಂದು ನಡೆದ ವಿಚಾರಣೆಯಲ್ಲಿ, ಅಂದು ಬೆಳಗ್ಗೆಯ ವೇಳೆಗೆ ಪ್ರಾಧಿಕಾರ ನಿರ್ದೇಶಿಸಿದ ನೀರು ತಮಗೆ ತಲುಪಿದೆ ಎಂದು ತಮಿಳುನಾಡು ತಿಳಿಸಿತ್ತು. ಆದರೆ, ತಮ್ಮ ಅನುಪಾತದ ಪಾಲಿನಲ್ಲಿರುವ ನೀರಿನ ಕೊರತೆಯನ್ನು ಸರಿದೂಗಿಸುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ನಿರ್ದೇಶನ ನೀಡಿಲ್ಲ ಎಂದು ಆಕ್ಷೇಪಿಸಿತ್ತು. ಕರ್ನಾಟಕದ ಜಲಾಶಯಗಳಲ್ಲಿ ಸುಮಾರು 78 ಟಿಎಂಸಿ ನೀರಿನ ಸಂಗ್ರಹವಿದೆ ಎಂದು ಉಲ್ಲೇಖಿಸಿದ್ದ ತಮಿಳುನಾಡು, ಈ ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಸ್ತಾಪಿಸುವುದಾಗಿ ತಿಳಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು. ಅಂತಿಮವಾಗಿ, ಬಿಡುಗಡೆ ಮಾಡಬೇಕಿದ್ದ ನೀರಿನ ಪ್ರಮಾಣದಲ್ಲಿನ ಕೊರತೆಯನ್ನು ಸರಿದೂಗಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.




    #karnataka
    Previous Articleಒಡಿಶಾ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ; ಗಂಟೆಗೆ 90 ಕಿ.ಮೀ. ವೇಗದಲ್ಲಿ ಬಿರುಗಾಳಿ, 3 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ
    Next Article ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಅವಘಡ; ಮೂಡುಬಿದಿರೆ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಸಾವು

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026

    ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ; ಐಒಸಿಎಲ್ ಟರ್ಮಿನಲ್‌ಗೆ ಸರ್ಕಾರದಿಂದ ಶೋಕಾಸ್ ನೋಟಿಸ್

    November 27, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.