Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಗೋಧ್ರಾ ರೈಲು ದಹನ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್
    ಅಪರಾಧ

    ಗೋಧ್ರಾ ರೈಲು ದಹನ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್

    adminBy adminNovember 23, 2026No Comments2 Mins Read

    ನವದೆಹಲಿ: ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಒಂದು ಬೋಗಿಗೆ ಬೆಂಕಿ ಹಚ್ಚಿದ ಘಟನೆಯ 20ಕ್ಕೂ ಹೆಚ್ಚು ವರ್ಷಗಳ ನಂತರ ಅಪರಾಧಿ ಇರ್ಫಾನ್ ಸಿರಾಜ್ ಪಾಡಾಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ವೈದ್ಯಕೀಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ. ಪಾಡಾ ಅವರ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶವನ್ನು ಪ್ರಕಟಿಸಿದೆ. ಗಂಭೀರ ಕಾಯಿಲೆಗಳ ಕಾರಣದಿಂದ ಮಧ್ಯಂತರ ಬಿಡುಗಡೆ ಕೋರಿ ಅವರು ಸಲ್ಲಿಸಿದ್ದ ಔಪಚಾರಿಕ ಮನವಿಯನ್ನು ನ್ಯಾಯಪೀಠ ಪರಿಗಣಿಸಿತು.

    2002ರ ಫೆಬ್ರವರಿಯಲ್ಲಿ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಘಟನೆಯು ಗುಜರಾತ್‌ನಾದ್ಯಂತ ವ್ಯಾಪಕ ಕೋಮು ಗಲಭೆಗಳಿಗೆ ಕಾರಣವಾಗಿತ್ತು. ಸುದೀರ್ಘ ವಿಚಾರಣೆಯ ನಂತರ ಪಾಡಾ ಹಾಗೂ ಇತರ ಹಲವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಬಂಧನವಾದಾಗಿನಿಂದ ಪಾಡಾ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾರೆ.

    ಅಪರಾಧಿ ಇರ್ಫಾನ್ ಸಿರಾಜ್ ಪಾಡಾ ಅವರು ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನಿರಂತರ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ. ಇದಲ್ಲದೆ, ಅವರು ಈಗಾಗಲೇ 18 ವರ್ಷ 3 ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಅವರ ಮುಖ್ಯ ಮೇಲ್ಮನವಿ ಅರ್ಜಿಯ ಅಂತಿಮ ವಿಚಾರಣೆ ಇನ್ನೂ ಬಾಕಿ ಇರುವುದರಿಂದ, ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು.

    ಗುಜರಾತ್ ಸರ್ಕಾರದ ಪ್ರತಿಕ್ರಿಯೆ:

    ವಿಚಾರಣೆ ವೇಳೆ ಗುಜರಾತ್ ಸರ್ಕಾರದ ಪರ ವಕೀಲರು, “ಇದೊಂದು ಅತ್ಯಂತ ಗಂಭೀರ ಸ್ವರೂಪದ ಅಪರಾಧ ಪ್ರಕರಣವಾಗಿದೆ. ಅಪರಾಧಿಯು ರೈಲು ಬೋಗಿಯ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದನು. ಆದರೂ ಅಪರಾಧಿಯು ಹೃದಯ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವುದು ವೈದ್ಯಕೀಯ ವರದಿಗಳಿಂದ ದೃಢಪಟ್ಟಿರುವ ಕಾರಣ, ಮಾನವೀಯ ಹಾಗೂ ವೈದ್ಯಕೀಯ ಆಧಾರದ ಮೇಲೆ ಶಿಕ್ಷೆ ಅಮಾನತುಗೊಳಿಸಲು ಸರ್ಕಾರವು ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದ್ದಾರೆ.

    ಷರತ್ತುಬದ್ಧ ಬಿಡುಗಡೆಗೆ ಆದೇಶ:

    ಅಪರಾಧಿಯ ಆರೋಗ್ಯ ಸ್ಥಿತಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ವಿಧಿಸುವ ಕಠಿಣ ಷರತ್ತುಗಳಿಗೆ ಒಳಪಟ್ಟು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸೂಚಿಸಿದೆ. ಈ ಆದೇಶವು ಪ್ರಕರಣದಿಂದ ಖುಲಾಸೆಯಲ್ಲ, ಬದಲಾಗಿ ಮಧ್ಯಂತರ ಪರಿಹಾರವನ್ನು ಮಾತ್ರ ನೀಡುತ್ತದೆ. ಶಿಕ್ಷೆಯ ವಿರುದ್ಧದ ಅವರ ಮುಖ್ಯ ಮೇಲ್ಮನವಿಯ ಅಂತಿಮ ವಿಚಾರಣೆ ಬಾಕಿ ಇರುವವರೆಗೆ, ವಿಚಾರಣಾ ನ್ಯಾಯಾಲಯವು ವಿಧಿಸುವ ಕಠಿಣ ಷರತ್ತುಗಳಿಗೆ ಒಳಪಟ್ಟು ಪಾಡಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಕೋರ್ಟ್ ಹೇಳಿದೆ.

    ಏನಿದು ಗೋಧ್ರಾ ದುರಂತ?:

    2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾ ನಿಲ್ದಾಣದ ಬಳಿ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ದುರ್ಘಟನೆಯಲ್ಲಿ 59 ಮಂದಿ ಸಜೀವ ದಹನವಾಗಿದ್ದರು. ಈ ಪ್ರಕರಣದಲ್ಲಿ 2017ರಲ್ಲಿ ಗುಜರಾತ್ ಹೈಕೋರ್ಟ್ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು ಮತ್ತು 20 ಮಂದಿಯ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳು 2018ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

     

     




    #crime #national
    Previous Articleಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ
    Next Article ಸಮುದ್ರದಲ್ಲಿ ಅನುಮಾನ ಹುಟ್ಟಿಸಿದ ಹಡಗಿನ ಚಲನವಲನ; ತಪಾಸಣೆ ನಡೆಸಿದಾಗ 405 ಟನ್ ರಾಸಾಯನಿಕ ಪತ್ತೆ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.