ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪರಾಧ ಮತ್ತು ಸಾರ್ವಜನಿಕ ಕಿರಿಕಿರಿಯನ್ನು ತಡೆಗಟ್ಟುವ ಉದ್ದೇಶದಿಂದ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತಿದಿನ ರಾತ್ರಿ 11.45 ರಿಂದ ಬೆಳಿಗ್ಗೆ 5.30 ರವರೆಗೆ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ .ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹಿಂದಿಗಿಂತ ಉತ್ತಮ ಗೊಂಡಿರುವ ಹಿನ್ನಲೆಯಲ್ಲಿ ನೈಟ್ಲೈಫ್ ಪೂರಕವಾಗಿ ನಿರ್ಬಂಧವನ್ನು ತುಸು ಸಡಿಲಿಸಲಾಗಿದೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ 11.45 ರಿಂದ ಬೆಳಿಗ್ಗೆ 5.30 ರವರೆಗೆ ವಾಣಿಜ್ಯ ಮತ್ತು ವ್ಯವಹಾರ ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೆಲವು ಅಹಿತಕರ ಘಟನೆ ನಡೆದ ಹಿನ್ನಲೆಯಲ್ಲಿ ರಾತ್ರಿ 10.30 ರವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿತ್ತು.
ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು ಮತ್ತು ಪಾನ್ ಶಾಪ್ಗಳು ರಾತ್ರಿ 11.45 ರಿಂದ ಬೆಳಿಗ್ಗೆ 5.30 ರವರೆಗೆ ಮುಚ್ಚಿರಬೇಕು ಎಂದು ತಿಳಿಸಲಾಗಿದೆ. ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿರುವ ಹಿನ್ನೆಲೆಯಲ್ಲಿ, ಈ ಹಿಂದೆ ಇದ್ದ ರಾತ್ರಿ 10.30 ರ ಗಡುವನ್ನು 11.45 ರವರೆಗೆ ವಿಸ್ತರಿಸಲಾಗಿದೆ.
ಆದರೆ ಆಸ್ಪತ್ರೆಗಳು, ಔಷಧಾಲಯಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯುಕ್ತತೆ ಸೇವೆಗಳು ಮತ್ತು ಸರ್ಕಾರ ಅಥವಾ ಸಂಬಂಧಿತ ಅಧಿಕಾರಿಗಳಿಂದ ವಿಶೇಷ ಅನುಮತಿ ಪಡೆದಿರುವ ಸಂಸ್ಥೆಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ . ಇದು CL-4, CL-6(a) ಮತ್ತು CL-7 ಪರವಾನಗಿ ಹೊಂದಿರುವವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶವು ಸ್ಪಷ್ಟಪಡಿಸಿದೆ. ಅವರು ತಮ್ಮ ಪರವಾನಗಿಗಳಲ್ಲಿ ನಿಗದಿಪಡಿಸಿದ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ರಾತ್ರಿ ವೇಳೆ ಅನಗತ್ಯವಾಗಿ ಜನ ಸೇರುವುದನ್ನು ತಡೆಯಲು, ಮಾದಕ ವಸ್ತುಗಳ ಸೇವನೆಯಿಂದಾಗುವ ಅಹಿತಕರ ಘಟನೆಗಳನ್ನು ನಿಯಂತ್ರಿಸಲು ಮತ್ತು ವಾಹನಗಳ ಶಬ್ದದಿಂದ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಆಸ್ಪತ್ರೆಗಳು, ಮೆಡಿಕಲ್ ಶಾಪ್ಗಳು ಮತ್ತು ವಿಶೇಷ ಅನುಮತಿ ಪಡೆದ ತುರ್ತು ಸೇವೆಗಳು ಎಂದಿನಂತೆ ರಾತ್ರಿಯಿಡೀ ಕಾರ್ಯನಿರ್ವಹಿಸಬಹುದು.








