Close Menu
    What's Hot

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಎಚ್‌ಡಿಕೆಗೆ ಸೈಬರ್ ಪೊಲೀಸರ ನೋಟಿಸ್; ಸ್ವೀಕರಿಸದೆ ವಾಪಸ್ ಕಳುಹಿಸಿದ ಕುಮಾರಸ್ವಾಮಿ
    ಅಪರಾಧ

    ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಎಚ್‌ಡಿಕೆಗೆ ಸೈಬರ್ ಪೊಲೀಸರ ನೋಟಿಸ್; ಸ್ವೀಕರಿಸದೆ ವಾಪಸ್ ಕಳುಹಿಸಿದ ಕುಮಾರಸ್ವಾಮಿ

    adminBy adminNovember 24, 2026No Comments2 Mins Read

    ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪೊಲೀಸ್ ನೋಟಿಸ್ ನೀಡುವ ಮೂಲಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

    ಜಿಲ್ಲಾಧಿಕಾರಿಗಳು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಅವರ ನಿವಾಸಕ್ಕೆ ನೋಟಿಸ್ ಹಿಡಿದು ಬಂದಿದ್ದ ಹಾಸನ ಸೈಬರ್ ಕ್ರೈಮ್‌ ಪೊಲೀಸರಿಗೆ ಎಚ್‌ಡಿಕೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನೋಟಿಸ್ ಸ್ವೀಕರಿಸದೇ ವಾಪಸ್ ಕಳಿಸಿದ್ದಾರೆ.ಲತಾಕುಮಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಸೈಬರ್ ಕಮಾಂಡ್ ಸೆಂಟರ್‌ನಿಂದ ನೋಟಿಸ್ ಸಿದ್ಧಪಡಿಸಲಾಗಿತ್ತು. ಈ ನೋಟಿಸ್ ತಲುಪಿಸಲು ಹಾಸನ ಸೈಬರ್ ಪೊಲೀಸರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ನೋಟಿಸ್ ಪಡೆಯಲು ನಿರಾಕರಿಸಿದ ಕುಮಾರಸ್ವಾಮಿ ಪೊಲೀಸರನ್ನು ವಾಪಸ್ ಕಳಿಸಿದ್ದಾರೆ.

    ಈ ವೇಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, “ನಾನು ವಿರೋಧ ಪಕ್ಷದ ನಾಯಕನಾಗಿ ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಸಾರ್ವಜನಿಕವಾಗಿ ಈ ರೀತಿ ಆರೋಪ ಮಾಡಿದವರಿಗೆಲ್ಲಾ ಇದೇ ರೀತಿ ದೂರು ಪಡೆದು ಕ್ರಮ ತೆಗೆದುಕೊಂಡಿದ್ದೀರಾ?” ಎಂದು ಪ್ರಶ್ನಿಸಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ, ಘಟನೆ ನಡೆದ ತಕ್ಷಣವೇ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಲೀಂ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ.

    ನೋಟಿಸ್‌ ವಿಚಾರವಾಗಿ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಹೆಚ್‌ಡಿಕೆ ದೆಹಲಿಗೆ ತೆರಳಿದ್ದು ಅಲ್ಲಿ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದೆ.

    ಹೆಚ್‌ಡಿಕೆ ಆರೋಪ ಏನಿತ್ತು?
    ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಲಂಚ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿ, ಕೆಲವು ವಾಟ್ಸಪ್ ಚಾಟ್ ಸ್ಕ್ರೀನ್‌ಶಾಟ್‌ಗಳನ್ನು ಬಿಡುಗಡೆ ಮಾಡಿದ್ದರು.

    ಮೂರು ಕಲ್ಲಿನ ಕ್ರಷರ್ ಪರವಾನಗಿ ಹಾಗೂ ಸಕಲೇಶಪುರ ಭಾಗದ ಭೂ ಅನ್ಯಕ್ರಾಂತ (ಕನ್ವರ್ಷನ್) ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದರು. ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ (ಪಿಎ) ಶಶಿಕಿರಣ್ ಎಂಬುವವರ ವಾಟ್ಸಾಪ್ ಚಾಟ್‌ಗಳನ್ನು ಉಲ್ಲೇಖಿಸಿ ದಾಖಲೆಗಳನ್ನು ಮುಂದಿಟ್ಟಿದ್ದರು.

    ಲತಾಕುಮಾರಿ ಅವರು ಹಾಸನದಲ್ಲೇ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ಲಂಚ ನೀಡಲಾಗಿದೆ ಎಂಬ ಮತ್ತೊಂದು ಗಂಭೀರ ಆರೋಪವನ್ನೂ ವಾಟ್ಸಾಪ್ ಚಾಟ್‌ಗಳ ಮೂಲಕ ಕುಮಾರಸ್ವಾಮಿ ಮಾಡಿದ್ದರು. ಈ ಆರೋಪಗಳ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದರು.




    #crime #karnataka
    Previous Articleಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ತಾಯಿ-ಮಗ ಸೇರಿದಂತೆ ಮೂವರಿಗೆ ಗಾಯ
    Next Article ಆಕ್ಸ್‌ಫರ್ಡ್, ಕೇಂಬ್ರಿಡ್ಜ್ ಕಾರ್ಯಕ್ರಮಕ್ಕೆ ತೆರಳಬೇಕಿದ್ದ ಸಿಜೆಪಿಯ ಸೌರವ್ ದಾಸ್‌ಗೆ ವಿಮಾನ ನಿಲ್ದಾಣದಲ್ಲಿ ತಡೆ

    Related Posts

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.