Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ
    ಅಪರಾಧ

    ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ

    adminBy adminNovember 25, 2026No Comments1 Min Read

    ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

    ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣವನ್ನು ಮರುಪರಿಶೀಲನೆಗಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮರಳಿಸಿರುವ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

    ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದರು. ರಾಹುಲ್ ಗಾಂಧಿ ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು. ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ.ಗೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸುವಂತೆ ಸಿಬಿಐ ಮತ್ತು ಇಡಿಗೆ ಸೂಚಿಸಿತ್ತು. ಅಲ್ಲದೆ, ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ತಿಳಿಸಿತ್ತು. ಬಳಿಕ ಸಿಬಿಐ ಸಲ್ಲಿಸಿದ್ದ ಅಫಿಡವಿಟ್‌ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ಹೊಸ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿತ್ತು.

    ಹೈಕೋರ್ಟ್‌ನ ಈ ಆದೇಶಗಳನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆಗಸ್ಟ್ 17ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಅಲಹಾಬಾದ್ ಹೈಕೋರ್ಟ್‌ನ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ ಸಿಬಿಐ ಮತ್ತು ಇಡಿ ಹೈಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಬಾರದು ಎಂದು ಸೂಚನೆ ನೀಡಿತ್ತು.

    ಇದೀಗ ಹೈಕೋರ್ಟ್‌ನ ಹಿಂದಿನ ನಿರ್ದೇಶನಗಳನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ತಿಳಿಸಿದೆ. ಅರ್ಜಿಯ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರನ್ನೂ ಪಕ್ಷಕಾರರನ್ನಾಗಿ ಸೇರಿಸಿಕೊಂಡು, ಅವರ ವಾದ ಆಲಿಸಿದ ಬಳಿಕವೇ ಮುಂದಿನ ಆದೇಶ ನೀಡಬೇಕು ಎಂದು ಹೇಳಿದೆ.




    #crime #karnataka
    Previous Articleಅಂಚೆ ಮತಪತ್ರ ತಿರುಚಿದ ಆರೋಪ; ಬಿಜೆಪಿ ಮಾಜಿ ಶಾಸಕ ಜೀವರಾಜ್‌ಗೆ ಹೈಕೋರ್ಟ್‌ನಿಂದ ರಿಲೀಫ್
    Next Article ಶಿರ್ವ: ದೇವಸ್ಥಾನದ ದೀಪೋತ್ಸವಕ್ಕೆ ಬಂದಿದ್ದ ವೃದ್ಧನಿಗೆ ಸುತ್ತಿಗೆಯಿಂದ ಹಲ್ಲೆ; ಎರಡು ಚಿನ್ನದ ಸರ ದೋಚಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.