ಬ್ರಹ್ಮರಕೊಟ್ಲು : ಬಜತ್ತೂರು ಗ್ರಾಮದ ವಳಾಲು–ನೀರಕಟ್ಟೆ ಟೋಲ್ ಪ್ಲಾಝಾದಲ್ಲಿ ಶುಲ್ಕ ವಸೂಲಿ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್ ವಿರೋಧಿ ಆಕ್ರೋಶ ಮತ್ತೆ ಭುಗಿಲೆದ್ದಿದೆ. ವಳಾಲು ಟೋಲ್ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ ಎಸ್ಡಿಪಿಐ ನಾಯಕರು ಹಾಗೂ ಕಾರ್ಯಕರ್ತರು ಬ್ರಹ್ಮರಕೊಟ್ಲು ಟೋಲ್ ಗೇಟ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಎಸ್ಡಿಪಿಐ ನಾಯಕರ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಹೆದ್ದಾರಿಯ ವಳಾಲು–ನೀರಕಟ್ಟೆ ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಅಧಿಕೃತವಾಗಿ ಶುಲ್ಕ ಸಂಗ್ರಹ ಆರಂಭವಾಗಿದೆ. ಇದರಿಂದ ಬಿ.ಸಿ.ರೋಡ್ನಿಂದ ಅಡ್ಡಹೊಳೆ, ಹಾಸನ ಹಾಗೂ ಬೆಂಗಳೂರು ಕಡೆಗೆ ಸಂಚರಿಸುವ ವಾಹನ ಸವಾರರು ಹೆಚ್ಚುವರಿ ಟೋಲ್ ಶುಲ್ಕ ಪಾವತಿಸಬೇಕಾಗಿದೆ. ಟೋಲ್ ಶುಲ್ಕ ವಸೂಲಿ ಆರಂಭವಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಎಸ್ಡಿಪಿಐ ಕಾರ್ಯಕರ್ತರು ಬ್ರಹ್ಮರಕೊಟ್ಲು ಟೋಲ್ ಗೇಟ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹೊಸ ಟೋಲ್ ಪ್ಲಾಝಾ ಆರಂಭದಿಂದ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಬೀಳಲಿದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದು, ಎಸ್ಡಿಪಿಐ ನಾಯಕರ ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ವಳಾಲು ಟೋಲ್ ಆರಂಭದೊಂದಿಗೆ ಕರಾವಳಿ ಭಾಗದಲ್ಲಿ ಟೋಲ್ ಶುಲ್ಕದ ವಿಚಾರ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.








