Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ಅಮಾಯಕನ ಸುಲಿಗೆ ಪ್ರಕರಣ- ಇಬ್ಬರು ಪೊಲೀಸ್ ಆರೋಪಿಗಳಿಗೆ ಜಾಮೀನು
    ಅಪರಾಧ

    ಮಂಗಳೂರು: ಅಮಾಯಕನ ಸುಲಿಗೆ ಪ್ರಕರಣ- ಇಬ್ಬರು ಪೊಲೀಸ್ ಆರೋಪಿಗಳಿಗೆ ಜಾಮೀನು

    adminBy adminNovember 27, 2026No Comments2 Mins Read

    ಮಂಗಳೂರು: ಗಸ್ತು ತಿರುಗುವ ಸಂದರ್ಭದಲ್ಲಿ ಅಮಾಯಕ ವ್ಯಕ್ತಿಯೊಬ್ಬರನ್ನು ತಡೆದು ನಿಲ್ಲಿಸಿ, ಹಲ್ಲೆ ನಡೆಸಿ, ಮೊಬೈಲ್, ಹಣ ಹಾಗೂ ಎಟಿಎಂ ಕಾರ್ಡ್‌ಗಳನ್ನು ಬಲವಂತವಾಗಿ ಕಸಿದುಕೊಂಡು ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಈರಣ್ಣ ಬೆನ್ನಿ ಮತ್ತು ಶಿವರಾಜ್ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

     

    ಪ್ರಕರಣದ ಸಾರಾಂಶ:

    ಈ ಪ್ರಕರಣದ ದೂರುದಾರರು ಮಂಗಳೂರಿನ ಪಾಂಡೇಶ್ವರದ ಶಿವನಗರದಲ್ಲಿ ವಾಸವಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.

    ದಿನಾಂಕ 25-08-2026ರಂದು ರಾತ್ರಿ ಸುಮಾರು 10 ಗಂಟೆಗೆ ನೆಹರೂ ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದಾಗ, ಆರ್‌ಟಿಒ ಕಚೇರಿ ಬಳಿ ಹೋಯ್ಸಳ ವಾಹನದಲ್ಲಿ ಬಂದ ಪೊಲೀಸ್ ಸಿಬ್ಬಂದಿಗಳಾದ ಈರಣ್ಣ ಬೆನ್ನಿ ಮತ್ತು ಶಿವರಾಜ್ ದೂರುದಾರರನ್ನು ತಡೆದು ನಿಲ್ಲಿಸಿದ್ದಾರೆ.

    ಈ ವೇಳೆ ಶಿವರಾಜ್ ಅವರ ಕೈಯಲ್ಲಿದ್ದ ಬೆತ್ತದಿಂದ ದೂರುದಾರರ ಭುಜ ಮತ್ತು ಕಾಲಿಗೆ ಹೊಡೆದು, ಅವರ ಚಡ್ಡಿಯ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಹಾಗೂ ಮೊಬೈಲ್ ಕವರ್‌ನಲ್ಲಿದ್ದ 300 ರೂ. ಹಣವನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, “ಇನ್ನು ನೀನು ಇಲ್ಲಿ ಕಂಡರೆ ಜೈಲಿಗೆ ಹಾಕುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ನಂತರ ದಿನಾಂಕ 27-08-2026ರಂದು ರಾತ್ರಿ 9.30ರ ವೇಳೆಗೆ ಅದೇ ಸ್ಥಳದಲ್ಲಿ ನಡೆದುಕೊಂಡು ಹೋಗುತ್ತಿದ್ದ ದೂರುದಾರರನ್ನು ಮತ್ತೆ ತಡೆದ ಪೊಲೀಸರು, ಅವರ ಮೊಬೈಲ್ ಫೋನ್ ಅನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಮೊಬೈಲ್ ಕವರ್‌ನಲ್ಲಿದ್ದ ಕರ್ನಾಟಕ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್‌ನ ಎರಡು ಎಟಿಎಂ ಕಾರ್ಡ್‌ಗಳು, 1,000 ರೂ. ನಗದು ಹಾಗೂ ಮೋಟಾರ್ ಸೈಕಲ್ ಕೀಯನ್ನು ಕಸಿದುಕೊಂಡಿದ್ದಾರೆ.

    ರಾತ್ರಿ ಸುಮಾರು 11.30ರ ವೇಳೆಗೆ ಮತ್ತೆ ಹೋಯ್ಸಳ ವಾಹನದಲ್ಲಿ ಬಂದ ಪೊಲೀಸರು ದೂರುದಾರರನ್ನು ಬಲವಂತವಾಗಿ ವಾಹನದಲ್ಲಿ ಕೂರಿಸಿ, ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತನ್ನ ಬಳಿ ಹಣವಿಲ್ಲ, ಎಟಿಎಂ ಕಾರ್ಡ್ ಮಾತ್ರ ಇದೆ ಎಂದು ದೂರುದಾರರು ತಿಳಿಸಿದಾಗ, ಅವರ ಮೊಬೈಲ್ ಪಾಸ್‌ವರ್ಡ್ ಪಡೆದು ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಿದ್ದಾರೆ. ಖಾತೆಯಲ್ಲಿ 5,000 ರೂ. ಇರುವುದನ್ನು ಕಂಡು 2,000 ರೂ. ನೀಡುವಂತೆ ಒತ್ತಾಯಿಸಿದ್ದಾರೆ. ಹಣ ನೀಡದಿದ್ದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಹಣ ನೀಡಲು ಸಾಧ್ಯವಿಲ್ಲ, ಬ್ಯಾಂಕ್ ಸಾಲ ಕಟ್ಟಬೇಕಿದೆ. ತಾನು ಯಾವುದೇ ತಪ್ಪು ಮಾಡಿಲ್ಲ, ದಯವಿಟ್ಟು ಬಿಟ್ಟುಬಿಡಿ ಎಂದು ದೂರುದಾರರು ಮನವಿ ಮಾಡಿದರೂ ಪೊಲೀಸರು ಬಿಡಲಿಲ್ಲ ಎನ್ನಲಾಗಿದೆ.

    ಬಳಿಕ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಇರುವ ಎಸ್‌ಬಿಐ ಎಟಿಎಂನಿಂದ ಹಣ ಡ್ರಾ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅದರಂತೆ ದೂರುದಾರರು ಎಟಿಎಂನಿಂದ 1,000 ರೂ. ಡ್ರಾ ಮಾಡಿ, ಮೊಬೈಲ್ ಕವರ್‌ನಲ್ಲಿದ್ದ 1,000 ರೂ. ಸೇರಿಸಿ ಒಟ್ಟು 2,000 ರೂ. ನೀಡಿದ್ದರು ಎಂದು ಆರೋಪಿಸಲಾಗಿದೆ.

    ಇದಲ್ಲದೆ, ದಿನಾಂಕ 04-11-2026ರಂದು ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಮೋಟಾರ್ ಸೈಕಲ್‌ನಲ್ಲಿ ಆರ್‌ಟಿಒ ಕಚೇರಿ ಬಳಿ ಬಂದು ವಾಹನ ನಿಲ್ಲಿಸಿ ನೆಹರೂ ಮೈದಾನದ ಹೊರಭಾಗದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ, ರಾತ್ರಿ 9.15ರ ವೇಳೆಗೆ ಹೋಯ್ಸಳ ವಾಹನದಲ್ಲಿ ಬಂದ ಶಿವರಾಜ್ ಮತ್ತು ಮತ್ತೊಬ್ಬ ಪೊಲೀಸ್ ಸಿಬ್ಬಂದಿ ದೂರುದಾರರನ್ನು ವಾಹನದ ಬಳಿ ಕರೆಸಿಕೊಂಡಿದ್ದಾರೆ.

    ನಂತರ ಅವರ ಮೊಬೈಲ್ ಫೋನ್ ಮತ್ತು ಮೋಟಾರ್ ಸೈಕಲ್ ಕೀಯನ್ನು ಕಸಿದುಕೊಂಡು ಹೋಯ್ಸಳ ವಾಹನದಲ್ಲಿ ಕೂರಿಸಿದ್ದಾರೆ. ಈ ವೇಳೆ ಶಿವರಾಜ್ ಅವರು ದೂರುದಾರರಿಗೆ ಫೈನ್ ಕಟ್ಟಬೇಕು ಎಂದು ಹೇಳಿ, ಯಾವುದೇ ಕಾರಣವಿಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿ ಬಲವಂತವಾಗಿ ನಗದು ಹಣವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಈರಣ್ಣ ಬೆನ್ನಿ, ಶಿವರಾಜ್ ಮತ್ತು ಉಮಾನಾಥ್ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಅವರು ಆರೋಪಿಗಳಾದ ಈರಣ್ಣ ಬೆನ್ನಿ ಮತ್ತು ಶಿವರಾಜ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ಆರೋಪಿಗಳ ಪರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮಾನ್ಯ ಎರಡನೇ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್ ಅವರು ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದ್ದಾರೆ.

    ಆರೋಪಿಗಳ ಪರವಾಗಿ ವಕೀಲರಾದ ವೇಣುಕುಮಾರ್ ಮತ್ತು ಯುವರಾಜ್ ಕೆ. ಅಮೀನ್ ವಾದ ಮಂಡಿಸಿದ್ದರು.




    Previous Articleಗೂಗಲ್‌ನಲ್ಲಿ ನದಿ ಹುಡುಕಿ ಈಜಲು ತೆರಳಿದ್ದ ಯುವಕರು; ತುಂಗಾ ನದಿಯಲ್ಲಿ ನಾಲ್ವರು ಜಲಸಮಾಧಿ
    Next Article ವಿಟ್ಲ: ಚಿಕ್ಕಪ್ಪನನ್ನು ಹತ್ಯೆಗೈದ ಯುವತಿಗೆ ನ್ಯಾಯಾಂಗ ಬಂಧನ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.