Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತುಮಕೂರು ಭೀಕರ ಕೊಲೆ ರಹಸ್ಯ: ಎಲ್‌ಐಸಿ ₹30 ಲಕ್ಷ ಆಸೆಗೆ ತಮ್ಮನನ್ನೇ ಮುಗಿಸಿದ ಅಣ್ಣ
    ಅಪರಾಧ

    ತುಮಕೂರು ಭೀಕರ ಕೊಲೆ ರಹಸ್ಯ: ಎಲ್‌ಐಸಿ ₹30 ಲಕ್ಷ ಆಸೆಗೆ ತಮ್ಮನನ್ನೇ ಮುಗಿಸಿದ ಅಣ್ಣ

    adminBy adminJune 25, 2026No Comments2 Mins Read

    ತುಮಕೂರು: ಎಲ್‌ಐಸಿ ಪಾಲಿಸಿಯಿಂದ ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು  ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ.

    ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ ಇರುವ ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಸ್ವಂತ ತಮ್ಮನನ್ನೇ ಕೊಲೆ ಮಾಡಿ ಬೈಕ್ ಅಪಘಾತ ಎಂದು ಕಥೆ ಕಟ್ಟಿದ್ದಾನೆ.

    ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದೊಂದು ಘಟನೆ ನಡೆದಿದೆ. 35 ವರ್ಷದ ರಮೇಶ್‌ನನ್ನು ಅಣ್ಣ ಹನುಮಂತರಾಜು ಕೊಲೆ ಮಾಡಿ ನಾಟಕವಾಡಿದ್ದಾನೆ. ಮೃತ ರಮೇಶ್ ಮೂಲತಃ ಆಂಧ್ರಪ್ರದೇಶದವನು. ಕಳೆದ 6 ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ ದೂರವಾಗಿ ಮಾಟಮಂತ್ರ ಮಾಡುವ ವೃತ್ತಿಯಲ್ಲಿ ತೊಡಗಿದ್ದ. ಅಲ್ಲದೇ ತನ್ನ ಸ್ವಂತ ಅಣ್ಣಂದಿರ ಸಂಸಾರಕ್ಕೆ ಮಾಟಮಂತ್ರ ಮಾಡಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ.

    ತಮ್ಮ ರಮೇಶ್ ಹೆಸರಿಗೆ ಅಣ್ಣ ಹನುಮಂತರಾಜು 15 ಲಕ್ಷ ರೂಪಾಯಿ ಎಲ್‌ಐಸಿ ಪಾಲಿಸಿ ಮಾಡಿಸುತ್ತಾನೆ. ಅದರ ನಾಮಿನಿ ತನ್ನ ಹೆಸರಿಗೆ ಮಾಡಿಸಿಕೊಳ್ಳುತ್ತಾನೆ. ಅಣ್ಣ ಹನುಮಂತರಾಜು ಪ್ರತಿ ವರ್ಷಕ್ಕೆ ತಮ್ಮನ ಪಾಲಿಸಿಗೆ 85,000 ರೂ. ವಿಮಾ ಕಂತನ್ನು ಪಾವತಿ ಮಾಡುತ್ತಾನೆ. ಚಾಲ್ತಿಯಲ್ಲಿ ಇರುವ ವಿಮೆಯು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ನಾಮಿನಿದಾರರಿಗೆ ವಿಮೆ ಮೊತ್ತದ ಡಬಲ್ ಹಣ ಅಂದರೆ 30 ಲಕ್ಷ ಹಣ ಪಾವತಿಯಾಗುವಂತೆ ಇತ್ತು. ಈ ಹಣದ ದುರಾಸೆಯಿಂದ ಆರೋಪಿ ಹನುಮಂತರಾಜು ತಮ್ಮನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ನವಯುಗ ಟೋಲ್ ಬಳಿಯ ತನ್ನ ಅಂಗಡಿಗೆ ಬರುತಿದ್ದ ಲಕ್ಷ್ಮೀಕಾಂತ, ನವೀನ್ ಹಾಗೂ ಎಂ.ಡಿ.ಜಿಲಾನ್ ಜೊತೆ ಸೇರಿ ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ.

    ಕಳೆದ ಜೂನ್ 19ರಂದು ಯಾವುದೋ ನಿಧಿ ಪೂಜೆ ಇದೆ ಎಂದು ರಮೇಶ್‌ನನ್ನು ಶಿರಾ ಅಮರಾಪುರ ರಸ್ತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ದೊಣ್ಣೆಯಿಂದ ಆತನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಕಾರು ಹರಿಸಿದ್ದಾರೆ. ಆಗಲೂ ಜೀವ ಹೋಗದಿದ್ದಾಗ ಬ್ಯಾಟರಿ ಜಂಪಿಂಗ್ ವಯರ್ ಮೂಲಕ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಶವ ಹಾಗೂ ಬೈಕನ್ನು ರಸ್ತೆಯಲ್ಲಿ ಹಾಕಿದ್ದಾರೆ. ಬಳಿಕ ಬೈಕ್‌ನ ಮುಂಭಾಗವನ್ನು ಇವರೇ ಜಖಂ ಮಾಡಿ ಅಪಘಾತದ ನಾಟಕ ಮಾಡಿದ್ದಾರೆ.

    ಮೃತನ ಹಿರಿಯ ಅಣ್ಣ ರಂಗನಾಥ ಕೊಟ್ಟ ದೂರಿನ ಪ್ರಕಾರ ಪೊಲೀಸರು ಅನುಮಾನಸ್ಪದ ಸಾವು ಎಂದು ಎಫ್‌ಐಆರ್ ದಾಖಲಿಸಿದರು. ನಂತರ 3 ತಂಡಗಳನ್ನು ರಚಿಸಿದ ಪೊಲೀಸರು ಆರೋಪಿ ಹನುಮಂತರಾಜು ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ.

     




    #crime #karnataka
    Previous Articleಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ: ಮಹಿಳೆಗೆ ₹4 ಲಕ್ಷಕ್ಕೂ ಅಧಿಕ ನಷ್ಟ—ಹಿರಿಯಡ್ಕದಲ್ಲಿ ಪ್ರಕರಣ ದಾಖಲು
    Next Article OLX ನಲ್ಲಿ ಐಷಾರಾಮಿ ಬೈಕ್ ನಾಟಕ: ಕಾಂಟಿನೆಂಟಲ್ GT 650 ಹೆಸರಲ್ಲಿ ವಂಚನೆ—ತಂದೆ-ಮಗನಿಗೆ ಜೀವ ಬೆದರಿಕೆ ಪ್ರಕರಣ ಬಯಲು

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.