Close Menu
    What's Hot

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕಾರ್ಕಳ–ಹೆಬ್ರಿ ಪ್ರದೇಶದಲ್ಲಿ ಚಿರತೆ ಸಂಚಾರ; ಅರಣ್ಯ ಇಲಾಖೆ ಕ್ರಮಕ್ಕೆ ಒತ್ತಾಯ
    ಕರಾವಳಿ ಸುದ್ದಿ

    ಕಾರ್ಕಳ–ಹೆಬ್ರಿ ಪ್ರದೇಶದಲ್ಲಿ ಚಿರತೆ ಸಂಚಾರ; ಅರಣ್ಯ ಇಲಾಖೆ ಕ್ರಮಕ್ಕೆ ಒತ್ತಾಯ

    adminBy adminJune 27, 2026No Comments1 Min Read

    ಕಾರ್ಕಳ/ಹೆಬ್ರಿ: ಕಾರ್ಕಳ ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದಿದ್ದು, ಜೊತೆಗೆ ಹೆಬ್ರಿಯಲ್ಲಿ ಹಾಡುಹಗಲೇ ಕರು ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕವನ್ನು ಮೂಡಿಸಿದೆ. ಈ ಕೂಡಲೇ ಅರಣ್ಯ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಕಾರ್ಕಳದಲ್ಲಿ ಚಿರತೆ ಪ್ರತ್ಯಕ್ಷ:
    ಜೂನ್ 24 ರಂದು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಕಾರ್ಕಳದ ಸಾಣೂರು ಗ್ರಾಮದ ಪಿಲಿಕಲ್ಲು ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾರ್ಕಳ ಪಟ್ಟಣದಿಂದ ಮನೆಗೆ ಮರಳುತ್ತಿದ್ದ ಸ್ಥಳೀಯ ನಿವಾಸಿಯೊಬ್ಬರು ರಸ್ತೆಯನ್ನು ದಾಟುತ್ತಿದ್ದ ಚಿರತೆಯನ್ನು ನೋಡಿ, ಅದನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.ಈ ಸ್ಥಳದ ಸಮೀಪದಲ್ಲಿಯೇ ಶಿಕ್ಷಣ ಸಂಸ್ಥೆಯೊಂದು ಇರುವುದರಿಂದ ಮತ್ತು ಪ್ರತಿನಿತ್ಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಹಾಡುಹಗಲೇ ಹೆಬ್ರಿಯಲ್ಲಿ ಕರು ಮೇಲೆ ಚಿರತೆ ದಾಳಿ:
    ಶುಕ್ರವಾರ ಹೆಬ್ರಿಯ ಸೀತಾನದಿ ನೇಚರ್ ಕ್ಯಾಂಪ್ ಸಮೀಪದ ಗದ್ದೆಯಲ್ಲಿ ಮೇಯುತ್ತಿದ್ದ ಕರು ಮೇಲೆ ಚಿರತೆ ಹಗಲಲ್ಲೇ ದಾಳಿ ನಡೆಸಿದೆ. ಚಂದ್ರಶೇಖರ್ ಶೆಟ್ಟಿ ಎಂಬುವವರಿಗೆ ಸೇರಿದ ಕರುವನ್ನು ಚಿರತೆ ಕುತ್ತಿಗೆಯ ಭಾಗದಲ್ಲಿ ಕಚ್ಚಿ ಗಾಯಗೊಳಿಸಿದೆ. ಇತರೆ ದನಗಳು ಕೂಡಲೇ ಸ್ಥಳಕ್ಕೆ ಧಾವಿಸಿದ್ದರಿಂದ ಚಿರತೆ ಅಲ್ಲಿಂದ ಪರಾರಿಯಾಗಿದೆ.ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವು ನಾಯಿಗಳು ಮತ್ತು ದನಗಳು ಚಿರತೆಗೆ ಬಲಿಯಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂತಹ ಘಟನೆಗಳಿಂದಾಗಿ ಸಾಕು ಪ್ರಾಣಿಗಳ ರಕ್ಷಣೆಗಾಗಿ ಈಗ ಅನೇಕರು ತಮ್ಮ ನಾಯಿಗಳನ್ನು ಪಂಜರದಲ್ಲಿ ಇರಿಸುತ್ತಿದ್ದಾರೆ. ಹಗಲಲ್ಲೇ ನಡೆದ ಈ ದಾಳಿಯಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.




    #dakshinakannada
    Previous Articleಪ್ರಾಮಾಣಿಕತೆಗೆ ಸಿಕ್ಕಿತು ₹1 ಲಕ್ಷ ಬಹುಮಾನ; ಕಳೆದುಹೋದ ಚಿನ್ನದ ಬ್ರೆಸ್‌ಲೆಟ್ ಹಿಂತಿರುಗಿಸಿದ ಮಹಿಳೆ
    Next Article ಮಂಗಳೂರಿನಲ್ಲಿ ಸಿನಿಮೀಯ ಘಟನೆ: ಪೊಲೀಸರ ಕಣ್ಣಿಗೆ ಮಣ್ಣು ಎರಚಿ ಕೈಕೋಳದೊಂದಿಗೆ ಪರಾರಿಯಾದ ಸರಗಳ್ಳ

    Related Posts

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ: ಮಂಗಳೂರು–ಕಾರವಾರ–ಗೋವಾ ಕ್ರೂಸ್‌ ಸೇವೆಗೆ ಒತ್ತು

    September 6, 2026

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.