ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಎಂದು ಗುರುತಿಸಲಾಗಿದೆ.
ವಿಟ್ಲದ ಮಂಗಿಲಪದವು ಬಸ್ ತಂಗುದಾಣದ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದರು.
ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಲಾಗಿದ್ದ 300 ರೂಪಾಯಿ ನಗದನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.








