Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ಮಂಗಳೂರು ವ್ಯಾಪಾರ ತೆರವು ವೇಳೆ ಉದ್ವಿಗ್ನತೆ; ವ್ಯಾಪಾರಿಗಳನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದ ಪೊಲೀಸರು
    Uncategorized

    ಮಂಗಳೂರು ವ್ಯಾಪಾರ ತೆರವು ವೇಳೆ ಉದ್ವಿಗ್ನತೆ; ವ್ಯಾಪಾರಿಗಳನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದ ಪೊಲೀಸರು

    adminBy adminJune 29, 2026No Comments1 Min Read

    ಮಂಗಳೂರು: ಪುರಭವನದ ಸಮೀಪದ ಫುಟ್‌ಪಾತ್‌ನಲ್ಲಿ ಬೀದಿಬದಿ ವ್ಯಾಪಾರ ನಡೆಸುತ್ತಿದ್ದವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯ ವೇಳೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲೇ ಇದ್ದು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

    ಕಾರ್ಯಾಚರಣೆ ಆರಂಭಕ್ಕೂ ಮುನ್ನ ವ್ಯಾಪಾರಿಗಳೊಂದಿಗೆ ಮಾತನಾಡಿದ ಆಯುಕ್ತರು, “ಈ ಸ್ಥಳದಲ್ಲಿ ಕಾನೂನು ಹಾಗೂ ನಿಯಮಗಳ ಪ್ರಕಾರ ವ್ಯಾಪಾರ ನಡೆಸಲು ಅವಕಾಶವಿಲ್ಲ” ಎಂದು ತಿಳಿಸಿ, ತೆರವುಗೊಳಿಸುವಂತೆ ಸೂಚಿಸಿದರು. ಆದರೆ ಹಲವು ವರ್ಷಗಳಿಂದ ಇಲ್ಲೇ ಜೀವನೋಪಾಯ ನಡೆಸುತ್ತಿರುವುದಾಗಿ ಹೇಳಿದ ವ್ಯಾಪಾರಿಗಳು, ತಮ್ಮ ಸಂಕಷ್ಟವನ್ನು ವಿವರಿಸಿ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

    “ನಾವು ಕಳೆದ ನಲವತ್ತು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಪ್ರಾಮಾಣಿಕವಾಗಿ ದುಡಿದು ಜೀವನ ಸಾಗಿಸುತ್ತಿದ್ದೇವೆ. ನಮಗೆ ಪರ್ಯಾಯ ಸ್ಥಳ ಒದಗಿಸಿ,” ಎಂದು ವ್ಯಾಪಾರಿಗಳು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, “ಬದಲಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

    ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವ್ಯಾಪಾರಿಗಳು, “ಹಾಗೆ ಹೇಳಬೇಡಿ ಸಾರ್… ನಮಗೆ ನ್ಯಾಯ ದೊರಕುವಂತೆ ಮಾಡಿ” ಎಂದು ಮತ್ತೊಮ್ಮೆ ಮನವಿ ಮಾಡಿಕೊಂಡರು. ಆದಾಗ್ಯೂ, ನಿಯಮ ಉಲ್ಲಂಘಿಸಿ ಯಾರಾದರೂ ವ್ಯಾಪಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರವಿಚಂದ್ರ ನಾಯಕ್ ಎಚ್ಚರಿಕೆ ನೀಡಿದರು.

    ಇದೇ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿ ಪ್ರತಿಭಟನೆಗೆ ಮುಂದಾದ ಕೆಲ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಬಳಿಕ ಮಹಾನಗರ ಪಾಲಿಕೆ ಸಿಬ್ಬಂದಿ ಫುಟ್‌ಪಾತ್‌ನಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಮುಂದುವರಿಸಿದರು.




    #dakshinakannada
    Previous Articleಗುಟ್ಕಾ, ಪಾನ್‌ಮಸಾಲಾದಲ್ಲಿ ಅಮಲು ಅಂಶ ಇದ್ದರೆ ಸಂಪೂರ್ಣ ನಿಷೇಧ: ಡಿಕೆಶಿ ಸ್ಪಷ್ಟನೆ
    Next Article ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್ ಪ್ರಕರಣ: ಡಿಜಿಟಲ್ ಸಾಕ್ಷ್ಯ ಆಧರಿಸಿ ಆರೋಪಿಯ ಬಂಧನ

    Related Posts

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.