Close Menu
    What's Hot

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ಭಾರೀ ಮಳೆಗೆ ನಾಗುರಿಯಲ್ಲಿ ಭೀಕರ ಭೂಕುಸಿತ: ಕಳಪೆ ಕಾಮಗಾರಿ ಶಂಕೆ ನಡುವೆ ಮೂವರು ಬಲಿ, ಪರಿಹಾರ ಘೋಷಿಸಿದ ಜಿಲ್ಲಾಡಳಿತ
    Uncategorized

    ಭಾರೀ ಮಳೆಗೆ ನಾಗುರಿಯಲ್ಲಿ ಭೀಕರ ಭೂಕುಸಿತ: ಕಳಪೆ ಕಾಮಗಾರಿ ಶಂಕೆ ನಡುವೆ ಮೂವರು ಬಲಿ, ಪರಿಹಾರ ಘೋಷಿಸಿದ ಜಿಲ್ಲಾಡಳಿತ

    adminBy adminJuly 1, 2026No Comments2 Mins Read

    ಮಂಗಳೂರು: ಭಾರೀ ಮಳೆಯಿಂದ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತಕ್ಕೆ ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿತವೇ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

    ನಾಗುರಿಯಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ದುರಂತ ಸಂಭವಿಸಿತ್ತು. ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಮನೆಗೆ ಬಿದ್ದಿದ್ದು, ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ.

    ಮೃತರನ್ನು
    1) ಅನಾಮಿಕ ಚೌರಾಸಿಯ (8 ವರ್ಷ)
    2) ಪರಿ (4 ವರ್ಷ)
    3) ಶಾಂತ (46 ವರ್ಷ)
    ಎಂದು ಗುರುತಿಸಲಾಗಿದೆ.

    ಇನ್ನು ಮಣ್ಣಿನಡಿ ಸಿಲುಕಿದ್ದ ಮೂವರನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

    ಬದುಕುಳಿದವರನ್ನು
    1) ಅಲ್ಕಾ (14 ವರ್ಷ)
    2) ಅನುಷಾ (11 ವರ್ಷ)
    3) ಬಾಲಕೃಷ್ಣ (48 ವರ್ಷ)
    ಎಂದು ಗುರುತಿಸಲಾಗಿದೆ.

    ಮೃತರು ಹಾಗೂ ರಕ್ಷಿಸಲ್ಪಟ್ಟವರು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಳೆದ ಸುಮಾರು 20 ವರ್ಷಗಳಿಂದ ಮಂಗಳೂರು ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

    ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಕಾಮಗಾರಿ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಳೆಗಾಲದ ನೀರಿನ ಒತ್ತಡದಿಂದ ಗೋಡೆ ದುರ್ಬಲಗೊಂಡು ಕುಸಿದಿರಬಹುದೇ ಅಥವಾ ನಿರ್ಮಾಣದಲ್ಲಿ ದೋಷವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
    ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಕಾಮಗಾರಿ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಳೆಗಾಲದ ನೀರಿನ ಒತ್ತಡದಿಂದ ಗೋಡೆ ದುರ್ಬಲಗೊಂಡು ಕುಸಿದಿರಬಹುದೇ ಅಥವಾ ನಿರ್ಮಾಣದಲ್ಲಿ ದೋಷವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

    ಈ ಕುರಿತು ಮಾತನಾಡಿದ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ಕಾಂಪೌಂಡ್ ಗೋಡೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತವಾಗಿ ಗುಡ್ಡ ಅಗೆದಿರುವುದು ಕಂಡುಬಂದರೂ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

    ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದ್ದು, ವೈಜ್ಞಾನಿಕ ಕಾರಣಗಳನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ತಾಂತ್ರಿಕ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಾಗುರಿ ದುರಂತದಿಂದಾಗಿ ಮಳೆಗಾಲದಲ್ಲಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ ಹಾಗೂ ನಿರ್ಮಾಣ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.

    ಈ ಭೀಕರ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ರೂಪಾಯಿಗಳ ತುರ್ತು ಪರಿಹಾರವನ್ನು ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.




    #dakshinakannada
    Previous Articleಶಂಕಿತ ಉಗ್ರನಿಗೆ ಪಾಸ್‌ಪೋರ್ಟ್ ನೆರವು ಪ್ರಕರಣ: ಟ್ರಾವೆಲ್ ಏಜೆಂಟ್ ಅರ್ಜಿ ವಜಾ ಮಾಡಿದ ಹೈಕೋರ್ಟ್
    Next Article ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ಶವದಲ್ಲಿ ಪ್ರಮುಖ ಅಂಗಾಂಗಗಳು ನಾಪತ್ತೆ!

    Related Posts

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.