ಮಂಗಳೂರು: ಗಂಜಿಮಠ ಮತ್ತು ಎಡಪದವು ಸೇತುವೆ ಸಂಪರ್ಕ ರಸ್ತೆಯಲ್ಲಿ ಕಳಪೆ ಕಾಮಗಾರಿ ಹಿನ್ನೆಲೆ ರಸ್ತೆ ಕುಸಿದಿದ್ದು, ಗುರುವಾರ ಮುಂಜಾನೆ ಲಾರಿಯೊಂದು ಭೂಕುಸಿತದ ಭಾಗದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.

ಹೈವೇ ಸೇತುವೆ ಸಮೀಪ ನಡೆದ ಈ ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಸ್ತೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಲಾರಿಯನ್ನು ಹೊರತೆಗೆಯುವ ಕಾರ್ಯ ನಡೆಸಲಾಗಿದ್ದು, ರಸ್ತೆ ಸುರಕ್ಷತೆ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.









