Close Menu
    What's Hot

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ರಾಜ್ಯಾದ್ಯಂತ ಕ್ರಷರ್ ಬಂದ್: ಜಲ್ಲಿಕಲ್ಲು, ಎಂ-ಸ್ಯಾಂಡ್ ಸರಬರಾಜು ಸ್ಥಗಿತದ ಭೀತಿ
    ಕರ್ನಾಟಕ

    ರಾಜ್ಯಾದ್ಯಂತ ಕ್ರಷರ್ ಬಂದ್: ಜಲ್ಲಿಕಲ್ಲು, ಎಂ-ಸ್ಯಾಂಡ್ ಸರಬರಾಜು ಸ್ಥಗಿತದ ಭೀತಿ

    adminBy adminJuly 2, 2026Updated:July 2, 2026No Comments1 Min Read

    ಬೆಂಗಳೂರು:ರಾಜ್ಯ ಸರ್ಕಾರವು ಸ್ಟೋನ್ ಕ್ರಷರ್ ಮಾಲೀಕರಿಗೆ ಸುಮಾರು ₹4,850 ಕೋಟಿ ರಾಯಲ್ಟಿ ಮತ್ತು ದಂಡ ಪಾವತಿಸುವಂತೆ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಕ್ರಷರ್ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉದ್ಯಮಿಗಳು, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

    ಮುಷ್ಕರದ ಪರಿಣಾಮವಾಗಿ ಜಲ್ಲಿಕಲ್ಲು ಹಾಗೂ ಎಂ-ಸ್ಯಾಂಡ್ ಉತ್ಪಾದನೆ ಮತ್ತು ಸರಬರಾಜು ಸ್ಥಗಿತಗೊಂಡಿದ್ದು, ನಿರ್ಮಾಣ ಕ್ಷೇತ್ರದ ಮೇಲೆ ಅದರ ಪರಿಣಾಮ ಗೋಚರಿಸಲು ಆರಂಭವಾಗಿದೆ. ಬೆಂಗಳೂರು, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ನೂರಾರು ಕ್ರಷರ್‌ಗಳು ಇಂದಿನಿಂದಲೇ ಕಾರ್ಯಾಚರಣೆ ನಿಲ್ಲಿಸಿವೆ.

    ಸರ್ಕಾರವು ಅವೈಜ್ಞಾನಿಕ ಹಾಗೂ ನಿಯಮಬಾಹಿರವಾಗಿ ಭಾರೀ ಪ್ರಮಾಣದ ದಂಡ ವಿಧಿಸಿದೆ ಎಂದು ಆರೋಪಿಸಿರುವ ಕ್ರಷರ್ ಮಾಲೀಕರು, ಈ ನಿರ್ಧಾರದಿಂದ ಮೆಟ್ರೋ ಸೇರಿದಂತೆ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೂ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ತುಮಕೂರು, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಷ್ಕರದ ಪರಿಣಾಮ ತಟ್ಟಿದೆ. ಕ್ರಷರ್ ಉದ್ಯಮವನ್ನು ಅವಲಂಬಿಸಿರುವ ಸಾವಿರಾರು ಕಾರ್ಮಿಕರು ಮತ್ತು ಲಾರಿ ಚಾಲಕರು ಉದ್ಯೋಗದ ಅನಿಶ್ಚಿತತೆಯನ್ನು ಎದುರಿಸುತ್ತಿದ್ದು, ಕ್ರಷರ್ ಮಾಲೀಕರ ಸಂಘದ ಪದಾಧಿಕಾರಿಗಳು ತುರ್ತು ಸಭೆ ನಡೆಸಿ ಸರ್ಕಾರ ಕೂಡಲೇ ದಂಡದ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

    ಕರಾವಳಿ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲೂ ಕ್ವಾರಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಈಗಾಗಲೇ ಮುಂಗಾರು ಮಳೆಯಿಂದ ನಿರ್ಮಾಣ ಕಾಮಗಾರಿಗಳು ನಿಧಾನಗೊಂಡಿರುವ ಹಿನ್ನೆಲೆಯಲ್ಲಿ, ಜಲ್ಲಿಕಲ್ಲು ಮತ್ತು ಎಂ-ಸ್ಯಾಂಡ್ ಕೊರತೆ ಉಂಟಾದರೆ ಮನೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಮತ್ತಷ್ಟು ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕ್ರಷರ್ ಮಾಲೀಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.




    #dakshinakannada #karnataka
    Previous Articleಗಾಂಜಾ ಮಾರಾಟ ವಿರೋಧಿಸಿದ್ದ ಅಜ್ಜಿಯ ಕೊಲೆ: ಮೊಮ್ಮಗನ ಕಾಲಿಗೆ ಪೊಲೀಸರ ಫೈರಿಂಗ್
    Next Article ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಯ ಸ್ಥಿತಿ ಗಂಭೀರ

    Related Posts

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಶಾಸಕ ಅಶೋಕ್ ರೈ ಆರೋಪ ನಿರಾಕರಿಸಿ ವರ್ಗಾವಣೆಗೆ ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಮನವಿ

    September 4, 2026

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.