Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಎಡಿಎಲ್‌ಆರ್ ಕಚೇರಿಯಲ್ಲಿ ಭಾರೀ ಹಗರಣ; ಯೂಸರ್ ಐಡಿ, ಪಾಸ್‌ವರ್ಡ್ ಖಾಸಗಿ ವ್ಯಕ್ತಿಗೆ ನೀಡಿ ಅಕ್ರಮ
    ಅಪರಾಧ

    ಎಡಿಎಲ್‌ಆರ್ ಕಚೇರಿಯಲ್ಲಿ ಭಾರೀ ಹಗರಣ; ಯೂಸರ್ ಐಡಿ, ಪಾಸ್‌ವರ್ಡ್ ಖಾಸಗಿ ವ್ಯಕ್ತಿಗೆ ನೀಡಿ ಅಕ್ರಮ

    adminBy adminJuly 6, 2026No Comments2 Mins Read

    ಮಂಡ್ಯ,: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಹಗರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಕಚೇರಿಯ ರಹಸ್ಯ ಯೂಸರ್ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ಖಾಸಗಿ ವ್ಯಕ್ತಿಗೆ ನೀಡಿ, ಆತನ ಮೂಲಕ ಅಕ್ರಮ ಎಸಗುತ್ತಿದ್ದ 8 ಮಂದಿ ಸರ್ಕಾರಿ ಸಿಬ್ಬಂದಿ ಹಾಗೂ ಒಬ್ಬ ಖಾಸಗಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದಿಢೀರ್ ಬಂಧನದಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ.

    ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಮುಖ್ಯ ಎಡಿಎಲ್‌ಆರ್ ಅಧಿಕಾರಿ ಮೊಹಮ್ಮದ್ ಹುಸೇನ್ ಅವರು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಚೇರಿಯಿಂದ ಪರಾರಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಸರ್ವೆ ಮೇಲ್ವಿಚಾರಕ ಯೋಗರಾಜ್, ಭೂಮಾಪಕರಾದ ಅರವಿಂದ್, ಜಯಬೋರೇಗೌಡ, ದಯಾನಂದ್, ಮಧು, ರಮೇಶ್, ಹರೀಶ್, ನೇಹಾ ಸಾರಿಕಾ ಮಲ್ಲಿ ಸಿ. ಮತ್ತು ಖಾಸಗಿ ವ್ಯಕ್ತಿ ನಿತಿನ್ ಪ್ರೇಮಾನಂದ ಮಹಾಲೆ ಬಂಧಿತ ಆರೋಪಿಗಳಾಗಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಅಧಿಕಾರಿಗಳು ಶಾಮೀಲಾಗಿ ಸುಮಾರು 200 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ಖಾತೆ ಸೃಷ್ಟಿಸಿ ಲೂಟಿ ಮಾಡುತ್ತಿದ್ದಾರೆ ಎಂದು ನಾಗೇಂದ್ರ ಎಂಬುವರು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚೇತನಾ ಯಾದವ್, ಪಿಡಿಒ ಜಿ.ಆರ್. ನಾಗೇಂದ್ರ, ಎಡಿಎಲ್‌ಆರ್ ಮೊಹಮ್ಮದ್ ಹುಸೇನ್ ಹಾಗೂ ಎಸಿ ಶ್ರೀನಿವಾಸ್ ಅವರ ಕಚೇರಿಗಳ ಮೇಲೆ ದಾಳಿ ನಡೆಸಲು ಜಸ್ಟಿಸ್ ವೀರಪ್ಪ ವಾರಂಟ್ ಹೊರಡಿಸಿದ್ದರು.

    ಲೋಕಾಯುಕ್ತ ಪೊಲೀಸರು ಎಡಿಎಲ್‌ಆರ್ ಕಚೇರಿಯನ್ನು ಪರಿಶೀಲಿಸಿದಾಗ, ಖಾಸಗಿ ವ್ಯಕ್ತಿ ನಿತಿನ್ ಪ್ರೇಮಾನಂದ ಮಹಾಲೆ ಎಂಬಾತ ಅಲ್ಲಿ ಅಧಿಕೃತ ಸರ್ಕಾರಿ ನೌಕರನಂತೆ ಕುಳಿತು ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ. ತನಿಖೆ ವೇಳೆ ಹಲವು ರಹಸ್ಯಗಳು ಬಯಲಾಗಿದೆ. ಸರ್ಕಾರಿ ನೌಕರರು ಸರ್ಕಾರದ ಅಧಿಕೃತ ಸರ್ವೆ ಪೋರ್ಟಲ್‌ಗೆ ಲಾಗಿನ್ ಆಗಲು ಬಳಸುವ ಯೂಸರ್ ಐಡಿ, ಪಾಸ್‌ವರ್ಡ್ ಹಾಗೂ ಮೊಬೈಲ್‌ಗೆ ಬರುವ ಒಟಿಪಿಗಳನ್ನು ನಿತಿನ್ ಪ್ರೇಮಾನಂದ ಮಹಾಲೆ ವ್ಯಕ್ತಿಗೆ ಹಂಚಿಕೊಂಡಿದ್ದರು.

    ಡಿಜಿಟಲ್ ಪೋರ್ಟಲ್‌ನಲ್ಲಿ ಆಕಾರ್‌ಬಂದ್ ದಾಖಲೆಗಳು ಮತ್ತು ಇತರೆ ದತ್ತಾಂಶಗಳನ್ನು ನಮೂದಿಸಲು ಈ ನೌಕರರು ತಮ್ಮ ಸ್ವಂತ ಜೇಬಿನಿಂದ ಮಹಾಲೆಗೆ ತಿಂಗಳಿಗೆ 15,000 ರೂ. ಸಂಬಳ ನೀಡುತ್ತಿದ್ದರು. ಸಾರ್ವಜನಿಕರಿಂದ ಕೆಲಸ ಮಾಡಿಕೊಡಲು ಪಡೆಯುತ್ತಿದ್ದ ಲಂಚದ ಹಣವನ್ನುನಿತಿನ್ ಪ್ರೇಮಾನಂದ ಮಹಾಲೆ ತನ್ನ ಮೊಬೈಲ್‌ನ ಡಿಜಿಟಲ್ ಪೇಮೆಂಟ್ ಆ್ಯಪ್‌ಗಳ ಮೂಲಕ ಸಿಬ್ಬಂದಿಗಳ ಪರವಾಗಿ ವಸೂಲಿ ಮಾಡುತ್ತಿದ್ದ.
    ಮುಖ್ಯ ಅಧಿಕಾರಿ ಹುಸೇನ್ ಮತ್ತುಮಹಾಲೆ ಇಬ್ಬರೂ ಮೈಸೂರಿನ ಶಿವರಾತ್ರೀಶ್ವರ ನಗರದ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಈ ಮನೆಯ ಮೇಲೆ ದಾಳಿ ನಡೆಸಿದಾಗ ಹುಣಸೂರು, ಸಕಲೇಶಪುರ ಮತ್ತು ಕೋಲಾರದ ತಹಶೀಲ್ದಾರ್ ಹಾಗೂ ಸರ್ವೇಯರ್‌ಗಳ ಸಹಿ ಇರುವ ನಕಲಿ ದಾಖಲೆಗಳು ಮತ್ತು ನಕಲಿ ಸೀಲುಗಳು ಪತ್ತೆಯಾಗಿವೆ. ಜೊತೆಗೆ 1.40 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಮಹಾಲೆಯ ಬ್ಯಾಂಕ್ ಖಾತೆಯಲ್ಲಿ ಲಕ್ಷಾಂತರ ರೂಪಾಯಿಗಳ ಅಕ್ರಮ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಉಪ ಲೋಕಾಯುಕ್ತ ಜಸ್ಟಿಸ್ ಬಿ. ವೀರಪ್ಪ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ತಹಶೀಲ್ದಾರ್ ಹಾಗೂ ಅಸಿಸ್ಟೆಂಟ್ ಕಮಿಷನರ್ ಕಚೇರಿಗಳ ಮೇಲಿನ ಶೋಧ ಕಾರ್ಯ ಇನ್ನು ಮುಂದುವರಿದಿದ್ದು, ತನಿಖೆ ನಡೆಯುತ್ತಿದೆ.




    #crime #karnataka
    Previous Articleಜಿಮ್ ಟ್ರೈನರ್ ಸಚಿನ್ ರೈ ಮೃತ್ಯು ಪ್ರಕರಣ; ಸಾವಿನ ಬಗ್ಗೆ ತಾಯಿ ಸಂಶಯ ವ್ಯಕ್ತಪಡಿಸಿ ದೂರು
    Next Article ಮದುವೆಯಾದ ಮೂರು ತಿಂಗಳಲ್ಲೇ ನವವಿವಾಹಿತೆಯ ಕೊಲೆ; ಪತಿ ಮತ್ತು ಪ್ರೇಯಸಿ ಅರೆಸ್ಟ್

    Related Posts

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.