Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಇನ್‌ಸ್ಟಾಗ್ರಾಮ್ ಪರಿಚಯದಿಂದ ಅಪ್ರಾಪ್ತೆಗೆ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು
    ಅಪರಾಧ

    ಇನ್‌ಸ್ಟಾಗ್ರಾಮ್ ಪರಿಚಯದಿಂದ ಅಪ್ರಾಪ್ತೆಗೆ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು

    adminBy adminJuly 11, 2026Updated:July 11, 2026No Comments2 Mins Read

    ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಬೆಳೆಸಿ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ ಪ್ರಕರಣದಲ್ಲಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ ₹50 ಸಾವಿರ ದಂಡ ಪಾವತಿಸುವಂತೆ ಆದೇಶಿಸಲಾಗಿದೆ.

    ಈ ಪ್ರಕರಣದಲ್ಲಿ ಗುರುಪುರ ಮೂಡೂರು ಕೆಳಗಿನಕೆರೆಮನೆ ನಿವಾಸಿ ಹಾಗೂ ಕಾರು ಚಾಲಕನಾಗಿರುವ ಆಫ್ರಿದಿ ಅಲಿಯಾಸ್ ಆಫ್ರಿ (20) ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆಯಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ತನಿಖೆ ಪ್ರಕಾರ, ಬಂಟ್ವಾಳ ತಾಲೂಕಿನ 17 ವರ್ಷದ ಬಾಲಕಿ ಫ್ಯಾಷನ್ ಡಿಸೈನಿಂಗ್ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಆಫ್ರಿದಿಯೊಂದಿಗೆ ಪರಿಚಯ ಬೆಳೆದಿತ್ತು. ಮೊದಲಿಗೆ ಸ್ನೇಹಪೂರ್ಣವಾಗಿ ಮಾತನಾಡಿದ ಆರೋಪಿ, ನಂತರ ಮದುವೆಯ ಭರವಸೆ ನೀಡಿ ಆಕೆಯ ವಿಶ್ವಾಸ ಗಳಿಸಿದ್ದಾನೆ ಎನ್ನಲಾಗಿದೆ.

    2024ರ ಮೇ 27ರಂದು ಬಾಲಕಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದಾಗ ಅಲ್ಲಿಗೆ ತೆರಳಿದ ಆರೋಪಿ ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಆರೋಪಿಯು, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ನಿರಂತರವಾಗಿ ಕಿರುಕುಳ ನೀಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    ಆರೋಪಿಯ ಬೆದರಿಕೆ ಮತ್ತು ಕಿರುಕುಳದಿಂದ ಬೇಸತ್ತ ಬಾಲಕಿಯ ಕುಟುಂಬವು ಬಂಟ್ವಾಳದಿಂದ ಬೆಳ್ತಂಗಡಿ ತಾಲೂಕಿನ ಮತ್ತೊಂದು ಬಾಡಿಗೆ ಮನೆಗೆ ಸ್ಥಳಾಂತರಗೊಂಡಿತ್ತು. ಆದರೆ ಆರೋಪಿಯು ಹೊಸ ವಿಳಾಸವನ್ನೂ ಪತ್ತೆಹಚ್ಚಿ ಅಲ್ಲಿಗೂ ತೆರಳಿ ಮತ್ತೆ ದೌರ್ಜನ್ಯ ಎಸಗಿದ್ದಾನೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ.

    ಘಟನೆಯ ಪರಿಣಾಮ ಮಾನಸಿಕವಾಗಿ ತೀವ್ರ ನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದ್ದು, ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್. ಮಾನು ಅವರು ಆರೋಪಿಗೆ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ನಾಲ್ಕು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕೆಂದು ಸೂಚಿಸಲಾಗಿದೆ.

    ಜೀವ ಬೆದರಿಕೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರಡಿ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡವೂ ವಿಧಿಸಲಾಗಿದೆ. ಈ ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ.

    ಇದಲ್ಲದೆ, ಸಂತ್ರಸ್ತ ಬಾಲಕಿಗೆ ₹6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್ ರವಿ ಬಿ.ಎಸ್. ನಡೆಸಿದ್ದು, ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.




    #dakshinakannada
    Previous Articleಜೈಲಿನಲ್ಲಿ ಅಮೆರಿಕನ್ ಆಹಾರ ಬೇಕೆಂದು ದೆಹಲಿ ನ್ಯಾಯಾಲಯಕ್ಕೆ ಮೊರೆ ಹೋದ ಅಮೆರಿಕನ್ ಕೈದಿ
    Next Article ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಕಂಡಕ್ಟರ್ ಬಂಧನ

    Related Posts

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.