ಬಂಟ್ವಾಳ : ಸದಾ ಗಿಜಿಗುಡುವ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ (KSRTC) ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಅತ್ಯಂತ ಆಘಾತಕಾರಿ ಘಟನೆ ಸಂಭವಿಸಿದೆ.
ದಾಳಿಗೊಳಗಾದ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ

ದಾಳಿಯಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ತಕ್ಷಣ ವೇ ಸ್ಥಳೀಯರ ನೆರವಿನೊಂದಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಸಂಜೆ ವೇಳೆಗೆ ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಯುವತಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ನುಗ್ಗಿದ ಅಪರಿಚಿತ ವ್ಯಕ್ತಿ, ಹರಿತವಾದ ಮಾರಕಾಸ್ತ್ರದಿಂದ ಆಕೆಯ ಮೇಲೆ ಎರಗಿ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಯುವತಿ ರಕ್ತದ ಮಡುವಿನಲ್ಲಿ ರಸ್ತೆಗೆ ಬೀಳುತ್ತಿದ್ದಂತೆ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿಗೆ ನಿಖರ ಕಾರಣವೇನು? ಆರೋಪಿ ಹಾಗೂ ಗಾಯಾಳು ಯುವತಿ ಯಾರು? ಎಂಬಿತ್ಯಾದಿ ವಿವರಗಳು ಇನ್ನೂ ಲಭ್ಯವಾಗಿಲ್ಲ. ಬಂಟ್ವಾಳ ಪೊಲೀಸರು ಬಸ್ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.








