Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ 22 ಲಕ್ಷ ರೂ. ವಂಚನೆ; ನಿವೃತ್ತ ಬ್ಯಾಂಕ್ ಉದ್ಯೋಗಿ ಮೋಸಕ್ಕೆ ಬಲಿ
    ಅಪರಾಧ

    ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ 22 ಲಕ್ಷ ರೂ. ವಂಚನೆ; ನಿವೃತ್ತ ಬ್ಯಾಂಕ್ ಉದ್ಯೋಗಿ ಮೋಸಕ್ಕೆ ಬಲಿ

    adminBy adminJuly 18, 2026No Comments2 Mins Read

    ಉಡುಪಿ : ಮುಂಬೈನ ಕೊಲಬಾ ಸೈಬರ್ ಕ್ರೈಂ ಹಾಗೂ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ, ಕೋಟ್ಯಂತರ ರೂಪಾಯಿ ಮನಿ ಲಾಂಡರಿಂಗ್ ಆರೋಪದಡಿ ಬೆದರಿಸಿ ಬರೋಬ್ಬರಿ 22 ಲಕ್ಷ ರೂಪಾಯಿ ಹಣವನ್ನು ದೋಚಿರುವ ಸೈಬರ್ ವಂಚನೆ ಪ್ರಕರಣ ಉಡುಪಿ ಸೈಬರ್ ಕ್ರೈಂ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಉಡುಪಿ ತಾಲೂಕಿನ ನಿವಾಸಿ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೈಟೆಕ್ ಕಳ್ಳರ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ದುರ್ದೈವಿಯಾಗಿದ್ದಾರೆ.

    ಜುಲೈ 10 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಜಯಕರ ಕಾಮತ್ ಅವರ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್ ವಿಡಿಯೋ ಕಾಲ್ ಬಂದಿತ್ತು. ಕರೆ ಸ್ವೀಕರಿಸಿದಾಗ ಎದುರಿದ್ದ ವ್ಯಕ್ತಿ ಪೊಲೀಸ್ ಯುನಿಫಾರ್ಮ್ ಧರಿಸಿದ್ದನು. “ನಾವು ಮುಂಬೈನ ಕೊಲಬಾ ಸೈಬರ್ ಕ್ರೈಂ ಠಾಣೆಯಿಂದ ಮಾತನಾಡುತ್ತಿದ್ದೇವೆ. ಮುಂಬೈನ ಕೆನರಾ ಬ್ಯಾಂಕ್‌ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆಯಿದ್ದು, ಅದರ ಮೂಲಕ ನೂರಾರು ಕೋಟಿ ರೂಪಾಯಿ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ನಡೆದಿದೆ” ಎಂದು ಬ್ಯಾಂಕ್ ಸ್ಟೇಟ್‌ಮೆಂಟ್ ಹಾಗೂ ಎಟಿಎಂ ಕಾರ್ಡ್ ತೋರಿಸಿ ಜಯಕರ ಅವರನ್ನು ತೀವ್ರ ಆತಂಕಕ್ಕೆ ತಳ್ಳಿದ್ದಾನೆ.

    ಇದಾದ ಬಳಿಕ ಜುಲೈ 11 ರಿಂದ ಜುಲೈ 16 ರವರೆಗೆ ಸತತ 5 ದಿನಗಳ ಕಾಲ 7815889979 ನಂಬರ್‌ನಿಂದ ಪದೇ ಪದೇ ವಾಟ್ಸಾಪ್ ಕರೆಗಳನ್ನು ಮಾಡಲಾಗಿದೆ. ತಾವೇ ಉನ್ನತ ಪೊಲೀಸ್ ಅಧಿಕಾರಿ ‘ವಿಶ್ವಾಸ್ ಎಡಿಜಿಪಿ’, ‘ಅನಿಲ್ ಕುಮಾರ್’, ಇ.ಡಿ (ಜಾರಿ ನಿರ್ದೇಶನಾಲಯ) ಹಾಗೂ ಸಿಬಿಐ ಅಧಿಕಾರಿಗಳೆಂದು ಸೋಗು ಹಾಕಿದ ವಂಚಕರು, ಜಯಕರ ಅವರನ್ನು ಸಂಪೂರ್ಣವಾಗಿ ತಮ್ಮ ನಿಯಂತ್ರಣಕ್ಕೆ (Digital Arrest) ತಂದುಕೊಂಡಿದ್ದಾರೆ. “ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಫಂಡ್ ವೆರಿಫಿಕೇಶನ್ (ಖಾತೆ ತಪಾಸಣೆ) ಮಾಡಬೇಕಿದೆ. ತಪಾಸಣೆ ಮುಗಿದ ತಕ್ಷಣ ಹಣ ವಾಪಸ್ ಬರುತ್ತದೆ” ಎಂದು ನಂಬಿಸಿ, ಹೆದರಿಸಿ ಆರ್ ಟಿ ಜಿ ಎಸ್ (RTGS) ಮೂಲಕ ಹಂತಹಂತವಾಗಿ ಒಟ್ಟು 22 ಲಕ್ಷ ರೂಪಾಯಿ ಹಣವನ್ನು ವಂಚಕರು ತಾವೇ ನೀಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

    ಹಣ ವರ್ಗಾವಣೆಯಾದ ಬಳಿಕ ಇದು ಸೈಬರ್ ವಂಚನೆ ಎಂದು ಅರಿತ ಜಯಕರ ಕಾಮತ್ ಅವರು ಉಡುಪಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.




    #crime #dakshinakannada
    Previous Article₹80 ಲಕ್ಷ ಬ್ಲಡ್ ಮನಿ ನೀಡಿ ಸೌದಿ ಜೈಲಿನಿಂದ ಬಿಡುಗಡೆ; ಈಗ ಡ್ರಗ್ಸ್ ಜಾಲದ ಕಿಂಗ್‌ಪಿನ್
    Next Article ಮೂಡುಬಿದಿರೆಯಲ್ಲಿ ಮಹಿಳೆಯ ಆತ್ಮಹತ್ಯೆ; ಕಾರಣ ನಿಗೂಢ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.