Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಮಗನ ಅಗಲಿಕೆಯ ನೋವು ತಾಳಲಾರದೆ ತಂದೆಯ ದುರಂತ ಅಂತ್ಯ
    ರಾಷ್ಟ್ರೀಯ

    ಮಗನ ಅಗಲಿಕೆಯ ನೋವು ತಾಳಲಾರದೆ ತಂದೆಯ ದುರಂತ ಅಂತ್ಯ

    adminBy adminJuly 20, 2026No Comments2 Mins Read

    ಕೇರಳ : ಹೆಂಡತಿ ತನ್ನ ಬಿಟ್ಟು ಹೋದರೂ ಮಗನೇ ತನ್ನ ಪ್ರಪಂಚ ಎಂದು ಬದುಕಿದ್ದ ತಂದೆಯೊಬ್ಬ, ನ್ಯಾಯಾಲಯದ ಆದೇಶದಂತೆ ತಾಯಿಯ ಜೊತೆ ಮಗನನ್ನು ಕಳುಹಿಸಿಕೊಟ್ಟ ನೋವನ್ನು ತಾಳಲಾರದೆ ಪ್ರಾಣ ಬಿಟ್ಟಿರುವ ಅತ್ಯಂತ ಕರುಣಾಜನಕ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಕುಮಿಲಿಯಲ್ಲಿ ನಡೆದಿದೆ. ಕುಮಿಲಿಯ ಖಾಸಗಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ರಂಜೀಶ್ ಎಂಬುವವರೇ ಮಗನ ಅಗಲಿಕೆಯ ನೋವಿನಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ.

    ಕುಟುಂಬಸ್ಥರ ಮಾಹಿತಿ ಪ್ರಕಾರ, ರಂಜೀಶ್ ಹಾಗೂ ಅವರ ಮಗ ಕೋಝಿಮಲದಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದರು. ಸುಮಾರು ಆರು ವರ್ಷಗಳ ಹಿಂದೆ ರಂಜೀಶ್ ಅವರ ಪತ್ನಿ ಕೆಲಸ ಅರಸಿ ಶಾರ್ಜಾಗೆ ತೆರಳಿದ್ದರು. ಅಲ್ಲಿಗೆ ತೆರಳಿದ ಬಳಿಕ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿ, ರಂಜೀಶ್ ಅವರೊಂದಿಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ದರು. ಆರು ವರ್ಷಗಳ ಕಾಲ ತಾಯಿಯೂ ಇಲ್ಲದೆ, ಒಂಟಿಯಾದ ಮಗನನ್ನು ರಂಜೀಶ್ ಅವರೇ ಅತ್ಯಂತ ಮುತವರ್ಜಿಯಿಂದ, ಎದೆಯಲ್ಲೇ ಇಟ್ಟು ಬೆಳೆಸಿದ್ದರು.

    ಆದರೆ, ಒಂದು ತಿಂಗಳ ಹಿಂದೆ ಶಾರ್ಜಾದಿಂದ ಮನೆಗೆ ಮರಳಿದ್ದ ಪತ್ನಿ, ಬಾಲಕನನ್ನು ತನ್ನ ವಶಕ್ಕೆ ಪಡೆಯಲು ಕಟ್ಟಪ್ಪಣ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮಗನನ್ನು ತಾಯಿಯ ವಶಕ್ಕೆ ಒಪ್ಪಿಸಲು ಆದೇಶಿಸಿತು. ತಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ, ಆರು ವರ್ಷಗಳಿಂದ ಅಮ್ಮನಂತೆ ಸಲಹಿದ್ದ ಮಗ ತನ್ನಿಂದ ದೂರವಾದ ತೀವ್ರ ಮಾನಸಿಕ ಆಘಾತದಿಂದ ರಂಜೀಶ್ ಚೇತರಿಸಿಕೊಳ್ಳಲಿಲ್ಲ. ಮಗನ ಅಗಲಿಕೆಯ ನೋವನ್ನು ತಾಳಲಾರದೆ ರಂಜೀಶ್ ಒಂದು ವಾರದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕಳೆದ ಬುಧವಾರ ಕೊನೆಯುಸಿರೆಳೆದರು.

    ರಂಜೀಶ್ ಅವರ ನಿಧನದ ಬಳಿಕ, ಆರಂಭದಲ್ಲಿ ಪತ್ನಿಯು ಮಗನನ್ನು ತನ್ನ ತಂದೆಯ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕಾಗಲಿ ಕಳುಹಿಸಲು ಒಪ್ಪಲಿಲ್ಲ. ಬಳಿಕ ಸಂಬಂಧಿಕರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿ, ಕೋರ್ಟ್ ಮಧ್ಯಸ್ಥಿಕೆಯಿಂದ ಮಗನನ್ನು ಅಂತ್ಯಕ್ರಿಯೆಗೆ ಕರೆತರಲಾಯಿತು” ಎಂದು ಸ್ಥಳೀಯ ಪಂಚಾಯತ್ ಸದಸ್ಯ ರಾಬಿನ್ ಕರಕ್ಕಡನ್ ಬೇಸರ ವ್ಯಕ್ತಪಡಿಸಿದ್ದಾರೆ.
    ಸೌಮ್ಯ ಸ್ವಭಾವದ ರಂಜೀಶ್ ಅವರ ನಿಧನಕ್ಕೆ ಇಡೀ ಕುಮಿಲಿ ಗ್ರಾಮ ಹಾಗೂ ಅವರ ಬಸ್ ಚಾಲಕ-ಕಂಡಕ್ಟರ್ ಗೆಳೆಯರು ಕಣ್ಣೀರಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ರಂಜೀಶ್ ಅವರ ಹಳೆಯ ವೀಡಿಯೊಗಳು ಹಾಗೂ ಮಗನ ಜೊತೆಗಿನ ನೆನಪುಗಳು ವೈರಲ್ ಆಗುತ್ತಿದ್ದು, ಪ್ರತಿಯೊಬ್ಬರ ಕಣ್ಣಂಚಿನಲ್ಲೂ ಕಣ್ಣೀರು ತರಿಸುತ್ತಿವೆ.




    #national
    Previous Articleಶಿರ್ವ-ಕಟಪಾಡಿ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ ಥಾರ್‌; ನಾಲ್ವರು ಆಸ್ಪತ್ರೆಗೆ ದಾಖಲು
    Next Article ವಿಟ್ಲದಲ್ಲಿ ಅಕ್ರಮ ಮರಳು ದಂಧೆ ಪತ್ತೆ; ಇಬ್ಬರ ಬಂಧನ

    Related Posts

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ‘ಚಂದ್ರನತ್ತ ತಲುಪಿದ ಭಾರತ, ಜಾತಿ ಪಿಡುಗಿನಿಂದ ಇನ್ನೂ ಮುಕ್ತವಾಗಿಲ್ಲ’: ಬಾಂಬೆ ಹೈಕೋರ್ಟ್

    September 5, 2026

    ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಪಂಚಾಯಿತಿ ಅಧ್ಯಕ್ಷನ ಹತ್ಯೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.