Close Menu
    What's Hot

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಜಂತರ್ ಮಂತರ್‌ನಲ್ಲಿ ಹಿಂಸಾಚಾರ; ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್ನೆಟ್ ಸ್ಥಗಿತ
    ರಾಷ್ಟ್ರೀಯ

    ಜಂತರ್ ಮಂತರ್‌ನಲ್ಲಿ ಹಿಂಸಾಚಾರ; ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್ನೆಟ್ ಸ್ಥಗಿತ

    adminBy adminJuly 23, 2026No Comments1 Min Read

    ನವದೆಹಲಿ:  ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ದಿಢೀರ್ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಕಾಕ್ರೋಚ್‌ ಜನತಾ ಪಾರ್ಟಿ  ನೇತೃತ್ವದ ಪ್ರತಿಭಟನೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್‌ ಗ್ಯಾಸ್‌ ಪ್ರಯೋಗ ಮಾಡಿದ್ದಾರೆ.

    ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲು ತೂರಾಟ ನಡೆದಿದೆ. ಈ ಘರ್ಷಣೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 6 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಆಯೋಜಕರ ಮಾತು ಕೇಳದೆ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿ, ಲಾಠಿಗಳನ್ನು ಕಸಿದುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಪರಿಸ್ಥಿತಿ ಕೈಮೀರುತ್ತಿದ್ದಂತೆ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಜ್ಯಾಮರ್‌ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

    ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ತೀವ್ರಗೊಂಡಿದ್ದು, ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳ ಗುಂಪೊಂದು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ. ಈ ಹಠಾತ್ ದಾಳಿಯಲ್ಲಿ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




    #national
    Previous Articleಬಂಟ್ವಾಳದಲ್ಲಿ ಭೀಕರ ದುರಂತ; ಶಾಲಾ ವಾಹನದ ಮೇಲೆ ಬೃಹತ್ ಮರ ಬಿದ್ದು ವಿದ್ಯಾರ್ಥಿನಿ ಸಾವು
    Next Article ಸೌಜನ್ಯ ಪ್ರಕರಣದಲ್ಲಿ ಸಿಬಿಐ ವಿರುದ್ಧ ಸುಪ್ರೀಂ ಅಸಮಾಧಾನ; ಆದೇಶ ಕಾಯ್ದಿರಿಕೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.