ಮಹಾರಾಷ್ಟ್ರ:ಇತ್ತೀಚೆಗೆ ನಡೆದ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದರ ಮಾಸ್ಟರ್ಮೈಂಡ್ ವಿಜಯೇಂದ್ರ ಗುಪ್ತಾನನ್ನು ಬಂಧಿಸಲಾಗಿದೆ.
ಥಾಣೆ ಪೊಲೀಸರು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿ ಗುಪ್ತಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ.
ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಇನ್ನು ಮುಂದೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದ್ದು, ಇಂತಹ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಸೂದೆಯೊಂದನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಥಾಣೆ ಪೊಲೀಸರು, ಬಿಹಾರದಲ್ಲಿ ಅಡಗಿಕೊಂಡಿದ್ದ ಮಾಸ್ಟರ್ಮೈಂಡ್ ವಿಜಯೇಂದ್ರ ಗುಪ್ತಾನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.








