Close Menu
    What's Hot

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೀನುಗಾರ ಮುಖಂಡ ಗಂಗಾಧರ ಪಾಂಗಳ ಅಪಘಾತವೆಂದು ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್; ನಾಲ್ವರಿಗೆ ಜೀವಾವಧಿ ಶಿಕ್ಷೆ
    ಅಪರಾಧ

    ಮೀನುಗಾರ ಮುಖಂಡ ಗಂಗಾಧರ ಪಾಂಗಳ ಅಪಘಾತವೆಂದು ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್; ನಾಲ್ವರಿಗೆ ಜೀವಾವಧಿ ಶಿಕ್ಷೆ

    adminBy adminJuly 28, 2026No Comments2 Mins Read

    ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಎಂಬವರನ್ನು ವಾಹನ ಢಿಕ್ಕಿ ಪಡಿಸಿ ಕೊಲೆ ಮಾಡಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಪುಷ್ಪರಾಜ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು ಎಂದು ತಿಳಿದುಬಂದಿದೆ.

    ಬೈಕಂಪಾಡಿಯ ಮೊಗವೀರ ಮಹಾಸಭಾದ ಅಧ್ಯಕ್ಷರಾಗಿದ್ದ ಸತೀಶ್ ಬೈಕಂಪಾಡಿಯು ಮೀನಕಳಿಯದ ಗೋಪಾಲ ಕೃಷ್ಣ ಭಜನಾ ಮಂದಿರದ ಪುನಃ ನಿರ್ಮಾಣ ಕಾರ್ಯ ಮತ್ತು ಹೈಸ್ಕೂಲ್ ಕಟ್ಟಡದ ನಿರ್ಮಾಣ ಕಾರ್ಯಗಳ ಅಧ್ಯಕ್ಷರೂ ಆಗಿದ್ದರು. ಸತೀಶ್ ಬೈಕಂಪಾಡಿ ಮತ್ತು ಭಾಸ್ಕರ್ ಸೇರಿ ಅದರ ವಂತಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಮೊಗವೀರ ಮಹಾ ಸಭಾದ ಸದಸ್ಯತ್ವದಿಂದ ಅಮಾನತು ಪಡಿಸಲು ಕಾರಣರಾಗಿದ್ದಾರೆ ಎಂದು ಗಂಗಾಧರ ಪಾಂಗಳ ಮೇಲೆ ದ್ವೇಷ ಸಾಧಿಸಿದ್ದರು ಎಂದು ಆರೋಪಿಸಲಾಗಿತ್ತು. ಗಂಗಾಧರ ಪಾಂಗಳರನ್ನು ಕೊಲೆ ಮಾಡುವ ಉದ್ದೇಶದಿಂದ 2014ರ ಮೇ ತಿಂಗಳಲ್ಲಿ ಬೈಕಂಪಾಡಿ-ಮೀನಕಳಿಯ ರಸ್ತೆಯ ಬದಿಯ ಭಾಸ್ಕರ್‌ಗೆ ಸೇರಿದ ಮುಚ್ಚಿದ ಗೋದಾಮಿನ ಬಳಿ ಪರಿಚಿತ ಪುಷ್ಪರಾಜ್ ಎಂಬಾತನೊಂದಿಗೆ ಸೇರಿ ಸಂಚು ರೂಪಿಸಿದ್ದು, ಗಂಗಾಧರ್‌ರ ಚಲನವಲನಗಳ ಬಗ್ಗೆ ಸತೀಶ್ ಬೈಕಂಪಾಡಿ, ಹರೀಶ್ ಬೈಕಂಪಾಡಿ, ಭಾಸ್ಕರ ಮಾಹಿತಿ ಸಂಗ್ರಹಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

    ಬೈಕಂಪಾಡಿ ಮೀನಕಳಿಯ ರಸ್ತೆಯಲ್ಲಿ ಗಂಗಾಧರ ಪಾಂಗಾಳ ಸವಾರಿ ಮಾಡುತ್ತಿದ್ದ ಸ್ಕೂಟರಿನ ಹಿಂಬದಿಗೆ ಬೊಲೆರೋ ವಾಹನವನ್ನು ಢಿಕ್ಕಿ ಪಡಿಸಿ ಆರೋಪಿ ಪುಷ್ಪರಾಜ್ ಪರಾರಿಯಾಗಿದ್ದ. ಕೊಲೆ ಮಾಡಿರುವುದನ್ನು ಖಚಿತಪಡಿಸಲು ಸತೀಶ್ ಬೈಕಂಪಾಡಿ ಮತ್ತು ಹರೀಶ್ ಬೈಕಂಪಾಡಿ ಹಾಗೂ ಭಾಸ್ಕರ್ ಪ್ರತ್ಯೇಕವಾಗಿ ಎರದು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಅಲ್ಲದೆ ಸಾಕ್ಷ್ಯ ನಾಶ ಮಾಡುವ ಸಲುವಾಗಿ ಕೊಲೆ ಮಾಡಲು ಉಪಯೋಗಿಸಿದ ವಾಹನವನ್ನು ಅತ್ತಾವರದ ಗ್ಯಾರೇಜಿನಲ್ಲಿ ಸುಳ್ಳು ಹೇಳಿ ರಿಪೇರಿಗಾಗಿ ಇಟ್ಟಿದ್ದರು. ಆರಂಭದಲ್ಲಿ ಇದೊಂದು ಅಪಘಾತ ಎಂದು ಪ್ರಕರಣ ದಾಖಲಾಗಿತ್ತು. ಆದರೆ ಬಳಿಕ ಪೂರ್ವ ನಿಯೋಜಿತ ಅಪಘಾತ ಕೊಲೆ ಎಂದು ಶಂಕಿಸಲಾಗಿತ್ತು.

    ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕ ಎನ್.ಆರ್. ಮುಕ್ರಿ ಪ್ರಾಥಮಿಕ ತನಿಖೆ ನಡೆಸಿದ್ದರು. ಬಳಿಕ ತನಿಖಾಧಿಕಾರಿಗಳಾದ ರವೀಶ್ ನಾಯಕ್, ಭಾಸ್ಕರ ರೈ ತನಿಖೆ ನಡೆಸಿದ್ದು, ಲೋಕೇಶ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ವಾದ ಪ್ರತಿವಾದಗಳನ್ನು ಆಲಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶ ಜಗದೀಶ ವಿ.ಎನ್. ಜು.21ರಂದು ಆರೋಪಿತರನ್ನು ತಪ್ಪಿತಸ್ಥರೆಂದು ಪ್ರಕಟಿಸಿ ಜು.27ರಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

    ಸರಕಾರದ ಪರವಾಗಿ ಜ್ಯೋತಿ ಪ್ರಮೋದ ನಾಯಕ ವಾದಿಸಿದ್ದರು. ಆರೋಪಿ ಸತೀಶ್ ಬೈಕಂಪಾಡಿ, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ ವಿರುದ್ಧ ಭಾ.ದಂ.ಸಂ ಕಲಂ: 302 ಜತೆ 120(ಬಿ), 109, 34ರಡಿ ಜೀವಾಧಿ ಶಿಕ್ಷೆ ಮತ್ತು ತಲಾ 15,000 ರೂ. ದಂಡ ಪಾವತಿ ಹಾಗೂ ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷಗಳ ಸಾದಾ ಸಜೆ. ಪುಷ್ಪರಾಜ್ ವಿರುದ್ಧ ಭಾ.ದಂ.ಸಂ. ಕಲಂ: 302ಜತೆ 120(ಬಿ), 34 ರಡಿ ಜೀವಾಧಿ ಶಿಕ್ಷೆ ಮತ್ತು 15,000 ರೂ. ದಂಡ ಪಾವತಿ ಹಾಗೂ ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷಗಳ ಸಾದಾ ಸಜೆ ವಿಧಿಸಿ ನ್ಯಾಯಧೀಶರು ತೀರ್ಪು ನೀಡಿದ್ದಾರೆ.

    ಅಲ್ಲದೆ ನಾಲ್ವರಿಗೂ ಕಲಂ: 201 ಜೊತೆ 34 ರಡಿ 2 ವರ್ಷಗಳ ಕಾಲ ಸಾದಾ ಶಿಕ್ಷೆ ಮತ್ತು ತಲಾ 1,000 ರೂ. ದಂಡ ಪಾವತಿ, ದಂಡ ಪಾವತಿ ತಪ್ಪಿದಲ್ಲಿ 1 ವರ್ಷಗಳ ಸಾದಾ ಶಿಕ್ಷೆ ವಿಧಿಸಲಾಗಿದೆ. ಎಲ್ಲಾ ಶಿಕ್ಷೆಗಳನ್ನು ಏಕಕಾಲಕ್ಕೆ ಅನುಭವಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ. ದಂಡ ಮೊತ್ತ 64,000 ರೂ.ನಲ್ಲಿ 50,000 ರೂ. ಮೃತರ ಪುತ್ರಿಗೆ ನೀಡಬೇಕು. ಉಳಿದ 14,000 ರೂ.ವನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಲು ಆದೇಶಿಸಿದ್ದಾರೆ. ಕೃತ್ಯಕ್ಕೆ ಬಳಸಿದ ವಾಹನಗಳನ್ನು 30 ದಿನದೊಳಗೆ ನ್ಯಾಯಾಲಯಕ್ಕೆ ಒಪ್ಪಿಸಲು ಆದೇಶಿಸಲಾಗಿದೆ. *ಪ್ರಕರಣದ ಅರೋಪಿಗಳು ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳದಂತೆ ತಡೆಯಾಜ್ಞೆ ತಂದಿ ದ್ದರು. ಇದರಿಂದ 2025ರವರೆಗೆ ವಿಚಾರಣೆಯೇ ಆರಂಭವಾಗಿರಲಿಲ್ಲ. ಒಂದನೇ ಆರೋಪಿಯಾಗಿದ್ದ ಸತೀಶ್ ಬೈಕಂಪಾಡಿ 6 ತಿಂಗಳು ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ.




    #crime #dakshinakannada
    Previous Articleಕಾಸರಗೋಡಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ನಿಗೂಢ ಸಾವು
    Next Article ಲಾವಣ್ಯ ಹತ್ಯೆ ಪ್ರಕರಣ; ಆಸ್ಪತ್ರೆಯಿಂದ ಆರೋಪಿ ಚೇತನ್ ಪೊಲೀಸ್ ವಶಕ್ಕೆ

    Related Posts

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026

    ಸಾರ್ವಜನಿಕವಾಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ: ಅಕ್ಕ ಪಡೆಯ ಕಾರ್ಯಾಚರಣೆ

    September 16, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.