Close Menu
    What's Hot

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»36 ವರ್ಷ ಪೊಲೀಸರ ಕಣ್ಣಿಗೆ ಮಣ್ಣೆರಚಿದ್ದ ಆರೋಪಿ ಕಾರ್ಕಳ ಪೊಲೀಸರ ವಶಕ್ಕೆ
    ಅಪರಾಧ

    36 ವರ್ಷ ಪೊಲೀಸರ ಕಣ್ಣಿಗೆ ಮಣ್ಣೆರಚಿದ್ದ ಆರೋಪಿ ಕಾರ್ಕಳ ಪೊಲೀಸರ ವಶಕ್ಕೆ

    adminBy adminJuly 28, 2026No Comments1 Min Read

    ಕಾರ್ಕಳ : ಬರೋಬ್ಬರಿ 36 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣದ ವಾರಂಟ್ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಕಾರ್ಕಳ ಕಸಬಾ ಗ್ರಾಮದ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಬಂಧಿತ ಆರೋಪಿ. ಈತನ ವಿರುದ್ಧ 1989ರಲ್ಲಿ ಕಾರ್ಕಳ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/1989 ರಂತೆ ಐಪಿಸಿ ಕಲಂ 143, 147, 148, 447, 448, 323, 326 ಜೊತೆಗೆ 149 ರಡಿಯಲ್ಲಿ ಗಲಭೆ, ಅಕ್ರಮ ಪ್ರವೇಶ ಹಾಗೂ ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಗಂಭೀರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಂದಿನಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಕಾರ್ಕಳದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ LPC 14/2004 ವಾರಂಟ್ ಜಾರಿಯಲ್ಲಿತ್ತು.

    ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಕಾರ್ಕಳ ವೃತ್ತ ನಿರೀಕ್ಷಕರು ಹಾಗೂ ಉಡುಪಿ ಮಹಿಳಾ ಠಾಣೆ ಪೊಲೀಸ್ ನಿರೀಕ್ಷಕರ ನಿರ್ದೇಶನದಂತೆ ಕಾರ್ಕಳ ನಗರ ಠಾಣೆಯ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. 2096 ಲೋಕೇಶ್ ಮತ್ತು ಹೆಚ್.ಸಿ. 83 ಸಂಜಯ್ ಅವರು ಜುಲೈ 27 ರಂದು ರಾಮಸಮುದ್ರ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    #crime #dakshinakannada
    Previous Articleಅಮರನಾಥ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಬಸ್ ಅಪಘಾತ; 39 ಯಾತ್ರಿಕರಿಗೆ ಗಾಯ
    Next Article ಬಾಗಲಕೋಟೆಯಲ್ಲಿ ಭೀಕರ ಕೃತ್ಯ; ಪತ್ನಿಯ ಹತ್ಯೆ ಮಾಡಿ ವಿಡಿಯೋ ಕಾಲ್‌ನಲ್ಲಿ ತೋರಿಸಿದ ಪತಿ

    Related Posts

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026

    ಸಾರ್ವಜನಿಕವಾಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ: ಅಕ್ಕ ಪಡೆಯ ಕಾರ್ಯಾಚರಣೆ

    September 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.