Close Menu
    What's Hot

    ಜೈಲಿನಲ್ಲಿ ಪ್ರದೋಷ್‌ನ ‘ಕಳ್ಳಾಟ’ ಬಯಲು: ರೇಣುಕಾಸ್ವಾಮಿ ಪ್ರಕರಣದ ಆರೋಪಿಗೆ ಮತ್ತೊಂದು ಸಂಕಷ್ಟ

    September 16, 2026

    ಅಂಗನವಾಡಿ ಮಕ್ಕಳ ಆಹಾರದ ಗುಣಮಟ್ಟಕ್ಕೆ ಖಾದರ್ ಕಟ್ಟುನಿಟ್ಟಿನ ಕ್ರಮ: ಆಹಾರ ಮಾದರಿ ಲ್ಯಾಬ್‌ಗೆ ರವಾನೆ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕೆಪಿಎಸ್‌ಸಿ ಹಗರಣಕ್ಕೆ ಸಿಎಂ ಉತ್ತರಿಸಬೇಕು; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಆಗ್ರಹ
    ಕರ್ನಾಟಕ

    ಕೆಪಿಎಸ್‌ಸಿ ಹಗರಣಕ್ಕೆ ಸಿಎಂ ಉತ್ತರಿಸಬೇಕು; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಆಗ್ರಹ

    adminBy adminJuly 29, 2026No Comments1 Min Read

    ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು ನೀಟ್ ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ ಕೆಪಿಎಸ್‌ಸಿ ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.

    ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದ ಅವರು, “10 ದಿನಗಳ ಹಿಂದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತು ಮಾಡಲಾಗಿದೆ. ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಮಾಡಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ ೮೦ ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಉತ್ತರ ನೀಡಬೇಕು” ಎಂದು ಕೇಳಿದ್ದಾರೆ.

    “ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ನೋಡುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ ಮತ್ತು ಶಾಶ್ವತ ಪರಿಹಾರ ಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಿದೆ ಎಂಬ ನಂಬಿಕೆ ವಿದ್ಯಾರ್ಥಿಗಳಲ್ಲಿದೆ” ಎಂದು ತಿಳಿಸಿದರು.

    “ಇಡೀ ದೇಶದ ಯುವಕರು ಸಂಸತ್ತಿನ ಚರ್ಚೆಯನ್ನು ಗಮನಿಸುತ್ತಿದ್ದಾರೆ. ಇಲ್ಲಿ ನಡೆಯುವ ಪರಸ್ಪರ ಆರೋಪಗಳಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಹಿಂದೆ ಏನಾಯಿತು ಎಂಬುದಕ್ಕಿಂತ ಈಗ ಸಮಸ್ಯೆಗೆ ಪರಿಹಾರ ಸಿಗಬೇಕು ಎಂಬುದೇ ವಿದ್ಯಾರ್ಥಿಗಳ ನಿರೀಕ್ಷೆ. ಪೇಪರ್ ಲೀಕ್‌ನಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸಾಮಾನ್ಯ ಮತ್ತು ಬಡ ಕುಟುಂಬಗಳ ಮಕ್ಕಳಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆಯೇ ಬದುಕು ಕಟ್ಟಿಕೊಳ್ಳುವ ದೊಡ್ಡ ಅವಕಾಶವಾಗಿದೆ. ಅದನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ” ಎಂದು ಹೇಳಿದರು.

    “ಇಂದಿನ ಶಿಕ್ಷಣ ಪದ್ಧತಿ ಮಕ್ಕಳನ್ನು ಕೇವಲ ರಟ್ಟೆ ಹೊಡೆದು ಪರೀಕ್ಷೆ ಬರೆಯುವಂತೆ ಮಾಡುತ್ತಿದೆ. ಒಂದು ದಿನದ ಮೂರು ಗಂಟೆಯ ಪರೀಕ್ಷೆ ವಿದ್ಯಾರ್ಥಿಯ ಇಡೀ ಭವಿಷ್ಯವನ್ನು ನಿರ್ಧರಿಸಬಾರದು. ಈ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ಅಗತ್ಯ” ಎಂದರು.




    #karnataka
    Previous Articleಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಆಕಸ್ಮಿಕ ಡ್ರಗ್ ಪರೀಕ್ಷೆ –159ರಲ್ಲಿ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್
    Next Article ಡ್ರಗ್ಸ್ ದಂಧೆಯಲ್ಲಿ ಮೂರನೇ ಶಿಕ್ಷಕಿ ಅರೆಸ್ಟ್; ಇನ್‌ಸ್ಟಾಗ್ರಾಮ್ ಮೂಲಕ ಹೈಟೆಕ್ ಜಾಲ ಬಯಲು

    Related Posts

    ಜೈಲಿನಲ್ಲಿ ಪ್ರದೋಷ್‌ನ ‘ಕಳ್ಳಾಟ’ ಬಯಲು: ರೇಣುಕಾಸ್ವಾಮಿ ಪ್ರಕರಣದ ಆರೋಪಿಗೆ ಮತ್ತೊಂದು ಸಂಕಷ್ಟ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026

    14 ದಿನಗಳಲ್ಲಿ 8 ಅಪ್ರಾಪ್ತ ಮಕ್ಕಳ ರಕ್ಷಣೆ: ರೈಲು ನಿಲ್ದಾಣಗಳಲ್ಲಿ ಆರ್‌ಪಿಎಫ್ ವಿಶೇಷ ಕಾರ್ಯಾಚರಣೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಿನಲ್ಲಿ ಪ್ರದೋಷ್‌ನ ‘ಕಳ್ಳಾಟ’ ಬಯಲು: ರೇಣುಕಾಸ್ವಾಮಿ ಪ್ರಕರಣದ ಆರೋಪಿಗೆ ಮತ್ತೊಂದು ಸಂಕಷ್ಟ

    September 16, 2026

    ಅಂಗನವಾಡಿ ಮಕ್ಕಳ ಆಹಾರದ ಗುಣಮಟ್ಟಕ್ಕೆ ಖಾದರ್ ಕಟ್ಟುನಿಟ್ಟಿನ ಕ್ರಮ: ಆಹಾರ ಮಾದರಿ ಲ್ಯಾಬ್‌ಗೆ ರವಾನೆ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026

    ಪತ್ನಿಯ ಪಾರ್ಥಿವ ಶರೀರದ ಪಕ್ಕದಲ್ಲಿ ಪ್ರಾರ್ಥಿಸುತ್ತಿದ್ದಾಗಲೇ ವೃದ್ಧ ಸಾವು: ಕೆಲವೇ ಗಂಟೆಗಳ ಅಂತರದ ಸಾವಲ್ಲೂ ಒಂದಾದ ಜೋಡಿ

    September 16, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಿನಲ್ಲಿ ಪ್ರದೋಷ್‌ನ ‘ಕಳ್ಳಾಟ’ ಬಯಲು: ರೇಣುಕಾಸ್ವಾಮಿ ಪ್ರಕರಣದ ಆರೋಪಿಗೆ ಮತ್ತೊಂದು ಸಂಕಷ್ಟ

    September 16, 2026

    ಮದುವೆಯಾಗಿ ತಿಂಗಳಲ್ಲೇ ಅಂತ್ಯ: ಹಿಟ್ ಆ್ಯಂಡ್ ರನ್‌ಗೆ ದಂಪತಿ ಸಾವು

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.