Close Menu
    What's Hot

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳ ವೃದ್ಧೆ ಕೊಲೆ ಪ್ರಕರಣಕ್ಕೆ ತೀರ್ಪು; ಮೂವರಿಗೆ ಜೀವಾವಧಿ ಶಿಕ್ಷೆ
    ಅಪರಾಧ

    ಬಂಟ್ವಾಳ ವೃದ್ಧೆ ಕೊಲೆ ಪ್ರಕರಣಕ್ಕೆ ತೀರ್ಪು; ಮೂವರಿಗೆ ಜೀವಾವಧಿ ಶಿಕ್ಷೆ

    adminBy adminJuly 29, 2026No Comments1 Min Read

    ಮಂಗಳೂರು: ಬಂಟ್ವಾಳದ ವೃದ್ಧೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜು. 28ರಂದು ಆದೇಶ ಹೊರಡಿಸಿರುತ್ತದೆ.

    ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಹಾಗೂ ಚರಣ್ ಕುಮಾರ್ (31) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು.

    ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಎಂಬುವವರನ್ನ ಆರೋಪಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ ನೋಡಿಕೊಳ್ಳುತ್ತಿದ್ದಳು. ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಸತೀಶ ನಾಯಕ್ ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾಳೆ. ಆದರೆ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಚರಣ್ ಕುಮಾರ್ ಎಂಬಾತನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುತ್ತದೆ.

    ವೃದ್ಧೆಯ ಕೊಲೆ ಮಾಡಿದ ಬಳಿಕ ಆರೋಪಿಗಳು ಆಕೆಯ ಬಳಿಯಿದ್ದ ಒಟ್ಟು 61.070ಗ್ರಾಂ ತೂಕದ (ಅಂದಿನ ರೂ.3 ಲಕ್ಷ ಮೌಲ್ಯ) ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿರುತ್ತಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ22/2021, ಕಲಂ: 302, 392, 120 (ಬಿ), 201 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

    ಈ ಪ್ರಕರಣದಲ್ಲಿ ಆಗಿನ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಎಮ್.ಎಸ್ ರವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆಗಿನ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾದ ಟಿ.ಡಿ. ನಾಗರಾಜ್ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಮೂವರು ಆರೋಪಿಗಳ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಇದೀಗ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್ ನಾಯಕ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.




    #crime #dakshinakannada
    Previous Articleಉದ್ಯೋಗ ಇಲ್ಲ, ಮದುವೆಯೂ ಇಲ್ಲ! ‘ಕನ್ಯಾ ಭಾಗ್ಯ ನೀಡಿ’ ಎಂದ ಶಿಕ್ಷಕ ಅಭ್ಯರ್ಥಿಗಳು
    Next Article ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌; 400ಕ್ಕೂ ಹೆಚ್ಚು ‘ಎಕ್ಸ್’ ಖಾತೆಗಳ ಮೇಲೆ ಪೊಲೀಸರ ಕಣ್ಣು

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.