Close Menu
    What's Hot

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಡಿಎನ್‌ಎ ಪರೀಕ್ಷೆಯಿಂದ 3 ಅಸ್ಥಿಪಂಜರಗಳ ಗುರುತು ಪತ್ತೆ
    ಕರಾವಳಿ ಸುದ್ದಿ

    ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಡಿಎನ್‌ಎ ಪರೀಕ್ಷೆಯಿಂದ 3 ಅಸ್ಥಿಪಂಜರಗಳ ಗುರುತು ಪತ್ತೆ

    adminBy adminJuly 30, 2026Updated:July 30, 2026No Comments2 Mins Read

    ಮಂಗಳೂರು: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಅಸ್ಥಿಪಂಜರಗಳ ಡಿಎನ್‌ಎ ಜತೆ ಹೋಲಿಕೆ ಮಾಡಲಾಗಿತ್ತು. ಈ ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ಹೊಂದಾಣಿಕೆಯಾಗಿದೆ ಎಂದು ತಿಳಿದುಬಂದಿದೆ.

    ಪತ್ತೆಯಾದವರು ಯಾರು?

    ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಸೇರಿದ್ದಾರೆ. ಅಂದರೆ, ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದ ಮೂವರೂ ಪುರುಷರು ಎಂಬುದು ದೃಢಪಟ್ಟಿದೆ. ಇವರ ಪೈಕಿ ಅಯ್ಯಪ್ಪ ಮತ್ತು ಕೃಷ್ಣಪ್ಪ 70 ವರ್ಷ ಮೇಲ್ಪಟ್ಟವರಾಗಿದ್ದಾರೆ.

    ‘ಮಹಿಳೆಯರ ಅಸ್ಥಿಪಂಜರ’ ಆರೋಪಕ್ಕೆ ವ್ಯತಿರಿಕ್ತ ಬೆಳವಣಿಗೆ

    ಧರ್ಮಸ್ಥಳದ ಆಸುಪಾಸಿನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿತ್ತು. ಆದರೆ ಎಸ್‌ಐಟಿ ಉತ್ಖನನದ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಇದೀಗ ತಿಳಿದುಬಂದಿದೆ. ಜುಲೈ 15ರಂದು ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿದ್ದ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿದೆ.

    ಮೂವರ ಕುಟುಂಬಸ್ಥರ ಡಿಎನ್‌ಎ ಮಾದರಿಗಳನ್ನು ಪಡೆದು ನಡೆಸಿದ ಪರೀಕ್ಷೆಯಲ್ಲಿ ಅಸ್ಥಿಪಂಜರಗಳೊಂದಿಗೆ ಹೊಂದಾಣಿಕೆ ಕಂಡುಬಂದಿದೆ. ಎಸ್‌ಐಟಿಗೆ ಮನವಿ ಸಲ್ಲಿಸಿದಲ್ಲಿ, ಸಂಬಂಧಪಟ್ಟ ಕುಟುಂಬಸ್ಥರಿಗೆ ಅಸ್ಥಿಪಂಜರಗಳನ್ನು ಪಡೆಯಲು ಅವಕಾಶ ನೀಡಬಹುದು ಎಂದು ತಿಳಿದುಬಂದಿದೆ.

    ಮೂವರು ನಾಪತ್ತೆಯಾಗಿದ್ದು ಯಾವಾಗ, ಎಲ್ಲಿ?

    ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ (70) ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದರು. ಬಳಿಕ ಮನೆಗೆ ವಾಪಸ್ ಆಗಿರಲಿಲ್ಲ. ಈ ಸಂಬಂಧ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಆದಿಶೇಷ ನಾರಾಯಣ (27) ಅವರು ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. 2013ರ ಅಕ್ಟೋಬರ್ 2ರಂದು ಮನೆಗೆ ವಾಪಸ್ ಬಂದು ಮೊಬೈಲ್ ಇಟ್ಟು ಬಳಿಕ ನಾಪತ್ತೆಯಾಗಿದ್ದರು. ಈ ಹಿಂದೆ ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಕಾರಣ, ಅವರು ಮರಳಿ ಬರುತ್ತಾರೆ ಎಂದು ಕುಟುಂಬಸ್ಥರು ಆರಂಭದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿರಲಿಲ್ಲ.

    ಇನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಅವರು ವಯಸ್ಸಿನ ಕಾರಣದಿಂದ ಮನೆಯಲ್ಲೇ ಇರುತ್ತಿದ್ದರು. 2024ರ ಅಕ್ಟೋಬರ್ 22ರಂದು ಏಕಾಏಕಿ ಮನೆಯಿಂದ ಹೊರಹೋದ ಅವರು ಬಳಿಕ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

    ಹೀಗೆ ಮೂವರ ನಾಪತ್ತೆ ಪ್ರಕರಣಗಳ ಹಿನ್ನೆಲೆ ಇದೀಗ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರಗಳ ಡಿಎನ್‌ಎ ಜತೆ ಹೊಂದಾಣಿಕೆಯಾಗಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ.




    #dakshinakannada
    Previous Articleಮರಳು ಮಾಫಿಯಾ ಮೇಲೆ ದಾಳಿ: ನಿವೃತ್ತ ಚಾಲಕನ ಮನೆಯಲ್ಲಿ ಕೋಟಿ ಕೋಟಿ ಹಣ-ಚಿನ್ನ ಜಪ್ತಿ
    Next Article ಪಾಕಿಸ್ತಾನ ಸೇನೆಯ ಕ್ರೌರ್ಯದ ಪರಾಕಾಷ್ಠೆ; ಬಾಲಕಿಯನ್ನು ಗುಂಡಿಕ್ಕಿ ಹತ್ಯೆ, ಮೃತದೇಹ ವಾಹನಕ್ಕೆ ಕಟ್ಟಿ ಮೆರವಣಿಗೆ

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.