Close Menu
    What's Hot

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ನಾಳೆ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆ; ಪರೀಕ್ಷೆ ವೇಳೆ ಹಿಜಾಬ್ ಹಾಕುವಂತಿಲ್ಲ- ಪ್ರಿಯಾಂಕ ಖರ್ಗೆ ಸ್ಪಷ್ಟನೆ
    ಕರ್ನಾಟಕ

    ನಾಳೆ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆ; ಪರೀಕ್ಷೆ ವೇಳೆ ಹಿಜಾಬ್ ಹಾಕುವಂತಿಲ್ಲ- ಪ್ರಿಯಾಂಕ ಖರ್ಗೆ ಸ್ಪಷ್ಟನೆ

    adminBy adminAugust 1, 2026No Comments1 Min Read

    ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆಗೆ ಸರ್ಕಾರ ಸಜ್ಜಾಗಿದೆ. ಆಗಸ್ಟ್ 2ರಂದು ರಾಜ್ಯದಲ್ಲಿ ಪೊಲೀಸ್ ಪೇದೆ ಲಿಖಿತ ಪರೀಕ್ಷೆ ನಡೆಯಲಿದೆ. ಈಗಾಗಲೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಯುವ ಸಮೂಹದ ಪ್ರತಿಭಟನೆಯಿಂದ ದೇಶದಲ್ಲೇ ಶಿಕ್ಷಣ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಒತ್ತಾಯ ಹೆಚ್ಚಾಗುತ್ತಿದೆ.

    ಇದರ ಬೆನ್ನಲ್ಲೇ ರಾಜ್ಯದ ಕಾನ್ಸ್‌ಸ್ಟೇಬಲ್ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಮುತುವರ್ಜಿ ವಹಿಸಿದ್ದಾರೆ. ಇದೇ ವೇಳೆ ಎದ್ದಿರುವ ಕೆಲ ಗೊಂದಲಗಳಿಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಪೈಕಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಪೊಲೀಸ್ ಕಾನ್ಸ್‌ಸ್ಟೇಬಲ್ ಲಿಖಿತ ಪರೀಕ್ಷೆಯಲ್ಲಿ ಹಿಜಾಬ್ ಹಾಕಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳ ಬಗ್ಗೆ ಗೊಂದಲ ಆಗದಂತೆ ಮೊದಲೇ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ವೇಳೆ ಯಾವ ಉಡುಪು ಹಾಕಬಹುದು..ಯಾವುದು ಹಾಕಬಾರದು ಅಂತ ಪ್ರವೇಶ ಪತ್ರದಲ್ಲಿ ಹಾಕಿರುತ್ತೇವೆ. ಹೀಗಾಗಿ ಪರೀಕ್ಷಾ ಕೊಠಡಿ ಬಳಿ ಯಾವುದೇ ಗೊಂದಲಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಿಯಾಂಕ ಖರ್ಗೆ ಸ್ಪಷ್ಟಪಡಿಸಿದ್ದಾರೆ.

    24 ಗಂಟೆ ಮುಂಚೆ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸೇಶನ್ ಮಾಡಲಾಗುತ್ತದೆ. ಪರೀಕ್ಷಾ ರೂಮ್ ನಲ್ಲಿ ನಿಯೋಜಿತ ಸಿಬ್ಬಂದಿ ಸಹ ಮೊಬೈಲ್ ಬಳಕೆ ಮಾಡುವಂತಿಲ್ಲ. ಪರೀಕ್ಷೆ ಹಿನ್ನೆಲೆಯಲ್ಲಿ ಖಾಸಗಿ ತರಬೇತಿ ಸೆಂಟರ್ ಮೇಲೂ ನಿಗಾ ವಹಿಸುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಜನಿವಾರ, ಶಿವದಾರ, ಉಡದಾರ, ಮಾಂಗಲ್ಯ ಸರ, ಮುಗುತಿ, ಕುಂಕುಮ, ಉಂಗುರ, ತಾಯತಾ ಹಾಕುವುದು ಸೇರಿದಂತೆ ಎಲ್ಲಾ ವಸ್ತುಗಳ ಬಳಕೆ ಬಗ್ಗೆ ಮೊದಲೇ ತಿಳಿಸಲಾಗುವುದು. ಈ ಮೂಲಕ ಯಾವುದೇ ರೀತಿಯಲ್ಲಿ ಕೊನೆಕ್ಷಣದ ಗೊಂದಲಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುವುದು. ಎರಡುವರೆ ಗಂಟೆ ಮುಂಚೆ ಬಂದು ಇವುಗಳನ್ನು ‌ಚೆಕ್ ಮಾಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.




    #karnataka
    Previous Articleಕುಂದಾಪುರ ಶೂಟೌಟ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್
    Next Article ಉಡುಪಿಯಲ್ಲಿ ಭೀಕರ ಅಪಘಾತ; ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಬಸ್ ಅಪಘಾತಕ್ಕೆ ಬಲಿ

    Related Posts

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.