Close Menu
    What's Hot

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ರಾಮ ಮಂದಿರ ದೇಣಿಗೆ ಹಗರಣ ಆರೋಪಕ್ಕೆ ಬ್ರೇಕ್; ಅಧಿಕಾರಿಗಳಿಂದ ಮಹತ್ವದ ಸ್ಪಷ್ಟನೆ
    ರಾಷ್ಟ್ರೀಯ

    ರಾಮ ಮಂದಿರ ದೇಣಿಗೆ ಹಗರಣ ಆರೋಪಕ್ಕೆ ಬ್ರೇಕ್; ಅಧಿಕಾರಿಗಳಿಂದ ಮಹತ್ವದ ಸ್ಪಷ್ಟನೆ

    adminBy adminAugust 7, 2026No Comments2 Mins Read

    ಅಯೋಧ್ಯೆ: ಅಯೋಧ್ಯೆ ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಬೃಹತ್ ಮಟ್ಟದ ಆರ್ಥಿಕ ಅಕ್ರಮ ಅಥವಾ ದೇಣಿಗೆ ಹಗರಣ ನಡೆದಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ಸರ್ಕಾರಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

    ಭಕ್ತರು ನೀಡಿದ 3,300 ಕೋಟಿ ರೂ. ದೇಣಿಗೆ ಹಣದ ಪ್ರತಿಯೊಂದು ಪೈಸೆಯೂ ಸುರಕ್ಷಿತವಾಗಿದ್ದು, ಸಂಪೂರ್ಣವಾಗಿ ಲೆಕ್ಕಪರಿಶೋಧನೆಗೊಳಪಟ್ಟಿದೆ ಎಂದು ತಿಳಿಸಲಾಗಿದೆ. ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಬದಲಿಗೆ ಹುಂಡಿಯಲ್ಲಿರುವ ನಗದು ಎಣಿಕೆ ಮಾಡುವ ಸಂದರ್ಭದಲ್ಲಿ ನಡೆದ ಪ್ರತ್ಯೇಕ ಕಳ್ಳತನ ಇದಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಾರ್ವಜನಿಕರಿಂದ ಹರಿದುಬಂದಿರುವ 3,300 ಕೋಟಿ ರೂ. ದೇಣಿಗೆಯನ್ನು ‘ಮೆಸರ್ಸ್ ವಿ. ಶಂಕರ್ ಅಯ್ಯರ್ ಆ್ಯಂಡ್ ಕಂಪನಿ’ ಎಂಬ ಸ್ವತಂತ್ರ ಬಾಹ್ಯ ಆಡಿಟರ್ಸ್ ಸಂಸ್ಥೆಯು ಸಂಪೂರ್ಣವಾಗಿ ತಪಾಸಣೆ ಮಾಡಿದೆ. ದೇವಾಲಯ ನಿರ್ಮಾಣಕ್ಕಾಗಿ ಸುಮಾರು1,800 ಕೋಟಿ ರೂ. ಹಾಗೂ ಭೂ ಖರೀದಿಗಾಗಿ 400 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿಯೊಂದು ವಹಿವಾಟನ್ನೂ ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕವೇ ಮಾಡಲಾಗಿದ್ದು, ಯಾವುದೇ ನಗದು ರೂಪದ ವಹಿವಾಟು ನಡೆದಿಲ್ಲ.

    ನಗದು ಎಣಿಕೆ ವೇಳೆ ಕಳ್ಳತನ ಮಾಡಿದ್ದು ಯಾರು? ಹುಂಡಿಯಿಂದ ಹಣವನ್ನು ತೆಗೆದು ಯಂತ್ರಗಳ ಮೂಲಕ ಎಣಿಕೆ ಮಾಡುವ ಮುನ್ನ ಕೈಯಿಂದ ಬೇರ್ಪಡಿಸುವ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಿಸಿದ್ದ ‘ಸೈನಿಕ್ ಸೆಕ್ಯುರಿಟಿ ಸರ್ವೀಸಸ್’  ಏಜೆನ್ಸಿಯ ಆರು ಬಾಹ್ಯ ಉದ್ಯೋಗಿಗಳು ಈ ಕಳ್ಳತನ ಎಸಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ತಕ್ಷಣವೇ ಬಂಧಿಸಲಾಗಿದೆ. ಬಂಧಿತರಲ್ಲಿ ಯಾರೂ ರಾಮ ಮಂದಿರ ಟ್ರಸ್ಟ್ ಅಥವಾ ದೇವಾಲಯ ಆಡಳಿತದ ನೇರ ನೌಕರರಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಈ ಕಳ್ಳತನದ ಪ್ರತ್ಯೇಕ ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದ ‘ವಿಶೇಷ ತನಿಖಾ ತಂಡ’ ಚಿಸಲಾಗಿದ್ದು, ಸುಪ್ರೀಂ ಕೋರ್ಟ್ ಈ ಪ್ರಕ್ರಿಯೆಯ ಸಂಪೂರ್ಣ ಮೇಲ್ವಿಚಾರಣೆ ನಡೆಸುತ್ತಿದೆ. ದೇವಸ್ಥಾನದ ಸುತ್ತಮುತ್ತಲಿನ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನೂ ಸರ್ಕಾರ ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಯೋಧ್ಯೆಯಲ್ಲಿ ಭೂಮಿ ಬೆಲೆ ಹೆಚ್ಚಾಗಿದ್ದರಿಂದ ಮತ್ತು ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಪರಿಹಾರ ನೀಡಿದ್ದರಿಂದ ವೆಚ್ಚ ಹೆಚ್ಚಾಗಿದೆಯೇ ವಿನಃ ಯಾವುದೇ ಅಕ್ರಮವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

     




    #nation #national
    Previous Articleಕಾಡುಪ್ರಾಣಿ ಬೇಟೆ ಪ್ರಕರಣದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ; ಶಸ್ತ್ರಾಸ್ತ್ರ ಸಹಿತ ಸಿಕ್ಕಿಬಿದ್ದ ಆರೋಪಿಗಳು
    Next Article ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.