Close Menu
    What's Hot

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಸಾಲಗಾರರಿಗೆ ಗುಡ್ ನ್ಯೂಸ್; ರಿಕವರಿ ಏಜೆಂಟ್‌ಗಳಿಗೆ ಆರ್‌ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ
    ರಾಷ್ಟ್ರೀಯ

    ಸಾಲಗಾರರಿಗೆ ಗುಡ್ ನ್ಯೂಸ್; ರಿಕವರಿ ಏಜೆಂಟ್‌ಗಳಿಗೆ ಆರ್‌ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ

    adminBy adminAugust 7, 2026No Comments2 Mins Read

    ನವದೆಹಲಿ: ಇಎಂಐ ಪಾವತಿ ತಡವಾದರೆ ಬ್ಯಾಂಕ್ ಅಥವಾ ರಿಕವರಿ ಏಜೆಂಟ್‌ಗಳು ಗ್ರಾಹಕರಿಗೆ ರಾತ್ರಿ ಕರೆ ಮಾಡೋ ಹಾಗಿಲ್ಲ. ಸಾಲ ವಸೂಲಾತಿ ವೇಳೆ ಗ್ರಾಹಕರಿಗೆ ಕಿರುಕುಳ ಆಗದಂತೆ ಬ್ಯಾಂಕ್‌ಗಳು ಮತ್ತು ನಿಯಂತ್ರಿತ ಸಾಲದಾತರು ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು ಎಂದು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ನಿಯಮ ಜಾರಿಗೊಳಿಸಲಿದೆ. ಈ ನಿಯಮ 2027 ಜನವರಿ 1ರಿಂದ ಜಾರಿಗೆ ಬರಲಿವೆ.

    ಹೊಸ ನಿಯಮದ ಪ್ರಕಾರ, ಬ್ಯಾಂಕ್‌ಗಳು ಮತ್ತು ರಿಕವರಿ ಏಜೆಂಟ್‌ಗಳು ಸಾಮಾನ್ಯವಾಗಿ ಬೆಳಗ್ಗೆ 8 ರಿಂದ ಸಂಜೆ 7 ರವರೆಗೆ ಮಾತ್ರ ಸಾಲಗಾರರನ್ನು ಸಂಪರ್ಕಿಸಬೇಕು. ಈ ಸಮಯ ಹೊರತುಪಡಿಸಿ ಕರೆ ಅಥವಾ ಭೇಟಿ ಮಾಡಬೇಕಾದರೆ ಸಾಲಗಾರರ ಮನವಿ ಅಥವಾ ಅನುಮತಿ ಇರಬೇಕು. ಅಷ್ಟೇ ಅಲ್ಲ, ಬೆದರಿಕೆ, ನಿಂದನೀಯ ಮಾತು, ಅವಮಾನ ಮಾಡುವ ರೀತಿಯ ಭಾಷೆ ಬಳಸುವಂತಿಲ್ಲ. ಅನಾಮಧೇಯವಾಗಿ ಕರೆ ಮಾಡಿ ಹೆದರಿಸುವುದು, ಪದೇ ಪದೇ ಕರೆ ಮಾಡುವುದು ಅಥವಾ ಆಸ್ತಿ ಜಪ್ತಿ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುವುದಕ್ಕೂ ಅವಕಾಶವಿಲ್ಲ.

    ಸಾಲಗಾರರ ಫೋಟೋ, ವಿಡಿಯೋ ಅಥವಾ ವೈಯಕ್ತಿಕ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅವಮಾನ ಮಾಡುವಂತಿಲ್ಲ. ದುಃಖ, ವೈದ್ಯಕೀಯ ತುರ್ತು ಪರಿಸ್ಥಿತಿ ಅಥವಾ ಮದುವೆಯಂತಹ ಸೂಕ್ಷ್ಮ ಸಂದರ್ಭಗಳಲ್ಲಿ ರಿಕವರಿ ಏಜೆಂಟ್‌ಗಳು ಸಾಲಗಾರರನ್ನು ಸಂಪರ್ಕಿಸುವುದನ್ನು ತಪ್ಪಿಸಬೇಕು.

    ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ. ಮೊದಲ ಬಾರಿ ವೈಯಕ್ತಿಕವಾಗಿ ಭೇಟಿ ಮಾಡುವ ಮುನ್ನ ಕನಿಷ್ಠ ಒಂದು ದಿನ ಮುಂಚಿತವಾಗಿ ಮಾಹಿತಿ ನೀಡಬೇಕು. ಏಜೆಂಟ್ ಯಾವ ಸಂಸ್ಥೆಯಿಂದ ಬಂದಿದ್ದಾರೆ ಎಂಬ ವಿವರವನ್ನು ಬ್ಯಾಂಕ್ ನೀಡಬೇಕು. ಜೊತೆಗೆ ಭೇಟಿ ವೇಳೆ ಏಜೆಂಟ್ ತಮ್ಮ ಐಡಿ ಕಾರ್ಡ್, ಅಧಿಕಾರ ಪತ್ರ ಮತ್ತು ಸಂಬಂಧಿತ ನೋಟಿಸ್ ಹೊಂದಿರಬೇಕು. ಅದರಲ್ಲೂ ಬ್ಯಾಂಕ್ ಹಾಗೂ ರಿಕವರಿ ಏಜೆನ್ಸಿಯ ದೂರು ಅಧಿಕಾರಿಯ ಸಂಪರ್ಕ ವಿವರ ಇರಬೇಕು.

    ಇನ್ನು ಮುಂದೆ ಸಾಲ ವಸೂಲಾತಿ ವೇಳೆ ನಡೆದ ಕರೆಗಳನ್ನೂ ಬ್ಯಾಂಕ್‌ಗಳು ದಾಖಲಿಸಬೇಕು. ಕರೆ ಮಾಡಿದ ಸಮಯ ಮತ್ತು ಎಷ್ಟು ಬಾರಿ ಕರೆ ಮಾಡಲಾಗಿದೆ ಎಂಬ ವಿವರಗಳನ್ನು ನಿರ್ವಹಿಸಬೇಕು. ಈ ದಾಖಲೆಗಳನ್ನು ಸಾಮಾನ್ಯವಾಗಿ ಕನಿಷ್ಠ 6 ತಿಂಗಳವರೆಗೆ ಸಂರಕ್ಷಿಸಬೇಕು. ಏಜೆಂಟ್‌ಗಳ ನಡೆ-ನುಡಿಯನ್ನು ಬ್ಯಾಂಕ್‌ಗಳು ಮೇಲ್ವಿಚಾರಣೆ ಮಾಡಬೇಕು. ರಿಕವರಿ ಏಜೆಂಟ್‌ಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಆರ್‌ಬಿಐ ಸೂಚಿಸಿದೆ.




    #nation #national
    Previous Articleಫೈವ್‌ಸ್ಟಾರ್ ಹೋಟೆಲ್‌ಗಳಿಗೆ ಆರೋಗ್ಯ ಇಲಾಖೆ ದಾಳಿ ; ಕಳಪೆ ತರಕಾರಿ ಪತ್ತೆ
    Next Article ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಕೊಡಿಯಾಲ್‌ಬೈಲ್‌ ನಲ್ಲಿ ಆಷಾಢ ಮಾಸದ ವಿಶೇಷ ಅನ್ನಪ್ರಸಾದ ಸೇವೆ ; 14 ಬಗೆಯ ವಿಶೇಷ ಔತಣ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.