ಉಡುಪಿ: ಉದ್ಯಮಿ, ಮುಖಂಡ ಡೇವಿಡ್ ಡಿ’ಸೋಜಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ನಡೆದಿದೆ.
ಶಿರ್ವಾ ಪ್ರದೇಶದ ಖ್ಯಾತ ಉದ್ಯಮಿ ಡೇವಿಡ್ ಡಿ’ಸೋಜಾ ಅವರು ಯಶಸ್ವಿ ಅರ್ಥ್ಮೂವರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದು, ಸ್ಥಳೀಯವಾಗಿ ಪರಿಚಿತ ವ್ಯಕ್ತಿಯಾಗಿದ್ದಾರೆ.
ದಾಳಿಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಲ್ಲದೆ, ಗಾಯಗೊಂಡಿರುವ ಡೇವಿಡ್ ಡಿ’ಸೋಜಾ ಅವರ ಆರೋಗ್ಯ ಸ್ಥಿತಿಯ ಬಗ್ಗೆಯೂ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನೆಯ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ದಾಳಿ ನಡೆಸಿದ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ








