Close Menu
    What's Hot

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಗೌತಮ್ ಅದಾನಿ ವಿರುದ್ಧದ ಆರೋಪಗಳಿಗೆ ತೆರೆ; ಅಮೆರಿಕ ಕೋರ್ಟ್‌ನಿಂದ ಮಹತ್ವದ ತೀರ್ಪು
    ರಾಷ್ಟ್ರೀಯ

    ಗೌತಮ್ ಅದಾನಿ ವಿರುದ್ಧದ ಆರೋಪಗಳಿಗೆ ತೆರೆ; ಅಮೆರಿಕ ಕೋರ್ಟ್‌ನಿಂದ ಮಹತ್ವದ ತೀರ್ಪು

    adminBy adminAugust 11, 2026No Comments1 Min Read

    ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಅವರ ವಿರುದ್ಧದ ಎಲ್ಲಾ ಕ್ರಿಮಿನಲ್ ಮತ್ತು ವಂಚನೆ ಆರೋಪಗಳನ್ನು ಅಮೆರಿಕದ ನ್ಯಾಯಾಲಯವು ಅಧಿಕೃತವಾಗಿ ವಜಾಗೊಳಿಸಿದೆ. ಈ ಮಹತ್ವದ ತೀರ್ಪನ್ನು ಗೌತಮ್ ಅದಾನಿ ಅವರು ಸ್ವಾಗತಿಸಿದ್ದಾರೆ.

    ನ್ಯಾಯಾಲಯದ ಈ ಆದೇಶ ಹೊರಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಗೌತಮ್ ಅದಾನಿ, “ಅಮೆರಿಕ ನ್ಯಾಯಾಲಯದ ತೀರ್ಪನ್ನು ನಾನು ವಿನಮ್ರತೆಯಿಂದ ಸ್ವಾಗತಿಸುತ್ತೇನೆ. ಈ ಇಡೀ ಸವಾಲಿನ ಅವಧಿಯಲ್ಲಿ, ಸತ್ಯ, ನಿಷ್ಪಕ್ಷಪಾತ ಮತ್ತು ಕಾನೂನಿನ ಆಡಳಿತದ ಮೇಲಿನ ನಮ್ಮ ನಂಬಿಕೆ ಎಂದಿಗೂ ಅಲುಗಾಡಲಿಲ್ಲ” ಎಂದು ಬರೆದುಕೊಂಡಿದ್ದಾರೆ.

    “ನಮ್ಮ ಮೇಲೆ, ವ್ಯವಸ್ಥೆಯ ಮೇಲೆ ಮತ್ತು ಭಾರತದ ನ್ಯಾಯ ಒದಗಿಸುವ ಸಾಮರ್ಥ್ಯದ ಮೇಲೆ ನಂಬಿಕೆ ಕಳೆದುಕೊಳ್ಳದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ದೇಶದ ನಿರ್ಮಾಣ, ಮೌಲ್ಯವರ್ಧನೆ ಮತ್ತು ಸ್ವಾರ್ಥ ಮೀರಿದ ಸಾಮಾಜಿಕ ಸೇವೆಗಾಗಿ ನಮ್ಮ ಬದ್ಧತೆ ಎಂದಿನಂತೆ ಮುಂದುವರಿಯಲಿದೆ. ಜೈ ಹಿಂದ್” ಎಂದು ಪೋಸ್ಟ್ ಮಾಡಿದ್ದಾರೆ.

    “ಮುಂದೆಯೂ ಮಹತ್ವದ ಕೆಲಸವನ್ನೇ ಮುಂದುವರಿಸುತ್ತೇವೆ. ನಮ್ಮ ದೇಶಕ್ಕಾಗಿ ನಿರ್ಮಿಸುತ್ತೇವೆ, ನಮ್ಮ ನಂತರವೂ ಉಳಿಯುವ ಮೌಲ್ಯವನ್ನು ಸೃಷ್ಟಿಸುತ್ತೇವೆ ಮತ್ತು ನಮಗಿಂತಲೂ ದೊಡ್ಡ ಉದ್ದೇಶಕ್ಕಾಗಿ ಸೇವೆ ಸಲ್ಲಿಸುತ್ತೇವೆ. ಇದೇ ನಮ್ಮ ಬದ್ಧತೆ” ಎಂದು ತಿಳಿಸಿದ್ದಾರೆ.

    2023ರ ಜನವರಿಯಲ್ಲಿ ಪ್ರಸ್ತುತ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಸಮೂಹದ ವಿರುದ್ಧ ಹಲವು ಆರೋಪಗಳನ್ನು ಮಾಡಿತ್ತು. ಆ ಬಳಿಕ ಅದಾನಿ ಸಮೂಹದ ಮೇಲೆ ತೀವ್ರ ಪರಿಶೀಲನೆ ಆರಂಭವಾಗಿತ್ತು.




    #nation #national
    Previous Articleಮಣಿಪಾಲ: ಮರಕ್ಕೆ ಬುಲೆಟ್ ಬೈಕ್ ಡಿಕ್ಕಿ; 21 ವರ್ಷದ ಯುವಕ ದಾರುಣ ಸಾವು
    Next Article ಪ್ರಕಾಶ್ ರಾಜ್ ವೋಟರ್ ಐಡಿ ರದ್ದು; ಚುನಾವಣಾ ಆಯೋಗದ ವಿರುದ್ಧ ನಟನ ಆಕ್ರೋಶ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.