Close Menu
    What's Hot

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಪಾಕಿಸ್ತಾನಿ ಉಗ್ರ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕ ಆರೋಪ; ಕಲಬುರಗಿಯಲ್ಲಿ 23 ವರ್ಷದ ಕೂಲಿ ಕಾರ್ಮಿಕ ಅರೆಸ್ಟ್
    ಅಂತರಾಷ್ಟ್ರೀಯ

    ಪಾಕಿಸ್ತಾನಿ ಉಗ್ರ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕ ಆರೋಪ; ಕಲಬುರಗಿಯಲ್ಲಿ 23 ವರ್ಷದ ಕೂಲಿ ಕಾರ್ಮಿಕ ಅರೆಸ್ಟ್

    adminBy adminAugust 14, 2026No Comments1 Min Read

    ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ದೇಶವಿರೋಧಿ ಪೇಜ್‌ಗಳು ಹಾಗೂ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮಹಮ್ಮದ್ ಸಮೀರ್ (23) ಎಂಬಾತನನ್ನು ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದರು. ಮೂಲತಃ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯವನಾದ ಈತ, ಕಳೆದ ಕೆಲವು ತಿಂಗಳುಗಳಿಂದ ಕಲಬುರಗಿಯಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ನಡೆಸಿದ ವೇಳೆ ಬೆಚ್ಚಿಬೀಳಿಸುವ ರೋಚಕ ಹಾಗೂ ಆಘಾತಕಾರಿ ಮಾಹಿತಿಗಳು ಬೆಳಕಿಗೆ ಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

    ಆರೋಪಿ ಸಮೀರ್ ಭಾರತದಲ್ಲಿದ್ದುಕೊಂಡೇ ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ವಾಟ್ಸಪ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳನ್ನು ನಿರ್ವಹಿಸುತ್ತಿದ್ದ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳಿಗೆ ಸೇರಿದ ಅಬೀದ್ ಜಟ್ ಹಾಗೂ ಶಹಜಾದ್ ಭಟ್ಟಿ ಎಂಬ ಹ್ಯಾಂಡ್ಲರ್‌ಗಳ ಜೊತೆ ಈತ ನಿರಂತರ ಸಂಪರ್ಕದಲ್ಲಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈತ ‘ವೆಮನ್ ಮತ್ತು ಜಟ್ 333’ ಹಾಗೂ ‘ರಾಣಾ ಭಾಯ್ 333’ ಸೇರಿದಂತೆ ಹಲವು ದೇಶವಿರೋಧಿ ಮತ್ತು ಮತೀಯ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ವಾಟ್ಸಪ್ ಗ್ರೂಪ್‌ಗಳಲ್ಲಿ ಸಕ್ರಿಯ ಸದಸ್ಯನಾಗಿದ್ದ.

    ಪೊಲೀಸರು ಸಮೀರ್‌ನ ಮೊಬೈಲ್ ವಶಪಡಿಸಿಕೊಂಡು ಡಿಜಿಟಲ್ ಫೋರೆನ್ಸಿಕ್ ತನಿಖೆಗೆ ಒಳಪಡಿಸಿದಾಗ, ಭಾರತ ವಿರೋಧಿ ಪ್ರಚೋದನಾತ್ಮಕ ವಿಡಿಯೋಗಳು ಪತ್ತೆಯಾಗಿವೆ. ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ನಕ್ಷೆಯಿಂದ ಹೊರಗಿಟ್ಟು, ಅದನ್ನು ಪಾಕಿಸ್ತಾನದ ಭೂಭಾಗಕ್ಕೆ ಜೋಡಿಸಿ ಚಿತ್ರಿಸಲಾಗಿರುವ ತಂಟೆಯುಕ್ತ ವಿಡಿಯೋಗಳು ಈತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ. ದೇಶದ ಅಖಂಡತೆಗೆ ಧಕ್ಕೆ ತರುವ ಮತ್ತು ಸಮಾಜದಲ್ಲಿ ಶಾಂತಿ ಕದಡುವಂತಹ ವಿಷಯಗಳನ್ನು ಈತ ಶೇರ್ ಮಾಡುತ್ತಿದ್ದ.

    ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌ಡಿ ಅವರ ಮಾರ್ಗದರ್ಶನದಲ್ಲಿ ತಾಂತ್ರಿಕ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಮೂಲಕ ಈ ಜಾಲವನ್ನು ಪತ್ತೆಹಚ್ಚಲಾಗಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 113(3) (ಭಯೋತ್ಪಾದನಾ ಕೃತ್ಯ) ಹಾಗೂ ಸೆಕ್ಷನ್ 197 (ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿರುವುದರಿಂದ ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ರವಾನಿಸಲಾಗಿದ್ದು, ಹೆಚ್ಚಿನ ವಿಚಾರಣೆ ಕಾಯ್ದಿರಿಸಲಾಗಿದೆ.




    #crime #karnataka International
    Previous Articleಲಂಚ ಸ್ವೀಕರಿಸುತ್ತಿದ್ದ ಹಳೇಬೀಡು PSI ಲೋಕಾಯುಕ್ತ ಬಲೆಗೆ; ₹20 ಸಾವಿರ ಜಪ್ತಿ
    Next Article ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿ ಹೆಸರಲ್ಲಿ ಕಿರುಕುಳ; ನಿರಂತರ ಹಿಂಬಾಲಿಸಿ ಕೊಲೆ ಬೆದರಿಕೆ ಆರೋಪ, ಯುವಕನ ವಿರುದ್ಧ ಪ್ರಕರಣ ದಾಖಲು

    Related Posts

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.