Close Menu
    What's Hot

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸರಣಿ ಅತ್ಯಾಚಾರ-ಪೊಲೀಸ್​​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು; 7 ಜನರ ಬಂಧನ
    ಅಪರಾಧ

    ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸರಣಿ ಅತ್ಯಾಚಾರ-ಪೊಲೀಸ್​​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು; 7 ಜನರ ಬಂಧನ

    adminBy adminAugust 15, 2026No Comments2 Mins Read

    ಗದಗ: ಮಾನಸಿಕ ಅಸ್ವಸ್ಥ ಯುವತಿಯನ್ನು  ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದಗದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಎಸಗಿದ ಮತ್ತು ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು ಏಳು ಜನರನ್ನು ಗದಗ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಹಣದ ಆಮಿಷ: ದೂರು ನೀಡದಂತೆ ಜೀವಬೆದರಿಕೆ

    ಗದಗದ ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬ್ಬೀರಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವವರು ಯುವತಿಯನ್ನು ಪ್ರತ್ಯೇಕ ನಿರ್ಜನ ಪ್ರದೇಶ ಹಾಗೂ ಮನೆಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಯುವತಿ ಮೂರು ತಿಂಗಳ ಗರ್ಭಿಣಿಯಾದಾಗ ಈ ನೀಚ ಕೃತ್ಯ ಪೋಷಕರಿಗೆ ತಿಳಿದಿದೆ. ಈ ವೇಳೆ ಆರೋಪಿಗಳು ಬಡ ಕುಟುಂಬಕ್ಕೆ ಹಣದ ಆಮಿಷವೊಡ್ಡಿ, ದೂರು ನೀಡದಂತೆ ಜೀವಬೆದರಿಕೆ ಹಾಕಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ.

    ಅಲ್ಲದೆ, ಲಕ್ಷ್ಮೇಶ್ವರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಆರ್​ಎಂಪಿ ವೈದ್ಯ ಡಾ. ನಾಗರಾಜ್ ಕಮತರ, ಶಿಗ್ಲಿ ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ರೇಖಾ ಶಿರಹಟ್ಟಿ ಹಾಗೂ ಸಂದೀಪ್ ಎಂಬುವವರ ನೆರವಿನಿಂದ 10 ಗರ್ಭಪಾತ ಮಾತ್ರೆಗಳನ್ನು ನೀಡಿ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾರೆ.

    ಗರ್ಭಪಾತ ಕೃತ್ಯಕ್ಕೆ ಸಾಥ್​ ನೀಡಿದವರ ವಿರುದ್ಧವೂ ಎಫ್‌ಐಆರ್

    ಈ ಅಕ್ರಮ ಗರ್ಭಪಾತ ಕೃತ್ಯಕ್ಕೆ ಗದಗ ಅಂಜುಮನ್ ಅಧ್ಯಕ್ಷ ಅನ್ವರ್ ಬಾಗೇವಾಡಿ, ಕಾರ್ಯದರ್ಶಿ ಅಲ್ತಾಫ್ ಕೊಪ್ಪಳ ಹಾಗೂ ಎಸ್​ಡಿಪಿಐ ಮುಖಂಡ ಬಿಲಾಲ್ ಗೋಕಾವಿ ಸಾಥ್ ನೀಡಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದು, ಈ ಮೂವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ದೂರು ದಾಖಲಿಸಿಕೊಂಡ ಗದಗ ಮಹಿಳಾ ಠಾಣೆ ಸಿಪಿಐ ಜೂಲಕಟ್ಟಿ ತನಿಖೆ ನಡೆಸಿ, ನಾಲ್ವರು ಆರೋಪಿಗಳು ಸೇರಿದಂತೆ ಅಕ್ರಮ ಗರ್ಭಪಾತಕ್ಕೆ ನೆರವಾದ ವೈದ್ಯ, ನರ್ಸ್ ಸೇರಿ ಏಳು ಜನರ ಹೆಡೆಮುರಿ ಕಟ್ಟಿದ್ದಾರೆ.

    ಯಾರನ್ನೂ ಬಿಡಲ್ಲ: ಎಸ್​​ಪಿ ವರಿಷ್ಠಾಧಿಕಾರಿ ರೋಹನ್ ಖಡಕ್​​ ಎಚ್ಚರಿಕೆ

    ಇನ್ನು ವೈದ್ಯರ ಅಧಿಕೃತ ಚೀಟಿ ಇಲ್ಲದೆ ಗರ್ಭಪಾತದ ಮಾತ್ರೆಗಳನ್ನು ಮಾರಾಟ ಮಾಡಿದ ಮೆಡಿಕಲ್ ಶಾಪ್ ಮಾಲೀಕನ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ. ಜೊತೆಗೆ ಬಂಧಿತ ಸ್ಟಾಫ್ ನರ್ಸ್ ರೇಖಾ ಅಕ್ರಮ ಗರ್ಭಪಾತ ದಂಧೆಯಲ್ಲಿ ತೊಡಗಿದ್ದಳೇ ಎಂಬ ಬಗ್ಗೆಯೂ ಪೊಲೀಸರು ಆಕೆಯ ಹಿನ್ನೆಲೆ ಕೆದಕುತ್ತಿದ್ದಾರೆ. ‘ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದವರು, ರಾಜಿ ಪಂಚಾಯಿತಿ ಮಾಡಿದವರು ಸೇರಿದಂತೆ ಯಾವುದೇ ಪ್ರಭಾವಿಗಳಿದ್ದರೂ ಯಾರನ್ನೂ ಬಿಡುವುದಿಲ್ಲ’ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.




    #crime #karnataka
    Previous Articleಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ರಾಷ್ಟ್ರಧ್ವಜಕ್ಕೆ ಅಗೌರವ ಆರೋಪ, ವ್ಯಕ್ತಿ ಬಂಧನ
    Next Article ಮಂಗಳೂರು KFCಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ; ಹಳೆಯ ಚಿಕನ್ ಸ್ಟಾಕ್ ಪತ್ತೆ, 4 ಮಾದರಿ ಸಂಗ್ರಹ

    Related Posts

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಎಂಆರ್‌ಪಿಎಲ್ ಸ್ಫೋಟ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ; ಕಾರ್ಗೊ ಗೇಟ್ ಬಳಿ ಬೃಹತ್ ಧರಣಿ

    October 1, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.