Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»‘ಮೊಬೈಲ್ ಬಳಸಬೇಡ, ತಡವಾಗಿ ಬರಬೇಡ’ ಎಂದ ಅಜ್ಜ; ದ್ವೇಷದಿಂದ 13ರ ಬಾಲಕಿ ಸೇರಿ ನಾಲ್ವರರಿಂದ ಕೊಲೆ
    ಅಪರಾಧ

    ‘ಮೊಬೈಲ್ ಬಳಸಬೇಡ, ತಡವಾಗಿ ಬರಬೇಡ’ ಎಂದ ಅಜ್ಜ; ದ್ವೇಷದಿಂದ 13ರ ಬಾಲಕಿ ಸೇರಿ ನಾಲ್ವರರಿಂದ ಕೊಲೆ

    adminBy adminAugust 18, 2026No Comments1 Min Read

    ಆಲಪ್ಪುಳ (ಕೇರಳ) : ಮೊಬೈಲ್ ಫೋನ್ ಅತಿಯಾಗಿ ಬಳಸಬೇಡ ಹಾಗೂ ತಡವಾಗಿ ಮನೆಗೆ ಬರಬೇಡ ಎಂದು ಗದರಿಸಿದ್ದಕ್ಕೆ ಅಜ್ಜನ ಮೇಲಿದ್ದ ದ್ವೇಷದಿಂದ, 13 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಿಯಕರ ಹಾಗೂ ಇತರ ಹದಿಹರೆಯದ ಸ್ನೇಹಿತರ ಜೊತೆ ಸೇರಿ ಅಜ್ಜನನ್ನೇ ಭೀಕರವಾಗಿ ಹತ್ಯೆ ಮಾಡಿಸಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯ ಕರುವತ್ತದಲ್ಲಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 13 ವರ್ಷದ ಮೊಮ್ಮಗಳು ಸೇರಿದಂತೆ ನಾಲ್ವರು ಹದಿಹರೆಯದವರನ್ನು ಪೊಲೀಸರು ಬಂಧಿಸಿದ್ದಾರೆ. ಕರುವತ್ತದ ಬಾಡಿಗೆ ಮನೆಯಲ್ಲಿದ್ದ 65 ವರ್ಷದ ಶಿವನ್‌ಕುಟ್ಟಿ ಚೆಟ್ಟಿಯಾರ್ ಕೊಲೆಯಾದ ದುರ್ದೈವಿ. ಬಾಲಕಿಯ ತಾಯಿ ತನ್ನ ಎರಡನೇ ಮಗುವಿನ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ, ಅಜ್ಜ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಬಾಲಕಿ ತನ್ನ ಪ್ರಿಯಕರನಿಗೆ ಕರೆ ಮಾಡಿ ಹತ್ಯೆಗೆ ಸಂಚು ರೂಪಿಸಿದ್ದಳು. ಮನೆಗೆ ಕಳ್ಳರು ನುಗ್ಗಿದ್ದಾರೆ ಎಂದು ಬಿಂಬಿಸಲು ವೀಡಿಯೊ ಕಾಲ್ ಮೂಲಕ ಪ್ರಿಯಕರ ಹಾಗೂ ಆತನ ಸ್ನೇಹಿತರಿಗೆ ಮನೆಯ ಪ್ರವೇಶದ್ವಾರ, ಬಾಗಿಲು ಹಾಗೂ ಅಜ್ಜನ ಚಲನವಲನದ ಮಾಹಿತಿ ನೀಡಿದ್ದಳು.

    ಭಾನುವಾರ ರಾತ್ರಿ ವೆಂಟಿಲೇಟರ್ ಮೂಲಕ ಮನೆಗೆ ನುಗ್ಗಿದ ಹದಿಹರೆಯದ ಯುವಕರು, ಎಚ್ಚರಗೊಂಡ ಅಜ್ಜನ ಮೇಲೆ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಂದಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ ಕಳ್ಳರು ತಂದ ಆಯುಧ ಅಥವಾ ಹಗ್ಗಗಳ ಬದಲಿಗೆ ಮನೆಯಲ್ಲಿದ್ದ ಲುಂಗಿ-ಬಟ್ಟೆಗಳಿಂದ ಅಜ್ಜನನ್ನು ಕಟ್ಟಿಹಾಕಿರುವುದು ಅನುಮಾನ ಮೂಡಿಸಿತು. ಜೊತೆಗೆ ಬಾಲಕಿಯ ಕೋಣೆ ಮಾತ್ರ ಸುಸ್ಥಿತಿಯಲ್ಲಿದ್ದು, ಉಳಿದ ರೂಮ್ ಅಸ್ತವ್ಯಸ್ತವಾಗಿದ್ದದ್ದು ಹಾಗೂ ಬಾಲಕಿಯ ನೀಡಿದ ವಿರೋಧಾತ್ಮಕ ಹೇಳಿಕೆಗಳು ಪೊಲೀಸರ ಅನುಮಾನವನ್ನು ಹೆಚ್ಚಿಸಿದವು.
    ಬಾಲಕಿಯ ಕಾಲ್ ಹಿಸ್ಟರಿ ಪರಿಶೀಲಿಸಿದಾಗ ಅಸಲಿ ಕಹಾನಿ ಬಯಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. “ತನ್ನ ಅಜ್ಜನನ್ನು ಕೊಲ್ಲಲೇಬೇಕು ಎಂಬ ಸ್ಪಷ್ಟ ಸಂದೇಶವನ್ನು ಬಾಲಕಿ ನೀಡಿದ್ದಳು. ದೋಚಿದ ಹಣದಲ್ಲಿ ಸ್ನೇಹಿತನ ಮದುವೆಗೆ ಉಡುಗೊರೆ ನೀಡಲು ಹಾಗೂ ವೈಯಕ್ತಿಕ ವೆಚ್ಚಕ್ಕೆ ಬಳಸಲು ಯೋಜಿಸಿದ್ದರು” ಎಂದು ಆಲಪ್ಪುಳ ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿಷ್ಣು ಪ್ರತೀಪ್ ಟಿಕೆ ತಿಳಿಸಿದ್ದಾರೆ.




    #crime #nation #national
    Previous Articleಹರಿಯಾಣದಲ್ಲಿ ಯುವಕನನ್ನು ಭೇಟಿಯಾಗಿದ್ದಾಳೆಂಬ ಅನುಮಾನ; 14 ವರ್ಷದ ಬಾಲಕಿ ಹತ್ಯೆ, ತಂದೆ-ಅಜ್ಜನ ಬಂಧನ
    Next Article ಮರಣದಂಡನೆ ಜಾರಿ ವಿಧಾನ ಬದಲಾವಣೆಗೆ ಸುಪ್ರೀಂ ಕೋರ್ಟ್ ನಕಾರ; ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.