Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»‘ನನ್ನ ಸಾವಿಗೆ ಅವರೇ ಕಾರಣ’ ಡಿಸಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನೌಕರನ ಪತ್ರದಲ್ಲಿ ಶಾಕಿಂಗ್ ಆರೋಪ
    ಅಪರಾಧ

    ‘ನನ್ನ ಸಾವಿಗೆ ಅವರೇ ಕಾರಣ’ ಡಿಸಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನೌಕರನ ಪತ್ರದಲ್ಲಿ ಶಾಕಿಂಗ್ ಆರೋಪ

    adminBy adminAugust 19, 2026No Comments1 Min Read

    ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೌಕರನೊಬ್ಬ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಇದೀಗ ಆಘಾತಕಾರಿ ತಿರುವು ಸಿಕ್ಕಿದೆ. ನೆರೆಹೊರೆಯವರಿಂದ ಮಾನಸಿಕ ಕಿರುಕುಳ ಹಾಗೂ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು ಶಿವಪ್ರಸಾದ್ ಪಾಟೀಲ್ ಎಂದು ಗುರುತಿಸಲಾಗಿದೆ. ಬೆಳಗಾವಿಯ ರಾಮತೀರ್ಥನಗರ ಮೂಲದ ಶಿವಪ್ರಸಾದ್ ಸದ್ಯ ಧಾರವಾಡದ ಕಲ್ಯಾಣ ನಗರದಲ್ಲಿ ವಾಸವಾಗಿದ್ದು, ಖಾದಿ ಗ್ರಾಮೋದ್ಯೋಗ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಡಿಸಿ ಕಚೇರಿ ಸಭಾಂಗಣದಲ್ಲಿದ್ದ ವೇಳೆ ಅವರು ಚಾಕುವಿನಿಂದ ಕೈ ಕೊಯ್ದುಕೊಂಡಿದ್ದು, ತಕ್ಷಣ ಸಿಬ್ಬಂದಿ ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಸ್ನೇಹದ ಹೆಸರಿನಲ್ಲಿ ಶುರುವಾಯಿತೇ ಕಿರುಕುಳ?

    ಶಿವಪ್ರಸಾದ್ ವಾಸವಿದ್ದ ಕೊಠಡಿಯ ಪಕ್ಕದಲ್ಲಿ ವಾಸಿಸುತ್ತಿದ್ದ ಸಂಗಪ್ಪ ತೇಲಿ, ನೇತ್ರಾ ಪೂಜಾರ್ ಹಾಗೂ ಸುಮಾ ಪೂಜಾರ್ ಎಂಬವರೊಂದಿಗೆ ಆರಂಭದಲ್ಲಿ ಸ್ನೇಹ ಬೆಳೆದಿತ್ತು ಎನ್ನಲಾಗಿದೆ. ಬಳಿಕ ಅವರು ಶಿವಪ್ರಸಾದ್ ಅವರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡುತ್ತಿದ್ದರು ಹಾಗೂ ಅವರ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

    ಈ ನಿರಂತರ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಶಿವಪ್ರಸಾದ್, ಬದುಕಲು ಸಾಧ್ಯವಿಲ್ಲ ಎಂಬ ಸ್ಥಿತಿಗೆ ತಲುಪಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಮ್ಮ ಸಾವಿಗೆ ಮೂವರೇ ಕಾರಣ ಎಂದು ಉಲ್ಲೇಖಿಸಿ, ತಮ್ಮ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ.

    ಪತ್ರವನ್ನು ಕಚೇರಿಯ ಅಧಿಕೃತ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಪೋಸ್ಟ್ ಮಾಡಿದ ಬಳಿಕ ಶಿವಪ್ರಸಾದ್ ಡಿಸಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆ ಬಳಿಕ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಪತ್ರದಲ್ಲಿ ಹೆಸರಿಸಲಾದ ವ್ಯಕ್ತಿಗಳ ವಿರುದ್ಧದ ಆರೋಪಗಳು, ಖಾಸಗಿ ವಿಡಿಯೋ ಮೂಲಕ ಬೆದರಿಕೆ ಹಾಗೂ ಮಾನಸಿಕ ಕಿರುಕುಳದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.




    #crime #karnataka
    Previous Articleಸಮೋಸಾ ವಿಚಾರಕ್ಕೆ ಶುರುವಾದ ಜಗಳ; ವಕೀಲನ ಮೇಲೆ ಹಲ್ಲೆ, ಐವರ ವಿರುದ್ಧ ಕೇಸ್
    Next Article ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು, 6 ಜನ ಗಂಭೀರ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.