Close Menu
    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಡ್ರಗ್ಸ್ ಜಾಲಕ್ಕೆ ಪೊಲೀಸರ ಶಾಕ್; MDMA, ಗಾಂಜಾ ಮಾರಾಟ ಆರೋಪಿಗಳ ಬಂಧನ
    ಅಪರಾಧ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲಕ್ಕೆ ಪೊಲೀಸರ ಶಾಕ್; MDMA, ಗಾಂಜಾ ಮಾರಾಟ ಆರೋಪಿಗಳ ಬಂಧನ

    adminBy adminAugust 20, 2026No Comments1 Min Read

    ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

    ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ

    ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಕೇರಳ ರಾಜ್ಯದ ಮಂಜೇಶ್ವರದ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಬಂಧಿಸಿದ್ದಾರೆ.

    ಆರೋಪಿಯಿಂದ ₹1,36,000 ಮೌಲ್ಯದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಸೇರಿದಂತೆ ಒಟ್ಟು ₹2,94,500 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಪ್ರಕರಣ 2: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು – ಆಯುರ್ವೇದ ಥೆರಪಿಸ್ಟ್ ಅರೆಸ್ಟ್

    ಇನ್ನೊಂದು ಪ್ರಕರಣದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಕೇರಳದ ಕಣ್ಣೂರು ಮೂಲದ ಹಾಗೂ ಕೊಂಚಾಡಿ ನಿವಾಸಿ, ಆಯುರ್ವೇದ ಕ್ಲಿನಿಕ್ ಥೆರಪಿಸ್ಟ್ ನಿತಿನ್ ಕೃಷ್ಣನ್ (27) ಎಂಬಾತನನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 17 ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆಶ್ವಿನ್ ಕ್ಸೇವಿಯರ್ ನೀಡಿದ ಸುಳಿವು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.
    ಆರೋಪಿ ನಿತಿನ್‌ನಿಂದ ₹60,000 ಮೌಲ್ಯದ 1.206 ಕೆ.ಜಿ. ಗಾಂಜಾ, ಕೆಟಿಎಂ (KTM) ಬೈಕ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

    #crime #dakshinakannada
    Previous Articleಧಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಸಚಿನ್ ಅಂದೂರೆಗೆ ಜಾಮೀನು; ಜೀವಾವಧಿ ಶಿಕ್ಷೆ ಅಮಾನತು
    Next Article TC ನೀಡಿ ಶಾಲೆಯಿಂದ ವಜಾ; ದ್ವೇಷಕ್ಕೆ ಪ್ರಾಂಶುಪಾಲೆಯನ್ನೇ ಹತ್ಯೆಗೈದ 10ನೇ ತರಗತಿ ವಿದ್ಯಾರ್ಥಿಗಳು

    Related Posts

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.