ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ.
ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಊ ಯಶೋಧಾ ಬಾಯಿ (51) ಮೃತರು. ಕಾರಿನಲ್ಲಿದ್ದ ಸೌಂದರ್ಯ, ಸಿಂಧು ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರಿನಿಂದ ದಾವಣಗೆರೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತಿರುವ ನಿಸರ್ಗ ಡಾಬಾ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








