ಪುತ್ತೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ದರ್ಬೆಯಲ್ಲಿ ವರ್ತಕರೊಬ್ಬರ ಮೇಲೆ ನಡೆದ ದಾಳಿ, ಪೊಲೀಸರ ಸಮ್ಮುಖದಲ್ಲೇ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗೆ ಮಾರಣಾಂತಿಕ ಹಲ್ಲೆ ನಡೆದ ಆರೋಪಗಳ ಹಿನ್ನೆಲೆಯಲ್ಲಿ ಈ ಕರೆ ನೀಡಿದೆ ಎಂದು ವರದಿಯಾಗಿದೆ .

ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿರುವ ವೇದಿಕೆ, ನಗರದಲ್ಲಿ ವರ್ತಕರ ಹಿತರಕ್ಷಣೆ, ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುತ್ತೂರಿನ ಎಲ್ಲ ಸಮಾಜ ಬಾಂಧವರು ಹಾಗೂ ನಾಗರಿಕರು ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಸಹಕರಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ ಎಂದು ವರದಿಯಾಗಿದೆ.








