ಪುತ್ತೂರು,: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಾಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:103/2026, ಕಲಂ: 353(2) ಭಾರತೀಯ ನ್ಯಾಯ ಸಂಹಿತೆ (BNS), 2023 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.








